‘ಛಂದ ಪುಸ್ತಕ’ ಹಸ್ತಪ್ರತಿ ಆಹ್ವಾನ

ಕಳೆದ ಹದಿಮೂರು ವರುಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ ಈ ಸಾಲಿನ ‘ಛಂದ ಪುಸ್ತಕ’ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.

ಇದುವರೆಗೂ ಒಂದೂ ಕಥಾ ಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ.

ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಗಿಲ್ಲ.

ತಮಗೆ ಉತ್ತಮವೆನಿಸಿದ ಸುಮಾರು 8 ಪ್ರಕಟಿತ ಅಥವಾ ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ, ಕೊರಿಯರ್ ಮೂಲಕ ಕಳುಹಿಸಬೇಕು. ಇ-ಮೇಲ್ ಮುಖಾಂತರ ಕತೆಗಳನ್ನು ಸ್ವೀಕರಿಸಲಾಗುವುದಿಲ್ಲ.

ಆಯ್ಕೆಯಾದ ಕತೆಗಾರರಿಗೆ ಮೂವತ್ತು ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ.

ಈ ಪುಸ್ತಕವನ್ನು 2018ರ ಜೂನ್ 10 ರಂದು ಬೆಂಗಳೂರಿನಲ್ಲಿ ನಡೆಯವ ಸುಂದರ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುವುದು.

ಹಸ್ತಪ್ರತಿಯನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ.

ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿರ್ಧಾರ.

ಕತೆಗಳನ್ನು ಕಳಿಸಬೇಕಾದ ವಿಳಾಸ:
ಛಂದ ಪುಸ್ತಕ, c/o ವಸುಧೇಂದ್ರ, ಐ-004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು–560 076 (ದೂ. 98444 22782)

ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ: ಏಪ್ರಿಲ್ 30, 2016

ಹೆಚ್ಚಿನ ವಿವರಗಳಿಗೆ: vas123u@rocketmail.com

Leave a Reply