Quantcast

ಕವಿ ಮಹಾಂತೇಶ ಪಾಟೀಲ್ ಗೆ ವಿಭಾ ಸಾಹಿತ್ಯ ಪ್ರಶಸ್ತಿ

vibha

2016 ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಮಹಾಂತೇಶ ಪಾಟೀಲ ಅವರ ‘ಒಡೆದ ಬಣ್ಣದ ಚಿತ್ರಗಳು’ ಎಂಬ ಕವನ ಸಂಕಲನದ ಹಸ್ತಪ್ರತಿಯನ್ನು ಆಯ್ಕೆ ಮಾಡಲಾಗಿದೆ.

ವಿಮರ್ಶಕರುಗಳಾದ ಡಾ. ಕೆ ಪಿ ಸುರೇಶ್ ಹಾಗೂ ಡಾ. ಎಲ್ ಸಿ ಸುಮಿತ್ರಾ ಅವರು ತೀರ್ಪುಗಾರರಾಗಿದ್ದರು. ಪ್ರಶಸ್ತಿ ವಿಜೇತ ಕೃತಿಯನ್ನು ಗದುಗಿನ ಲಡಾಯಿ ಪ್ರಕಾಶನ ಪ್ರಕಟಿಸುತ್ತಿದ್ದು, ಈ ಪುರಸ್ಕಾರವು ಐದು ಸಾವಿರ ನಗದು ಹಾಗೂ ಪ್ರಶಸ್ತಿ ಪಲಕವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ಮೂಲತಃ ಮುಧೋಳದ ಡಾ. ಮಹಾಂತೇಶ ಪಾಟೀಲ ಅವರು  ಕ ನರ್ಾಟಕ ವಿ.ವಿ ಯಲ್ಲಿ ಕನ್ನಡ ಎಂ.ಎ ಪದವಿ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ‘ದಶಕದ ಕತೆಗಳಲ್ಲಿ ಪರಂಪರೆ ಮತ್ತು ಆಧುನಿಕತೆಯ ಸ್ವರೂಪ’ ಎಂಬ ವಿಷಯವನ್ನು ಕುರಿತು ಸಂಶೋಧನೆ ಮಾಡಿದ್ದಾರೆ.

ಪ್ರಸ್ತುತ ಕೊಡಗಿನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Add Comment

Leave a Reply