‘ಅಮ್ಮ ಪ್ರಶಸ್ತಿ’ ಪ್ರಕಟ: ಕಿರಣ್ ಭಟ್, ಭಾರತಿ ಹೆಗಡೆ, ಸುರೇಶ ನಾಗಲಮಡಿಕೆ ಸೇರಿದಂತೆ 7 ಬರಹಗಾರರಿಗೆ ಪ್ರಶಸ್ತಿ

ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಯನ್ನು ಘೋಷಿಸಲಾಗಿದ್ದು ಭಾರತಿ ಹೆಗಡೆ, ಸುರೇಶ ನಾಗಲಮಡಿಕೆ, ಕೆ.ಎ.ದಯಾನಂದ, ಕಿರಣ್ ಭಟ್, ಶ್ರೀನಿವಾಸ ಸಿರನೂರಕರ್, ನದೀಂ ಸನದಿ ಮತ್ತು ಸತ್ಯಮಂಗಲ ಮಹಾದೇವ ಅವರ ಕೃತಿಗಳು ಪ್ರಶಸ್ತಿ ಪಡೆದಿವೆ

ಭಾರತಿ ಹೆಗಡೆ ಅವರ ‘ಸೀತಾಳೆದಂಡೆಯ ಸದ್ದಿಲ್ಲದ ಕಥೆಗಳು’ (ಕಥಾ ಸಂಕಲನ), ಸುರೇಶ ನಾಗಲಮಡಿಕೆ ಅವರ ‘ಹಾಡು ಕಲಿಸಿದ ಹರ’ (ಸಂಸ್ಕೃತಿ ಸಂಕಥನ), ಕೆ.ಎ.ದಯಾನಂದ ಅವರ ಹಾದಿಗಲ್ಲು (ಆತ್ಮಕಥನ), ಕಿರಣ್ ಭಟ್ ಅವರ ರಂಗ ಕೈರಳಿ (ಪ್ರವಾಸ ಕಥನ), ಕಲಬುರಗಿಯ ಶ್ರೀನಿವಾಸ ಸಿರನೂರಕರ್ ಅವರ ಪುರಂದರದಾಸರ ಬಂಡಾಯ ಪ್ರಜ್ಞೆ (ವೈಚಾರಿಕ ಸಂಕಲನ), ನದೀಂ ಸನದಿ ಅವರ ‘ಹುಲಿಯ ನೆತ್ತಿಯ ನೆರಳು’ (ಕವನ ಸಂಕಲನ) ಮತ್ತು ಡಾ. ಸತ್ಯಮಂಗಲ ಮಹಾದೇವ ಅವರ 'ಪಂಚವರ್ಣದ ಹಂಸ’ (ಕವನ ಸಂಕಲನ) ಕೃತಿಗಳನ್ನು ೨೦ ನೇ ವರ್ಷದ ಅಮ್ಮ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ ಆಯ್ಕೆಯಾಗಿವೆ ಎಂದು 'ಅಮ್ಮ ಪ್ರಶಸ್ತಿ’ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.

ಈ ಬಾರಿ ೩೯೧ ಕೃತಿಗಳು ಬಂದಿದ್ದವು.

ಪ್ರಶಸ್ತಿಯು ತಲಾ ೫೦೦೦ ರೂ. ನಗದು ಪುರಸ್ಕಾರ, ನೆನಪಿನ ಕಾಣಿಕೆ, ಪ್ರಮಾಣ ಪತ್ರ ಮತ್ತು ಸತ್ಕಾರ ಒಳಗೊಂಡಿರುತ್ತದೆ. ಕಾವ್ಯ ವಿಭಾಗದಲ್ಲಿ ಇಬ್ಬರು ಕವಿಗಳು ಪ್ರಶಸ್ತಿಯನ್ನು ಹಂಚಿಕೊAಡಿದ್ದಾರೆ. ಇದೇ ನವೆಂಬರ್ ೨೬ ರಂದು ಸಂಜೆ ೫.೩೦ಕ್ಕೆ ಸೇಡಮ್‌ನ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಜರುಗುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಅಮ್ಮ ಪ್ರಶಸ್ತಿಗೆ ೨೦ ರ ವರ್ಷದ ಸಂಭ್ರಮ :

ಪತ್ರಕರ್ತ-ಲೇಖಕ ಮಹಿಪಾಲರೆಡ್ಡಿ ಮುನ್ನೂರ್ ಅವರು ತಮ್ಮ ಅಮ್ಮನ ನೆನಪಿನಲ್ಲಿ ಸ್ಥಾಪಿಸಿದ ‘ಅಮ್ಮ ಪ್ರಶಸ್ತಿ’ಗೆ ಈಗ ೨೦ ನೇ ವರ್ಷದ ಸಂಭ್ರಮ.

ಕನ್ನಡದ ಪ್ರತಿಭಾವಂತ ಬರಹಗಾರರುಅಮ್ಮ ಪ್ರಶಸ್ತಿ’ಗಾಗಿ ತಮ್ಮ ಕೃತಿಗಳನ್ನು ಕಳುಹಿಸುವ ಮೂಲಕ ಪ್ರಶಸ್ತಿಯನ್ನು ಗುರುತಿಸಿದ್ದಾರೆ ಹಾಗೂ ಗೌರವಿಸಿದ್ದಾರೆ.
ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ `ಅಮ್ಮ ಪ್ರಶಸ್ತಿ’ ರಾಜ್ಯದ ಗಣನೀಯ ಪ್ರಶಸ್ತಿಗಳಲ್ಲಿ ಒಂದಾಗಬೇಕು ಎಂಬ ಪ್ರತಿಷ್ಠಾನದ ಆಶಯಕ್ಕೆ ಅನುಗುಣವಾಗಿ ನಾಡಿನ ಖ್ಯಾತ ಲೇಖಕರು, ಕವಿಗಳು, ಪ್ರಕಾಶಕರು ಮತ್ತು ಲೇಖಕರ ಅಭಿಮಾನಿ ಓದುಗರು ಸ್ಪಂದಿಸಿದ್ದೇ ಇದೊಂದು ಗೌರವಾನ್ವಿತ ಪ್ರಶಸ್ತಿಯಾಗಿ ರೂಪುಗೊಂಡಿದೆ ಎಂಬುದಕ್ಕೆ ಸಾಕ್ಷಿ.

‍ಲೇಖಕರು avadhi

November 12, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಉಡುಪಿ ಸೀರೆಗಳ ಪುನಶ್ಚೇತನ

ಉಡುಪಿ ಸೀರೆಗಳ ಪುನಶ್ಚೇತನ

ಸುಮಾವೀಣಾ ಮಮತೆಯ ಖನಿ ಮಮತಾ ರೈ ಮೂಲತಃ ಉಪನ್ಯಾಸಕಿ.  ಪರಿಸರ ಸ್ನೇಹಿ, ಗ್ರಾಮೀಣ ಕುಶಲ ಕಲೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 2018ರಿಂದ...

ಸಾಗರದಾಚೆಯ ಸೂರು…

ಸಾಗರದಾಚೆಯ ಸೂರು…

ರಂಜನಾ ಹೆಚ್ ಬೆಚ್ಚಗಿನ ಮನೆಯಿರಲು ವೆಚ್ಚಕ್ಕೆ ಹೊನ್ನಿರಲು ಇಚ್ಛೆಯನರಿತು ನಡೆವ ಸತಿಯಿರಲು ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ. ಈ...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This