ಆಗಸ್ಟ್ ತಿಂಗಳೇ ಹೀಗೆ..

-ಸುಶ್ರುತ ದೊಡ್ಡೇರಿ ಮೌನಗಾಳ ಕಲೆ: ಗುಜ್ಜಾರಪ್ಪ ಇದ್ದಕ್ಕಿದ್ದಂತೆ ಮಧ್ಯರಾತ್ರಿಯಲ್ಲಿ ಸುರಿಯಲು ಶುರುವಿಡುವ ಮಳೆ ಊರಲ್ಲಿ ಯಾರೋ ತೀರಿಕೊಂಡರಂತೆ ಎಂಬ ಸುದ್ದಿ ಯಾಕೋ ನಿದ್ದೇನೇ ಬರ್ತಿಲ್ಲ ಅಂತ ಹುಡುಗಿಯ ಎಸ್ಸೆಮ್ಮೆಸ್ಸು ಕರವೀರದ ಹೂವನ್ನು ಸೀಪಿದ ಸಿಹಿಯ ನೆನಪು ಬಾನಿಯಲ್ಲಿ ನೆನೆಸಿಟ್ಟ ಮೈಲುತುತ್ತ ಕಂಡರೆ ನಾಳೆ ಕೊಳೆ ಔಷಧಿ ಹೊಡೆಯಲು ಶೀನ ಬರುತ್ತಾನೋ ಇಲ್ಲವೋ ಚಿಂತೆ ಈ ಆಗಸ್ಟ್ ತಿಂಗಳೇ ಹೀಗೆ ಒಂದಕ್ಕೊಂದು ಸಂಬಂಧವಿಲ್ಲದ ಚಿತ್ರಗಳನ್ನು ಜೋಡಿಸಿ ಮಾಡಿದ ಕೊಲಾಜ್ ಅದರಲ್ಲೇ ಅರ್ಥ ಹುಡುಕುವ ಹುಂಬತನ ಜಾರುವ ಬಚ್ಚಲುಕಲ್ಲಿಗೆ ಬ್ಲೀಚಿಂಗ್ ಪೌಡರ್ ಹೊಯ್ದು ತರೆದು ತರೆದು ಕೈನೋವು ನಿಂಬೆಹಣ್ಣು ಹಿಂಡುವಾಗ ಬೀಜವೂ ಬಿದ್ದುಹೋಗಿ ಎಲ್ಲಾ ಕಹಿಕಹಿ ಮಲ್ಲಿಗೆ ಕ್ಯಾಲೆಂಡರಿನಲ್ಲಿ ಸೈಕಲ್ ಪ್ಯೂರ್ ಅಗರಬತ್ತಿಯ ಜಾಹೀರಾತು ಎಷ್ಟೇ ಪ್ರಯತ್ನಪಟ್ಟರೂ ನಗು ತಾರದ ಗಂಗಾವತಿ ಬೀಚಿಯ ಜೋಕು ಛೇ, ಈ ಆಗಸ್ಟ್ ತಿಂಗಳೇ ಹೀಗೆ ಊರ ಗಣಪೆ ಮಟ್ಟಿಯ ಮರೆಯಲ್ಲಿ ನೀಲಿಹೂವೊಂದು ಬಿಟ್ಟಂತೆ ಕನಸು ಕಲಾಸಿಪಾಳ್ಯದ ಬೀದಿನಾಯಿ ಬೆದೆಗೆ ಬಂದು ಅಂಡರ್‌ಪಾಸ್ ಕೆಳಗೆ ಕಾಮಕೇಳಿ ಕನ್ನಡ ನಿಘಂಟಿನ ಕೊನೇಪುಟದಲ್ಲಿ ಳಕಾರದ ಆತ್ಮಹತ್ಯೆ ಮಿಥುನ ರಾಶಿಯನ್ನು ಹಾದುಹೋಗುವಾಗಲೆಲ್ಲ ಇನ್ಸಾಟ್-ಬಿ ಉಪಗ್ರಹಕ್ಕೆ ಏನೋ ಪುಳಕ ಸೋರುತ್ತಿರುವ ನಲ್ಲಿ ಕೆಳಗಿನ ಬಕೇಟಿನಲ್ಲಿ ಕ್ಷಣಕೊಂದು ಅಲೆಯ ಉಂಗುರ ಶನಿವಾರದ ಜಾಗರದ ಪರಿಣಾಮ, ಶಂಕರ ಭಾಗವತರ ಮದ್ದಲೆಗೆ ಭಾನುವಾರ ಮೈಕೈ ಸೆಳೆತ ಏನು ಮಾಡೋದು, ಈ ಆಗಸ್ಟ್ ತಿಂಗಳೇ ಹೀಗೆ ಟೀವಿಯಲ್ಲಿ ಕತ್ರೀನಾ ಕೈಫಿಗೆ ಈ ಚಳಿಯಲ್ಲೂ ದಿನಕ್ಕೆ ನೂರಾ‌ಎಂಟು ಸಲ ಸ್ನಾನ ಅಂಬೋಲಿ ಘಾಟಿನಲ್ಲಿ ಹಸಿದ ಇಂಬಳದ ಅಂಗುಲ-ಅಂಗುಲ ನಡಿಗೆ ನೈಟ್ ಬಸ್ಸು ನಿಂತ ಡಾಬಾದಲ್ಲಿ ಅಣ್ಣಾವ್ರ ಹಾಡಿನ ಉಸ್ತುವಾರಿ ಅಲ್ಲಲ್ಲೆ ನಿಲ್ಲುವ ಮನಸುಗಳಿಗೆ, ಅರಳಲಣಿಯಾಗಿರುವ ಮೊಗ್ಗುಗಳಿಗೆ ನೀರು ಜಿನುಗಿಸುತಿರುವ ಒರತೆಗಳಿಗೆ, ಅಂಚೆಪೆಟ್ಟಿಗೆಯಲ್ಲಿರುವ ಪತ್ರಗಳಿಗೆ ಮುತ್ತಮಧುಗ್ರಾಹೀ ಅಧರಗಳಿಗೆ, ಬೆಳ್ಳಿನೂಪುರ ಘಲ್ಲುಘಲ್ಲೆನೆ ಉಷೆ ಹೇಳಿದೆನಲ್ಲಾ, ಈ ಆಗಸ್ಟ್ ತಿಂಗಳೇ ಹೀಗೆ]]>

‍ಲೇಖಕರು avadhi

August 31, 2010

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ನೀನೆಂದರೆ ಭಯ ಅಲ್ಲ…

ನೀನೆಂದರೆ ಭಯ ಅಲ್ಲ…

ರೇಷ್ಮಾ ಗುಳೇದಗುಡ್ಡಾಕರ್  ಪ್ರಖರ ಬೆಳಕು ಕಾಣಿಸದುನನ್ನ ರೂಪವ ಅಂತರಂಗದ ಪ್ರಲಾಪವ ಗಾಢ ಕತ್ತಲೆ ಕಾಣಿಸುವದು ನನ್ನೂಳಗಿನ ನನ್ನು ಅಲ್ಲಿನ...

ಮುಸ್ಸಂಜೆ

ಮುಸ್ಸಂಜೆ

ಜಿತೇಂದ್ರ ಬೇದೂರು ೧ ಮುಸ್ಸಂಜೆ ಯೌವ್ವನದ ಕ್ಷಣದಲ್ಲಿ ಎಷ್ಟೊಂದು ಉರಿದಿದ್ದಸೂರ್ಯ, ಈಗೇಕೋ ತಣ್ಣಗಾಗಿ ಹೋದ.ಯಾರು ಸರಿಸಿದರೋ ಏನೋಪಡುವಣ ಅಂಚ...

ಮಗಳು ಪೃಥೆ

ಮಗಳು ಪೃಥೆ

ಸುನೀತಾ ಬೆಟ್ಕೇರೂರ್ ಇವಳು ನಮ್ಮ ಮಗಳು,ಪೃಥೆ.ಕಂಕುಳಲ್ಲಿದ್ದಳು,ನೆಲಕಿಳಿದಳುಬೆರಳನ್ಹಿಡಿದು ಹೆಜ್ಜೆಯಿಟ್ಟಳುಈಗೋ------ ಈಗೋಅನ್ನುವಲ್ಲಿ...

4 ಪ್ರತಿಕ್ರಿಯೆಗಳು

  1. suresh kota

    ವಾಹ್! ಒಂದು ಬೆಚ್ಚಗಿನ ಕವಿತೆ.
    (ಈ ಆಗಸ್ಟ್ ತಿಂಗಳಿನಲ್ಲೂ)

    ಪ್ರತಿಕ್ರಿಯೆ
  2. Kallare

    Good one Sushrutha…
    ‘ಟೀವಿಯಲ್ಲಿ’ – looks like an extra word there. Isn’t iT?

    ಪ್ರತಿಕ್ರಿಯೆ
  3. Ananthamurthy

    sushrutara khushiyada lahariyannu, adara anireekshita tiruvugalannu bareda kavigoo odisida geleya jogigoo abhinandanegalu
    ananthamurthy

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: