ಇದು ಬಹುಶಃ “ಈಚ್ಲೆಂಡ” ಅಲ್ಲ!

ಬೆಳದಿಂಗಳ್ ರಾತ್ರೀಲಿ ಈಚೋರಿ ಬತ್ತಂದ್ರೆ
ಈಚ್ಲೆಂಡ ಚೆಲ್ದಂಗೆ ನೆಪ್ಪಾಯ್ತದೆ
ಆಕಾಸದ್ ಚಂದ್ರನ್ನ ಪಡಕಾನೆ ದೀಪಕ್ಕೆ
ವೋಲಿಸ್ದೆವೋಯ್ತಂದ್ರೆ ತೆಪ್ಪಾಯ್ತದೆ.

ಅಳ್ ಗಿಳೋದ್  ಎಲ್ಲಾನ ಯೆಂಗಿಸ್ಗೆ ವೊಪ್ತಾದೆ
ನೆಗ್ತಿರ್ ಬೇಕು ಗಂಡಸ್ರು ಪ್ರಾಣ್ ಓದ್ರೂನೆ!
ಬದಕಿದ್ರೆ ಯೆವ್ತಾರ ಪಡಕಾನೇಗ್ ಓಗ್ಬೈದು
ಸತ್ಮೇಲ್ ಏನೈತಣ್ಣ? ದೊಡ್ ಸೊನ್ನೇನೆ!

ಜಿ ಪಿ ರಾಜರತ್ನಂ ಸಾಲುಗಳು ಕೊಡುವ ಈ ಕಿಕ್ ಮುಂದೆ ಯಾವುದಿದೆ? ನೆನಪಿಡಬೇಕು. ರಾಜರತ್ನಂ ಯಾವತ್ತೂ ಕುಡಿದವರಲ್ಲವಂತೆ. ಅಂಥ ರಾಜರತ್ನಂ ಯೆಂಡ್ಕುಡ್ಕ ರತ್ನನನ್ನು ಸೃಷ್ಟಿಸಿದರು.

*

xclaimpt.gif

ಪೀಠಿಕೆ ಮತ್ತೇನಕ್ಕೂ ಅಲ್ಲ; ಹೊಸ ಯೆಂಡುಡ್ಕನೊಬ್ಬನನ್ನು ಪರಿಚಯಿಸಬೇಕಿದೆ. ಈತ ಕುಡಿಯದೆ ಹಾಡಿದೊಂದಗ್ಗಳಿಕೆಯವನಾ? ಗೊತ್ತಿಲ್ಲ. ಅಷ್ಟಕ್ಕೂ ಯಾರೀತ ಎಂಬುದನ್ನು ನೀವೇ ಭೇಟಿಯಾಗಿ ಪರಿಚಯಿಸಿಕೊಳ್ಳಬಹುದು. ಸದ್ಯಕ್ಕೆ ಈ “ಕುಡುಕ” ಮಿತ್ರನ ಪದ್ಯ ದ್ರವವನ್ನಷ್ಟೆ ಹಿತವಾಗಿ ಸಿಪ್ ಮಾಡಬಹುದು.

* * *

ದೇ ಕೊನೆ ಭೇಟಿ ಅಂತ ಅವಳ ಒದ್ದಾಟ
ತಡವಾದರೆ ಬಾರು ಮುಚ್ಚುತ್ತೆ ಅಂತ ನನ್ನದು
ಶಾಲೆಯಾಗಲಿ ಮಧುಶಾಲೆಯಾಗಲಿ
ಮೊದಲ ದಿನವೇ ತಡ ಸರಿಯೆ ಹೇಳಿ?

*

ಹೆಂಡ ಕುಡೀಬಾರದು, ಕುಡಿದರೆ
ಲೆಕ್ಕ ಇಡಬಾರದು
ಎತ್ತಿದ ಗ್ಲಾಸನು ಏನೇ ಆದರೂ
ಪಕ್ಕ ಇಡಬಾರದು

*

ಪಘಾತ ಆಗುವುದೇ ಹಣೆಯಲ್ಲಿದ್ದರೆ
ಆಸ್ಪತ್ರೆ ಮುಂದೆಯೇ ಆಗಲಿ
ಪ್ರೇಮ ಭಗ್ನವಾಗುವುದೇ ಬರೆದಿದ್ದರೆ
ಬಾರಿನ ಬಳಿಯೇ ಆಗಲಿ

*

ಮೋರೆ ನೋಡದೆ ಅಪ್ಪಿ
ಚಿಂತೆ ಕಳೆವಳು ಮದಿರೆ
ಮೋರಿಯಾದರೆ ಏನು
ಬಾರದಿರುವುದೆ ನಿದಿರೆ

*

ಖಾಲಿಯಾಗಿದೆ ಬದುಕು
ಖಾಲಿಯಾಗಿದೆ ಬಾಟಲಿ
ಉನ್ಮತ್ತ ಹೃದಯವನು ಹೊತ್ತು
ರಸ್ತೆಯನೀಗ ಹೇಗೆ ದಾಟಲಿ?

*

ಕುಡಿದು ಮೈಮರೆತಾಗ ಎಲ್ಲರೂ ಒಂದೆನಾ
ಅದಕೇ ಅನ್ನೋದು ಬಾರೊಂದು ನಂದನ
ಸೆರೆ ಮಾಡಿದಾತನಿಗೆ ಇದೋ ನನ್ನ ವಂದನಾ
ಎದಕೆ ಬೇಕಿನ್ನು ಬೇರೊಂದು ಬಂಧನ?

*

ದ್ಯ ಕರುಳನ್ನು ಸುಡುತ್ತದೆ
ಎಂಬುದು ಬೇರೆ ಮಾತು
ಮನದ ನೋವಿಗಂತೂ ಅದು ದಿವ್ಯೌಷಧಿ
ಸೈಡ್‌ ಎಫೆಕ್ಟಿಲ್ಲದ ಔಷಧಿಯುಂಟೆ ಹೇಳಿ?

*

ತಂತಿ ಹರಿದ ವೀಣೆ ನಾನು
ನುಡಿಸಲಾಗದು
ಕುಡಿತ ನನ್ನ ಎದೆಯ ಬಡಿತ
ಬಿಡಿಸಲಾಗದು

*

ಯುಗಗಳ ಬಳಿಕ ಸಿಕ್ಕಿರುವೆ ಗೆಳೆಯ ಹೀಗೆ
ಮೆಚ್ಚನಾ ಪರಮಾತ್ಮ ಕುಡಿಸದೆ ಕಳಿಸಿದರೆ ಹಾಗೇ
ಮುಗಿಯುವುದೆ ತಬ್ಬಿದರೆ, ಮಾತಾಡಿದರೆ ನಕ್ಕು
ಹೇಳಲಾಗದ್ದನ್ನೂ ಹೇಳಲು ಏರಲೇಬೇಕು ಕಿಕ್ಕು

‍ಲೇಖಕರು avadhi

November 10, 2007

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಫಾರುಕ್ ಮತ್ತೆ ಸಿಕ್ಕಿದ

ಫಾರುಕ್ ಮತ್ತೆ ಸಿಕ್ಕಿದ

ಗಜಾನನ ಮಹಾಲೆ ಸ್ನೇಹವೆಂಬ ವಿಸ್ಮಯ ಸ್ನೇಹ ವ್ಯಕ್ತಿಗಳಿಬ್ಬರ ನಡುವೆ ಹೇಗೆ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಒಮ್ಮೊಮ್ಮೆ ಆಲೋಚಿಸಿದರೆ...

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಡಾ. ಬಿ. ಜನಾರ್ಧನ್‌ ಭಟ್  ಮುಂಬಯಿಯ ಕನ್ನಡ ಸಾಹಿತ್ಯ ಲೋಕದ ಜತೆಗೆ ನನಗೆ ನಿಕಟ ಬಾಂಧವ್ಯ ಇರುವುದರಿಂದ ಅದರ ವೈಶಿಷ್ಟ್ಯವನ್ನು ಗ್ರಹಿಸಿ...

4 ಪ್ರತಿಕ್ರಿಯೆಗಳು

 1. vikas negiloni

  vavvvv!
  nijavagiyu chennagiro padya. nanu ee yella kavithegalannu ‘apara’ avara blognalli odidde. adre neevu adakkondu angle kotri, thanks!
  -vikas negiloni

  ಪ್ರತಿಕ್ರಿಯೆ
 2. G N Mohan

  bareyuvudaare apara
  innu mundhe idanne bareyali
  emma manadangalakkoo
  ondu bar tarali…

  ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: