ಇದು ಬಿಸಿನೆಸ್! – ಇ೦ದಿನ ನೀತಿ ಕಥೆ!!

ಉದರನಿಮಿತ್ತಂ…

– ಸ೦ದೀಪ್ ಕಾಮತ್

ಕಡಲತೀರ ಅದೊಂದು ಪುಟ್ಟ ಊರು. ಊರಂದ ಮೇಲೆ ಅಲ್ಲಿ ಸಲೂನು, ಹಾಲಿನ ಅಂಗಡಿ, ಜಿನಸಿ ಅಂಗಡಿ, ಹೋಟಲ್ ಇತ್ಯಾದಿ ಇದ್ದೇ ಇರುತ್ತೆ ಅಲ್ವ. ಈ ಊರಲ್ಲೂ ಪುಟ್ಟ ಹೋಟಲ್ ಒಂದಿತ್ತು. ಬಹುಷಃ ಉಡುಪಿಯ ಯಾವುದೊ ಹಳ್ಳಿಯಿಂದ ಬಂದು ಈ ಊರಲ್ಲಿ ಹೋಟಲ್ ಮಾಡಿದ್ರು ಅನ್ಸುತ್ತೆ. ಬೆಳಿಗ್ಗೆ ಬೆಳಿಗ್ಗೆ ಬಿಸಿ ಬಿಸಿ ಇಡ್ಲಿ, ವಡಾ, ನೀರ್ ದೋಸೆ, ಮಸಾಲೆ ದೋಸೆ ಎಲ್ಲವೂ ಸಿಗುತ್ತಿತ್ತು. ಹಾಗಾಗಿ ವ್ಯಾಪಾರವೂ ಚೆನ್ನಾಗೇ ಇತ್ತು. ಆಲ್ ಇಸ್ ವೆಲ್! ಅದ್ಯಾವುದೋ ನಡು ರಾತ್ರಿ ಪಕ್ಕದ ಕೇರಳದಿಂದ ಮಲಯಾಳಿಯೊಬ್ಬ ಆ ಊರಿಗೆ ಕಾಲಿಟ್ಟ. ಅವನದೂ ಹೊಟ್ಟೆ ಪಾಡು ನಡೆಯಬೇಕಲ್ಲ ಅವನಿಗೆ ಗೊತ್ತಿದ್ದಿದ್ದೇ ಹೋಟಲ್ ಬಿಸಿನೆಸ್. ಸಹಜವಾಗೇ ಅವನು ಆ ಊರಲ್ಲಿ ಹೋಟಲ್ ಶುರು ಮಾಡಿದ. ಅವನು ಬೆಳಿಗ್ಗೆ ಬಿಸಿ ಬಿಸಿ ಪುಟ್ಟು, ಆಪಂ ಇತ್ಯಾದಿ ಮಲಯಾಳಿ ತಿನಿಸುಗಳನ್ನು ಮಾಡತೊಡಗಿದ. ಕೆಲವು ವಾರಗಳು ವ್ಯಾಪಾರವೇ ಇರಲಿಲ್ಲ. ಎಲ್ಲರೂ ಉಡುಪಿ ಹೋಟಲ್ ಗೆ ಹೋಗುತ್ತಿದ್ದರಿಂದ ಇವನ ಹೋಟಲ್ ಗೆ ಯಾರೂ ಬರುತ್ತಿರಲಿಲ್ಲ. ಅದೂ ಅಲ್ಲದೇ ಮಲಯಾಳಿ ತಿನಿಸು ಬೇರೆ. ಹೇಗಿರುತ್ತೆ ಅನ್ನೋ ಕಲ್ಪನೆ ಕೂಡಾ ಅಲ್ಲಿನ ಜನರಿಗಿರಲಿಲ್ಲ! ಅದ್ಯಾವುದೋ ಘಳಿಗೆಯಲ್ಲಿ ಊರಿನ ಒಬ್ಬ, ಆ ಮಲಯಾಳಿ ಹೋಟಲ್ ಗೆ ಹೋಗಿ ತಿಂಡಿ ತಿಂದ. ತಿಂದವನಿಗೆ ಬಹಳ ಇಷ್ಟವಾಗಿ ಊರಿನ ಜನರಿಗೆಲ್ಲ ತಿಳಿಸಿದ. ಊರವರೆಲ್ಲಾ ಮಲಯಾಳಿ ಹೋಟಲ್ ಗೂ ಹೋಗತೊಡಗಿದರು. ಉಡುಪಿ ಹೋಟಲ್ ನವನು ಕಂಗಾಲಾದ.ಚೆನ್ನಾಗೇ ನಡೆಯುತ್ತಿದ್ದ ಬದುಕಿನಲ್ಲಿ ಅಚಾಕ್ ಆಗಿ ತಿರುವೊಂದು ಬಂದಿತ್ತು. ಕಂಗಾಲಾದವನೇ ಬೇರೆ ಬೇರೆ ಸಂಘ ಸಂಸ್ಥೆಗಳ ಮೊರೆ ಹೊಕ್ಕ. ನಮ್ಮದು ಮಲಯಾಳಿ ಸಂಸ್ಕೃತಿ ಅಲ್ಲ. ಪುಟ್ಟು ನಮಗೆ ಆಗಿ ಬರಲ್ಲ. ನಮ್ಮದೇನಿದ್ದರೂ ಇಡ್ಲಿ ವಡಾ ಸಂಸ್ಕೃತಿ. ಅದೂ ಅಲ್ಲದೆ ನನ್ನದು ಸೀಮಿತ ಮಾರುಕಟ್ಟೆ. ದಯವಿಟ್ಟು ಆ ಮಲಯಾಳಿ ಹೋಟಲ್ ನವನನ್ನು ಇಲ್ಲಿಂದ ಒದ್ದೋಡಿಸಿ ಅಂತ ಎಲ್ಲರಲ್ಲೂ ಮನವಿ ಮಾಡಿದ. ಅವನ ಮನವಿಗೆ ಸ್ಪಂದಿಸಿದ ಸಂಘ ಸಂಸ್ಥೆಯವರು ಆ ಮಲಯಾಳಿಗೆ ನೋಟಿಸ್ ಕಳಿಸಿದರು. ನೋಟಿಸ್ ಗೆ ಹೆದರಿದ ಮಲಯಾಳಿ ಹೋಟಲ್ ಮುಚ್ಚಿದ. ಮತ್ತೆ ಉಡುಪಿ ಹೋಟಲ್ ಬಿಸಿನೆಸ್ ಭರ್ಜರಿಯಾಗಿ ನಡೆಯತೊಡಗಿತು. ಇಲ್ಲಿಗೆ ಕಥೆ ಮುಗಿಯಲಿಲ್ಲ! ಈಗ ಇಂಟರ್ವಲ್ ………… ಕಂಗಾಲಾದ ಮಲಯಾಳಿಗೆ ಏನು ಮಾಡುವುದೆಂದೇ ತೋಚಲಿಲ್ಲ. ಅದೇ ಊರಿನ ಬಾರ್ ಒಂದರಲ್ಲಿ ಝೀರೋ ವ್ಯಾಟ್ ನ ಬಲ್ಬ್ ನ ಕೆಳಗೆ ಕಿಂಗ್ ಫಿಷರ್ ಬೀರ್ ಹೀರುವಾಗ ಅವನಿಗೆ ಏನೋ ಹೊಳೆಯಿತು. ಥಟ್ಟನೆ ಅದೇ ರಾತ್ರಿ ಬಸ್ ಹಿಡಿದು ಉಡುಪಿಗೆ ಹೋಗಿ ಅಡುಗೆ ಭಟ್ಟರೊಬ್ಬರನ್ನು ಹುಡುಕಿ ತನ್ನೊಂದಿಗೆ ಕರೆ ತಂದ. ಮಾರನೇ ದಿನದಿಂದ ಮಲಯಾಳಿ ಹೋಟಲ್ ಮತ್ತೆ ಶುರು! ಉಡುಪಿಯ ಅಡುಗೆ ಭಟ್ಟರು ಇಡ್ಲಿ, ವಡಾ, ನೀರ್ ದೋಸೆ, ಮಸಾಲೆ ದೊಸೆ ಮಾಡಿದ್ರೆ ಮಲಯಾಳಿ ತಾನೇ ಸ್ವಥ ಪುಟ್ಟು, ಆಪಂ ಥರದ ಮಲಯಾಳಿ ತಿನಿಸು ಮಾಡತೊಡಗಿದ. ಜನರ ಬಳಿ ಈಗ ಹೆಚ್ಚಿನ ಆಯ್ಕೆ ಇತ್ತು. ಮಲಯಾಳಿ ಹೋಟಲ್ ಗೆ ಹೋದರೆ ಎಲ್ಲವೂ ಸಿಗುತ್ತಿದ್ದರಿಂದ ಎಲ್ಲರೂ ಅಲ್ಲಿಗೇ ಹೋಗತೊಡಗಿದರು. ಓಕೆ. ಈಗ ಕಥೆ ಮುಗಿಯಿತು. ತಾವಿನ್ನು ಹೊರಡಬಹುದು. ಕಥೆಯ ನೀತಿ? ಇದು ಈಸೋಪನ ಅಥವ ಪಂಚತಂತ್ರದ ಕಥೆಯಲ್ಲ ನೀತಿ ಇರಲು! ಇದು ಬಿಸಿನೆಸ್!]]>

‍ಲೇಖಕರು G

June 2, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಕಡಲಂತರಾಳವ ಬಲ್ಲವರಾರು?

ಕಡಲಂತರಾಳವ ಬಲ್ಲವರಾರು?

ಶಿವಲೀಲಾ ಹುಣಸಗಿ ಯಲ್ಲಾಪುರ ಪ್ರತಿ ದಿನವೂ ಪ್ರೀತಿಯ ಹುಚ್ಚ ಹಿಡಿಸಿದವ ಒಮ್ಮಿಂದೊ ಮ್ಮೆಲೆ ಮೌನವಾಗಿದ್ದು, ಕೊನೆಗವನು ನನಗರಿವಿಲ್ಲದೆ ಮಂಪರು...

ಆರನೇ ಬೆರಳು

ಆರನೇ ಬೆರಳು

ಬಸವಣ್ಣೆಪ್ಪ ಕಂಬಾರ ಸುಂಕದ ಕಟ್ಟೇಲಿ ಚಿನ್ನವ್ವ ತುಂಬ ಅದೃಷ್ಟದ ಹೆಂಗಸು ಎಂದು ಮನೆಮಾತಾಗಿದ್ದಳು. ಮನೆ ಗುದ್ದಲಿ ಪೂಜೆ, ಬಾಣಂತನಕ್ಕೆ, ಮಗಳನ್ನು...

ಹಬ್ಬಿದಾ ಬಲೆ ಮಧ್ಯದೊಳಗೆ…

ಹಬ್ಬಿದಾ ಬಲೆ ಮಧ್ಯದೊಳಗೆ…

ರಾಜು ಎಂ ಎಸ್ ಸಾಲಿಗುಡಿ ಬಿಟ್ ಕೂಡ್ಲೇ ನಿಂಗಿ, ಗುಡ್ಲು ಕಡಿಕ್ ಹೊಂಟವ್ಳು... ತಾರ್ಸಿ ಮನೆ ಗುರ್ಲಿಂಗಪ್ಪನ್  ಮಗ್ಳು ಪರಿಮಳ ತನ್...

೧ ಪ್ರತಿಕ್ರಿಯೆ

  1. ರಾಜಾರಾಂ ತಲ್ಲೂರು

    ಈ ಕಥೆ ಇನ್ನೂ ಸ್ವಲ್ಪ ಮುಂದುವರಿಯತ್ತೆ. ಮಲಯಾಳಿ ಹೊಟೇಲ್ ವ್ಯಾಪಾರ ಜಾಸ್ತಿ ಆಗ್ತಾ ಬಂತು. ಒಂದು ದಿನ ಮಲಯಾಳಿ ಹೊಟೇಲಲ್ಲಿ ಒಂದು ಮದುವೆ ನಿಶ್ಚಿತಾರ್ಥ ಊಟ ಇತ್ತು. ಮಲೆಯಾಳಿ ಹೊಟೇಲಿನ ಭಟ್ಟರನ್ನ ಬುಕ್ ಮಾಡಿದ ಉಡುಪಿ ಹೊಟೇಲಿನವನು ಪಾಯಸಕ್ಕೆ ಏನೋ ಬೆರಸುವಂತೆ ಮಾಡುತ್ತಾನೆ. ಪಾಯಸ ತಿಂದ ನಿಶ್ಚಿತಾರ್ಥದ ಅತಿಥಿಗಳೆಲ್ಲ ವಾಂತಿ ಮಾಡಿಕೊಂಡು, ಸಾಮೂಹಿಕವಾಗಿ ಆಸ್ಪತ್ರೆಗೆ ದಾಖಲು. ಮಲಯಾಳಿ ಹೊಟೇಲ್ ವ್ಯಾಪಾರ ಖಲ್ಲಾಸ್! – ಇದು ರೌಂಡ್ ೨!! (ನಡೆದ ಘಟನೆ ಆಧರಿತ)

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: