ಪ್ರಹ್ಲಾದ ಅಗಸನಕಟ್ಟೆ ಸ್ಮರಣಾರ್ಥ ಕಥಾಸ್ಪರ್ಧೆ

ಡಾ. ಪ್ರಹ್ಲಾದ ಅಗಸನಕಟ್ಟೆ ಸ್ಮರಣಾರ್ಥ

ವಿದ್ಯಾರ್ಥಿ/ನಿ ಕಥಾಸ್ಪರ್ಧೆ

ಹುಬ್ಬಳ್ಳಿಯ ‘ಅಕ್ಷರ ಸಾಹಿತ್ಯ ವೇದಿಕೆ’ಯು ಕನ್ನಡದ ಅನನ್ಯ ಕಥೆಗಾರ ಡಾ. ಪ್ರಹ್ಲಾದ ಅಗಸನಕಟ್ಟೆಯವರ ನೆನಪಿಗೆ, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ಕಥಾ ಸ್ಪರ್ಧೆಯನ್ನು ಏರ್ಪಡಿಸಿದೆ. ಆಯ್ಕೆಯಾದ ಕಥೆಯೊಂದಕ್ಕೆ ರೂ. 5000/- ನಗದು ಬಹುಮಾನವನ್ನು ಶ್ರೀಮತಿ ವಿಜಯಾ ಅಗಸನಕಟ್ಟೆಯವರು ನೀಡಲಿದ್ದಾರೆ.

ಪ್ರಹ್ಲಾದರ ಹುಟ್ಟುಹಬ್ಬದ ದಿನವಾದ ಜೂನ್ 3 ರಂದು ಬಹುಮಾನ ವಿತರಣೆ ಹಾಗೂ ಪ್ರಹ್ಲಾದರ ಸಾಹಿತ್ಯದ ಕುರಿತಾದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗುವುದು ಎಂದು ‘ಅಕ್ಷರ ಸಾಹಿತ್ಯ ವೇದಿಕೆ, ಹುಬ್ಬಳ್ಳಿ’ ಪರವಾಗಿ ಸಾಹಿತಿ ಸುನಂದಾ ಕಡಮೆ ತಿಳಿಸಿದ್ದಾರೆ.

ವಿದ್ಯಾರ್ಥಿ, ವಿದ್ಯಾರ್ಥಿನಿಯರು 20 ಜನವರಿ 2019 ರೊಳಗೆ ತಮ್ಮ ಕಾಲೇಜಿನ ಪ್ರಾಚಾರ್ಯರಿಂದ ‘ನಮ್ಮ ಕಾಲೇಜಿನ ವಿದ್ಯಾರ್ಥಿ/ನಿ’ ಎಂಬ ದೃಢೀಕೃತ ಪ್ರಮಾಣ ಪತ್ರದೊಂದಿಗೆ, ತಮ್ಮ ಅಪ್ರಕಟಿತ ಸ್ವರಚಿತ ಕಥೆಯೊಂದನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಕಥೆ ಕಳುಹಿಸಬೇಕಾದ ವಿಳಾಸ :
ಡಾ. ಪ್ರಹ್ಲಾದ ಅಗಸನಕಟ್ಟೆ ಸ್ಮರಣಾರ್ಥ ವಿದ್ಯಾರ್ಥಿ/ನಿ ಕಥಾಸ್ಪರ್ಧೆ,

c/o ಸುನಂದಾ ಪ್ರಕಾಶ ಕಡಮೆ, # 90, ‘ನಾಗಸುಧೆ’ ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ, ಹುಬ್ಬಳ್ಳಿ- 580031, ದೂರವಾಣಿ : 9845779387

Leave a Reply