Quantcast

ಛಂದ ಪುಸ್ತಕ ಹಸ್ತಪ್ರತಿ ಆಹ್ವಾನ

chanda

ಕಳೆದ ಹನ್ನೆರಡು ವರುಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ ಈ ಸಾಲಿನ ‘ಛಂದ ಪುಸ್ತಕ’ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.

ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 8 ಪ್ರಕಟಿತ ಅಥವಾ ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಕಳುಹಿಸಬೇಕು.

ಆಯ್ಕೆಯಾದ ಕತೆಗಾರರಿಗೆ ಇಪ್ಪತ್ತೈದು ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾ ಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ. ಈ ಪುಸ್ತಕವನ್ನು 2017ರ ಫೆಬ್ರವರಿ 12ರಂದು ಬೆಂಗಳೂರಿನಲ್ಲಿ ನಡೆಯವ ಸುಂದರ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುವುದು. ಹಸ್ತಪ್ರತಿಯನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ. ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿರ್ಧಾರ.

ಕತೆಗಳನ್ನು ಕಳಿಸಬೇಕಾದ ವಿಳಾಸ:
ಛಂದ ಪುಸ್ತಕ, c/o ವಸುಧೇಂದ್ರ, ಐ-004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು-560 076 (ದೂ. 98444 22782)

ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ: ಡಿಸೆಂಬರ್ 15, 2016
ಹೆಚ್ಚಿನ ವಿವರಗಳಿಗೆ: vas123u@rocketmail.com

One Response

  1. Sangeeta Kalmane
    November 26, 2016

Add Comment

Leave a Reply

%d bloggers like this: