ಅಕಾಡೆಮಿ ಪುಸ್ತಕ ಬಹುಮಾನಕ್ಕೆ ಸಜ್ಜಾಗಿ..

ಬೆಂಗಳೂರು: ೨೦೦೯ನೆಯ ವರ್ಷದ ಅತ್ಯುತ್ತಮ ಕೃತಿಗಳಿಗೆ ಬಹುಮಾನ:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿವರ್ಷದಂತೆ ೨೦೦೯ನೆಯ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ಈ ಕೆಳಕಂಡ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಆಹ್ವಾನಿಸಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಶ್ರೇಷ್ಠವೆಂದು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. (ಜನವರಿ ೧-೧೯ ರಿಂದ ಡಿಸೆಂಬರ್ ೩೧-೨೦೦೯ ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು). ಕಾವ್ಯ (ವಚನಗಳು ಮತ್ತು ಹನಿಗವನಗಳು ಸೇರಿ), ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ), ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ಆತ್ಮಕಥೆ (ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನ), ಸಾಹಿತ್ಯ ವಿಮರ್ಶೆ (ಸಾಹಿತ್ಯ ಚರಿತ್ರೆ, ಸಾಹಿತ್ಯ ತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ), (ಪಿ. ಶ್ರೀನಿವಾಸರಾವ್ ದತ್ತಿನಿಧಿ ಬಹುಮಾನ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿಂಗ್, ವೈದ್ಯ, ಭೂ, ಖಗೋಳ, ಗೃಹವಿಜ್ಞಾನ, ಪರಿಸರ, ವಿದ್ಯುನ್ಮಾನ -ಇತ್ಯಾದಿ) ಮಾನವಿಕಗಳು: (ಇತಿಹಾಸ, ರಾಜಕೀಯ ಶಾಸ್ತ್ರ, ಸಮಾಜಶಾಸ್ತ್ರ, ಮಾನವಶಾಸ್ತ್ರ, ಮನ:ಶಾಸ್ತ್ರ, ಭಾಷಾಶಾಸ್ತ್ರ, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭಂಡಾರ ವಿಜ್ಞಾನ, ಸಮೂಹಸಂವಹನ, ಧಾರ್ಮಿಕ, ದಾರ್ಶನಿಕ), ಸಂಶೋಧನೆ (ಕನ್ನಡ ಭಾಷೆ ಮತ್ತು ಸಂಸ್ಕೃತಿಗಳಿಗೆ ಸಂಬಂಧಿಸಿದ ಸಂಶೋಧನೆ), ಅನುವಾದ-೧ (ಕಾದಂಬರಿ, ಕಾವ್ಯ, ಸಣ್ಣಕತೆ, ನಾಟಕ, ಲಲಿತಪ್ರಬಂಧ, ಪ್ರವಾಸ ಸಾಹಿತ್ಯ, ಜೀವನಚರಿತ್ರೆ-ಇತ್ಯಾದಿ ಸೃಜನಶೀಲ ಕೃತಿಗಳು), ಅನುವಾದ-೨ (ಶಾಸ್ತ್ರ ಸಾಹಿತ್ಯ, ಸಾಹಿತ್ಯ ವಿಮರ್ಶೆ -ಇತ್ಯಾದಿ ಸೃಜನೇತರ ಕೃತಿಗಳು), ಸಂಕೀರ್ಣ (ಯಾವುದೇ ಪ್ರಕಾರಕ್ಕೆ ಹೊಂದಿಕೊಳ್ಳದ ವಿಶಿಷ್ಟ ಕೃತಿಗಳನ್ನು ಈ ಪ್ರಕಾರದಲ್ಲಿ ಬಹುಮಾನಕ್ಕೆ ಪರಿಗಣಿಸಲಾಗುವುದು.) ಲೇಖಕರ ಮೊದಲ ಸ್ವತಂತ್ರ ಕೃತಿಗೆ ಬಹುಮಾನ:- (ಮಧುರಚೆನ್ನ ದತ್ತಿನಿಧಿ ಬಹುಮಾನ) ೨೦೦೯ ರಲ್ಲಿ ಪ್ರಕಟವಾದ ಹೊಸ ಬರಹಗಾರರ ಮೊದಲ ಸ್ವತಂತ್ರ ಕೃತಿಗೆ ಐದು ಸಾವಿರ ರೂಪಾಯಿಗಳ ಬಹುಮಾನ ಕೊಡಲಿದೆ. ಲೇಖಕರ ಮೊದಲ ಕೃತಿಯೆಂದು ಖಾತರಿಪಡಿಸುವ ದೃಢೀಕರಣ ಪತ್ರದೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ಕಳುಹಿಸಲು ಕೋರಲಾಗಿದೆ. ಕನ್ನಡದಿಂದ ಇಂಗ್ಲೀಷಿಗೆ ಅನುವಾದ (ಅಮೆರಿಕ ಕನ್ನಡ ದತ್ತನಿಧಿ ಬಹುಮಾನ) :- ಅಮೆರಿಕಾ ಕನ್ನಡಿಗರ ಹಾಗೂ ಕನ್ನಡ ಸಂಘಗಳ ಬಹುಮಾನ ಯೋಜನೆ ನಿಧಿಯ ವತಿಯಿಂದ ೨೦೦೯ನೇ ಸಾಲಿನಲ್ಲಿ ಕನ್ನಡದಿಂದ ಇಂಗ್ಲೀಷ್ ಭಾಷೆಗೆ ಅನುವಾದಗೊಂಡಿರುವ ಒಂದು ನೂರು ಪುಟಗಳಿಗೆ ಕಡಿಮೆಯಿಲ್ಲದ ಶ್ರೇಷ್ಠ ಸೃಜನಾತ್ಮಕ ಕೃತಿಗೆ ಐದು ಸಾವಿರ ರೂಪಾಯಿಗಳ ವಿಶೇಷ ಬಹುಮಾನವನ್ನು ನೀಡಲಾಗುವುದು. ಬಹುಮಾನಕ್ಕೆ ಪರಿಗಣಿಸಲ್ಪಡದ ಪುಸ್ತಕಗಳು:- ಮರು ಮುದ್ರಣವಾದ ಪುಸ್ತಕಗಳು, ಜಾನಪದ ಕೃತಿಗಳು, ಪದವಿಗಾಗಿ ಸಿದ್ದಪಡಿಸಿದ ಸಂಶೋಧನಾ ಗ್ರಂಥಗಳು, ಪಠ್ಯಪುಸ್ತಕಗಳು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳು ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ, ಬಹುಮಾನ ಪಡೆದವರ ಕೃತಿಗಳು, ಒಂದೇ ಪ್ರಕಾರದಲ್ಲಿ ಎರಡು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಅದೇ ಪ್ರಕಾರದಲ್ಲಿ ಮತ್ತೆ ಪರಿಗಣಿಸುವುದಿಲ್ಲ. ಮೇಲ್ಕಂಡ ಅವಧಿಯಲ್ಲಿ ಪ್ರಕಟವಾದ ಪುಸ್ತಕಗಳ ಒಂದೊಂದು ಸಾದಾ ಪ್ರತಿಯನ್ನು ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ೨ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨ ಇವರಿಗೆ ರಿಜಿಸ್ಟರ‍್ಡ್ ಅಂಚೆ, ಕೊರಿಯರ್ ಮೂಲಕ ಅಥವಾ ಖುದ್ದಾಗಿಯಾಗಲಿ ೨೦೧೦ ರ ಜೂನ್ ೩೦ ರೊಳಗೆ ತಲುಪಿಸಬೇಕಾಗಿ ಕೋರಿದೆ. ನಿಮ್ಮ ಕೃತಿಯು ಈ ಮೇಲೆ ತಿಳಿಸಿದ ೧೮ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದು ತಿಳಿಸಬೇಕೆಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ರವರು ತಿಳಿಸಿರುತ್ತಾರೆ]]>

‍ಲೇಖಕರು avadhi

June 2, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

3 ಪ್ರತಿಕ್ರಿಯೆಗಳು

 1. ಅಶೋಕವರ್ಧನ

  ವಾರ್ಷಿಕ ಬಟವಾಡೆಯ ಈ ಪ್ರಕ್ರಿಯೆ ಹೆಸರಿಗೆ ಬಹಳ ದೊಡ್ಡದೊಡ್ಡ ಎನ್ನಿಸುವ ಎಲ್ಲಾ (ಹುಟ್ಟಲಿರುವವನ್ನೂ ಸೇರಿಸಿ) ಅನುದಾನಿತ ಸಂಸ್ಥೆಗಳಿಗೆ ಅಂಟಿಕೊಂಡ ಅನಿಷ್ಠ. ಸಾರ್ವಜನಿಕ ಹಣದಲ್ಲಿ ನಡೆಯುವ ಈ ಹಬ್ಬ ಒಳ್ಳೆಯ ಬೆಳೆಯ ಹೆಸರಿನಲ್ಲಿ ಕೊಳೆಯನ್ನಷ್ಟೇ ಹೆಚ್ಚಿಸುತ್ತಿದೆ. ರಾಜಸತ್ತೆಯ ಕೆಟ್ಟ ಅನುಕರಣೆ ಪ್ರಜಾಸತ್ತೆಯಲ್ಲ ಎಂಬ ಎಚ್ಚರ ನಮೆಗೆಂದು ಬರುತ್ತದೋ – ತಲೆ ಚಚ್ಚಿಕೊಳ್ಳುವಂತಾಗುತ್ತದೆ!
  ಅಶೋಕವರ್ಧನ

  ಪ್ರತಿಕ್ರಿಯೆ
 2. CanTHee Rava

  sarkaaree prashasthigaLellavoo ondalla ondu reetiyalli masi baLidukondiruvudu nija. Academy prashasthigaLu oLLeya uddEsha hondive. Adannu ee hinde gaNya saahitigaLu geddiddaare. kelavu nagaNya (savakalu naaNya) vyakthigaLu parisThitiya laabha padedirivudu duradriShtakara. Academy echchettukoLLabEkide. vaarShika prashasthigaLu vaarShika ‘kurchi kaadirisuva’ prakriyeyaagadante nOdikoLLabEku.

  ಪ್ರತಿಕ್ರಿಯೆ
 3. muralidharan

  ¸ÀPÁðgÀzÀ F PÀÈ¥Á¥ÉÆövÀ £ÁlPÀ ªÀÄAqÀ½AiÀÄÄ ªÀiÁzsÀåªÀÄ ¸ÀªÀÄƺÀUÀ½AzÀ ¨É¼ÀQUÉ ¤®ÄèªÀ ¥ÀĸÀÛPÀUÀ¼À£ÀÄß £ÉÃgÀªÁV DAiÉÄÌ ªÀiÁqÀ¨ÉÃPÀÄ. ¯ÉÃRPÀgÉà ¥ÀĸÀÛPÀ PÀ¼ÀÄ»¹ ¥Àæ±À¹Û PÉÆr J£ÀߣÀĪÀÅ¢zÉAiÀįÁè. CzÀQÌAvÀ £ÀgÀPÀ ¨ÉÃgÉÆA¢®è.
  JA. «.ªÀÄÄgÀ½ÃzsÀgÀ£ï. §¼Áîj.

  ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: