Quantcast

‘ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

bookಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ 2016 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.

ಕಲಬುರಗಿ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ಈ ಪ್ರಶಸ್ತಿಯನ್ನು ಸ್ಥಾಪಿಸಿದ್ದು ಅಕ್ಟೋಬರ್ 1, 2015 ರಿಂದ ಸೆಪ್ಟೆಂಬರ್ 30, 2016 ರವರೆಗೆ ಪ್ರಕಟವಾದ ಕೃತಿಗಳನ್ನು ಕಳಿಸಬಹುದು .

ಅಮ್ಮ ಪ್ರಶಸ್ತಿಗೆ ಈಗ 16 ರ ಸಂಭ್ರಮ.

ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದಾಗಿದೆ. ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ 30 ಕೊನೆಯ ದಿನಾಂಕ.

ಕೃತಿಗಳನ್ನು ಕಳುಹಿಸಬೇಕಾದ ವಿಳಾಸ :

ಶ್ರೀಮತಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರು,

ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ಮುನ್ನೂರು ಪ್ರತಿಷ್ಠಾನ

‘ಅಮ್ಮ ನಿಲಯ’, ರಾಮಚಂದ್ರ ಲೇಔಟ್, ಜಿ. ಕೆ. ಕ್ರಾಸ್, ಊಡಗಿ ರಸ್ತೆ,

ಸೇಡಂ-585 222. ಕಲಬುರಗಿ ಜಿಲ್ಲೆ.

ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: 9731666052 ಸಂಪರ್ಕಿಸಬಹುದು.

Add Comment

Leave a Reply