ಇನ್ನೋಸೆನ್ಸ್ ಆಫ್ ಮುಸ್ಲಿಂ ಒಂದು ವಿಕೃತ ಚಿತ್ರ – ಬಿ ಎಂ ಬಶೀರ್

ಬಶೀರ್ ಬಿ ಎಮ್

ಗುಜರಿ ಅಂಗಡಿ

ಇತ್ತೀಚಿಗೆ ಇನ್ನೋಸೆನ್ಸ್ ಆಫ್ ಮುಸ್ಲಿಂ ಚಿತ್ರ ನೋಡಿದೆ. ಆ ಚಿತ್ರವನ್ನು ಮಾಡಿದ ಮನುಷ್ಯನ ವಿಕಾರ ಮುಖವನ್ನಷ್ಟೇ ನನಗೆ ಅದರಲ್ಲಿ ನೋಡಲು ಸಾಧ್ಯವಾಯಿತು. ಮಹಮ್ಮದ್ ಪೈಗಂಬರ್ ನಾನು ಅತಿ ಇಷ್ಟಪಡುವ ಮನುಷ್ಯ. ೧೫೦೦ ವರ್ಷಗಳ ಹಿಂದೆ ವ್ಯಾಪಾರಿಗಳ ನಾಡಿನಲ್ಲಿ ಇಂದಿನಿಂದ ಬಡ್ಡಿ ನಿಷೇಧಿಸಲಾಗಿದೆ. ಬಡವರನ್ನು ಸುತ್ತುವರಿದ ಬಡ್ಡಿಯ ಸಂಕಲೆಯನ್ನು ಕಳಚಿದ ಈತನಲ್ಲದೇ ನನ್ನ ಪ್ರವಾದಿ ಇನ್ನೊಬ್ಬನು ಇರಲು ಸಾಧ್ಯವೇ?. ಒಂದು ವೇಳೆ ತನ್ನ ಧರ್ಮವನ್ನು ಪ್ರಚಾರ ಮಾಡುದೇ ಪ್ರವಾದಿಯ ಉದ್ದೇಶ ವಾಗಿದ್ದರೆ ವ್ಯವಸ್ಥೆಯ ವಿರುದ್ಧ ಇಂತಹ ನಿರ್ಣಯ ಮಾಡಲು ಸಾಧ್ಯವಿತ್ತೆ. ವ್ಯವಸ್ತೆಯೊಂದಿಗೆ, ಮುಖ್ಯವಾಗಿ ದೊಡ್ಡ ವ್ಯಾಪರಿಗಳೊಂದಿಗೆ ಶ್ರಿಮಂತರೊಂದಿಗೆ ರಾಜಿ ಮಾಡಿಕೊಂಡಿದ್ದಾರೆ ಬಹುಶ ಇದಕ್ಕಿಂತಲೂ ವಿಶಾಲವಾಗಿ ಧರ್ಮವನ್ನು ಬೆಳೆಸಬಹುದಿತ್ತೋ ಏನೋ. ವ್ಯಭಿಚಾರವನ್ನು ಘನತೆ ಎಂದು ತಿಳಿದುಕೊಂಡ ಸಮಾಜದಲ್ಲಿ ವ್ಯಭಿಚಾರ ಮಾಡಬೇಡಿ. ಬೇಕಾದರೆ ಆಕೆಯನ್ನು ಮದುವೆಯಾಗಿ, ಆಕೆಗೆ ಪತ್ನಿಗೆ ಸಲ್ಲಬೇಕಾದ ಹಕ್ಕುಗಳನ್ನು ನೀಡಿ ಎಂದು ಘೋಶಿಸಿದ್ದವರನ್ನು ಪ್ರೀತಿಸದೇ ;ಇರಲು ಸಾಧ್ಯವೇ. ೧೫೦೦ ವರ್ಷಗಳ ಹಿಂದೆಯೇ ಪಾನ ನಿಷೇಧ ಜಾರಿಗೆ ತಂದ ಮನುಷ್ಯನ ಸಂದೇಶ ನನ್ನ ಪಾಲಿಗೆ ಅಪ್ಪಟ ದೇವರ ಸಂದೇಶವೇ ಹೌದು. ಇನ್ನು ಮುಂದೆ ಬಡ್ಡಿ ಮನ್ನಾ ಮಾಡಲಾಗಿದೆ. ನಿಮ್ಮ ಸಂಪತ್ತಿನ ಒಂದು ಭಾಗವನ್ನು ಬಡವರಿಗೆ ನೀಡುದು ಕಡ್ಡಾಯವಾಗಿದೆ ಇನ್ನು ಸಂದೇಶಕ್ಕು ಖಡ್ಗ ಕ್ಕೂ ಯಾವುದಾದರು ಸಂಬಂಧ ಇದೆಯೇ? ಕಾಣದ ಆ ದೇವರ ಕಾಲಿಗಷ್ಟೇ ಬೀಳಬೇಕು. ಮನುಷ್ಯರ ಕಾಲಿಗೆ ಬೀಳುದನ್ನು ನಿಷೇಧಿಸಲಾಗಿದೆ ಎಂಬ ಅಪ್ಪಟ ಸಮಾನತೆಯ ಕನಸನ್ನು ಕಾಣಲು ಈ ಜಗತ್ತಲ್ಲಿ ಪ್ರವಾದಿ ಮಹಮ್ಮದ್ಗಷ್ಟೇ ಸಾಧ್ಯವಾಯಿತು. ಸಾಧಾರಣ ಎಲ್ಲ ಧಾರ್ಮಿಕ ಸುಧಾರಕರು ತಮ್ಮ ಅನ್ನುಯಾಯಿಗಳನ್ನು ಶಿಷ್ಯರು ಎಂದು ಕರೆಯುತ್ತಾರೆ. ಆದರೆ ಪ್ರವಾದಿ ತನ್ನ ಅನುಯಾಯಿಗಳನ್ನು “ಸಂಗಾತಿ-(ಸಹಾಬಿ) ಎಂದು ಕರೆದರೂ. ಸಂಗಾತಿ ಅಥವಾ ಕಾಮ್ರೇಡ್ ಎಂಬ ಶಬ್ದವನ್ನು ಮೊದಲು ಬಳಸಿದ್ದು ಮಹಮ್ಮದ್.. ಯಾವತ್ತು ತನ್ನ ಸಂಗಾತಿಗಳಿಗೆ ಕಾಲಿಗೆ ಬೀಳುದು, ಪ್ರವಾದಿಯರನ್ನು ಕಂಡಾಗ ಎದ್ದು ನಿಲ್ಲುದನ್ನು ಮಹಮ್ಮದ್ ನಿಷೇಧಿಸಿದ್ದರು. ೧೫೦೦ ವರ್ಷಗಳ ಹಿಂದೆ ಹೆಣ್ಣಿಗೆ ಆಸ್ತಿಯ ಹಕ್ಕನ್ನು ಘೋಷಿಸಿದ್ದು ಮಹಮ್ಮದ್. ಹೆಣ್ಣನ್ನು ಹೂತುಹಾಕುವ ವ್ಯವಸ್ತೆಯಲ್ಲಿ, ಹೆಣ್ಣನ್ನು ಮದುವೆಯಾಗುವಾಗ…ಆಕೆಗೆ ಮೆಹರನ್ನು (ವಧುದಕ್ಷಿಣೆ) ಕಡ್ಡಾಯ ಗೊಳಿಸಿದರು. ಅಂದಿನ ದಿನಗಳಲ್ಲಿ ಹೆಣ್ಣಿಗೆ ಇದೊಂದು ಭಾರಿ ಕೊಡುಗೆಯೇ ಆಗಿತ್ತು. ಇಸ್ಲಾಂ ಖಡ್ಗದಿಂದ ಆಗಿತ್ತೆ? ತನ್ನ ಚಿಂತನೆಯನ್ನು ಹರಡುವಾಗ ಮಹಮ್ಮದ್ ಒಬ್ಬಂಟಿಯಾಗಿದ್ದರು. ಒಬ್ಬಂಟಿಯಾಗಿ ಅವರು ತನ್ನ ಹೋರಾಟವನ್ನು ಮಾಡಿದರು. ಅವರಿಗೆ ಮೊದಲು ಜೋತೆಯದುದು ಸಂಗಾತಿ ಅಬುಬಕರ್. ಅನಾಥ ಮಹಮ್ಮದ್ ನನ್ನು ಸಾಕಿದ್ದು ದೊಡ್ಡಪ್ಪ ಅಬು ತಾಲಿಬ್. ವಿಶೇಷವೆಂದರೆ ಅಬು ತಾಲಿಬ್ ತನ್ನ ಜೀವನದ ಕೊನೆಯವರೆಗೂ ಇಸ್ಲಾಂ ಸ್ವೀಕರಿಸಲಿಲ್ಲ. ಆದರೆ ಅವರ ನಡುವೆ ಸಂಬಂಧಕ್ಕೆ ಧಕ್ಕೆಯಾಗಲಿಲ್ಲ. ಮಹಮ್ಮದ್ ಸದಾ ದೊಡ್ಡಪ್ಪನನ್ನು ಮನವೊಲಿಸುತ್ತಲೇ ಇದ್ದರು. ಸಾಯುವ ಕೊನೆಯ ಕ್ಷಣದಲ್ಲಿ ದೊಡ್ದಪ್ಪನ್ನನ್ನು ಮಹಮ್ಮದ್ ಇಸ್ಲಾಂ ಸ್ವೀಕರಿಸಲು ಕೊನೆಯ ಪ್ರಯತ್ನ ನಡೆಸಿದರು. ಇಸ್ಲಾಮ್ಮ್ ಸ್ವೀಕರಿಸಿದರೆ ಸಮಾಜದಲ್ಲಿ ನನ್ನ ಘನತೆಗೆ ಕುಂದುಂಟಾಗುತ್ತದೆ ಎಂದು ಅಬುತಾಲಿಬ್ ಆ ಆಹ್ವಾನವನ್ನು ನಿರಾಕರಿಸಿದರು. ದೊಡ್ಡಪ್ಪ ಸಾವಿನ ಕೊನೆಯ ಕ್ಷಣದಲ್ಲಿದ್ದಾಗ ಮುಹಮ್ಮದ್ ಅವರ ದೇಹವನ್ನೆಲ್ಲ ತನ್ನ ಕೈಯಿಂದ ಸವರಿದರಂತೆ. ನನ್ನ ಕೈ ಸ್ಪರ್ಶದಿಂದ ದೊಡ್ಡಪ್ಪ ಸ್ವರ್ಗ ಸೇರಲಿ ಎನ್ನುವ ಆಶೆಯಿಂದ. ವಿಶೇಷವೆಂದರೆ, ಅಬುತಾಲಿಬ್ ಇಸ್ಲಾಂ ಸ್ವೀಕರಿಸದೆ ಇದ್ದರು ಶತ್ರುಗಳಿಂದ ಜೀವ ಇರುವ ವರೆಗೂ ಪ್ರವಾದಿಯನ್ನು ರಕ್ಷಿಸಿದರು. ಅಬುತಾಲಿಬ್ ಒಬ್ಬರಿಗೆ ಹೆದರಿ ಮಹಮ್ಮದರನ್ನು ಶತ್ರುಗಳು ಕೊಲ್ಲದೆ ಉಳಿಸಿದ್ದರು. ಅಭಿವ್ಯಕ್ತಿ ಸ್ವಾತಂತ್ರ್ಯದ ಅತಿ ದೊಡ್ಡ ಉಧಾಹರಣೆ ಇಲ್ಲಿದೆ. ಇಸ್ಲಾಮ್ನ ಮೊತ್ತ ಮೊದಲ ನಮಾಜ್ ಕರೆ ನೀಡಿರುವುದು ಒಬ್ಬ ನಿಗ್ರೋ. ಗುಲಾಮಿ ವ್ಯವಸ್ತೆಯನ್ನು ಪ್ರಶ್ನಿಸಿದ ಮಹಾ ಮನುಷ್ಯನೋಬ್ಬನನ್ನು ಯಾರಿಗಾದರು ದ್ವೇಷಿಸಲು ಸಾಧ್ಯ ಎಂದರೆ, ಆತನ ಹೃದಯ ಕೊಳೆತಿದೆ ಎಂದೇ ಅರ್ಥ. ನಾನು ದೇವರಲ್ಲ, ನಿಮ್ಮಂತೆಯೇ ಮನುಷ್ಯ. ಎಂದು ಪದೇ ಪದೇ ಘೋಷಿಸಿ…ಎಲ್ಲೂ ತನ್ನ ಭಾವಚಿತ್ರವು ಇರದಂತೆ ಜಾಗೃತೆ ವಹಿಸಿದ ಈ ಅಪ್ಪಟ ಮನುಷ್ಯನ ಚಿತ್ರ ಒಂದಿದ್ದರೆ ಇಂದು ಅವರನ್ನೇ ದೇವರಾಗಿ ಪೂಜಿಸುತ್ತಿದ್ದರು. ಗಲ್ಲಿ ಗಲ್ಲಿಗಲ್ಲಲ್ಲಿ ಈತನ ಪ್ರತಿಮೆಗಳು ನಿಂತಿರುತ್ತಿತ್ತು. ಇಂದಿಗೂ ಯಾರು ಪ್ರವಾದಿ ಮಹಮ್ಮದ್ ದೇವರು ಅಲ್ಲ ಎಂದು ದೃಡ ವಾಗಿ ಇರುದರ ಹಿಂದೆ ಅವರ ದೂರದೃಷ್ಟಿ ಕೆಲಸ ಮಾಡಿದೆ. ನಾನು ಹೊಸದಾಗಿ ಧರ್ಮವನ್ನು ಸೃಷ್ಟಿಸುತ್ತಿಲ್ಲ. ಹಿಂದೆ ಆಗಿ ಹೋಗಿರು ಜೀಸಸ್, ಮೋಶೆ, ದಾವುದ್ ಎಲ್ಲರು ಇಸ್ಲಾಮ್ನ ಪ್ರವಾದಿಗಳೇ. ಅವರು ಹೇಳಿದ್ದನ್ನೇ ನಾನು ಹೇಳುತ್ತಿದ್ದೇನೆ. ಹೊಸತಾಗಿ ಏನು ಹೇಳುತ್ತಿಲ್ಲ..ಎಂದು ಹೇಳಿದ್ದು ಮಾತ್ರವಲ್ಲ ಕ್ರಿಶ್ಚಿಯನ್, ಯಹೂದಿಗಳು ನಂಬುವ ಪ್ರವಾದಿಗಳ ಹೆಸರನ್ನು ಹೇಳುವಾಗಲು ಕಡ್ಡಾಯ ವಾಗಿ ಅವರಿಗೆ ಶಾಂತಿಯಿರಲಿ ಎಂದು ಹೇಳಲು ಕಳಿಸಿದ್ದು ಮಹಮ್ಮದ್. ಈ ಮನುಷ್ಯ ನನಗೆ ಇಷ್ಟವಾಗದೆ ಇರುದಕ್ಕೆ ಕಾರಣಗಳು ಇವೆಯೇ? ಇನ್ನೋಸೆನ್ಸ್ ಆಫ್ ಮುಸ್ಲಿಂ ಚಿತ್ರವನ್ನು ಮಾಡಿದ ನಿರ್ದೇಶಕ ಖಂಡಿತವಾಗಿಯೂ ಒಂದು ಭಯಾನಕ ರೋಗದಿಂದ ನರಳುತ್ತಿದ್ದಾನೆ. ಆ ರೋಗ ಬೇಗ ವಾಸಿಯಾಗಿ ಆತ ಗುಣಮುಖನಾಗಲಿ ಎಂದು ಹಾರೈಸುವ]]>

‍ಲೇಖಕರು G

September 24, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಫಾರುಕ್ ಮತ್ತೆ ಸಿಕ್ಕಿದ

ಫಾರುಕ್ ಮತ್ತೆ ಸಿಕ್ಕಿದ

ಗಜಾನನ ಮಹಾಲೆ ಸ್ನೇಹವೆಂಬ ವಿಸ್ಮಯ ಸ್ನೇಹ ವ್ಯಕ್ತಿಗಳಿಬ್ಬರ ನಡುವೆ ಹೇಗೆ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಒಮ್ಮೊಮ್ಮೆ ಆಲೋಚಿಸಿದರೆ...

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಡಾ. ಬಿ. ಜನಾರ್ಧನ್‌ ಭಟ್  ಮುಂಬಯಿಯ ಕನ್ನಡ ಸಾಹಿತ್ಯ ಲೋಕದ ಜತೆಗೆ ನನಗೆ ನಿಕಟ ಬಾಂಧವ್ಯ ಇರುವುದರಿಂದ ಅದರ ವೈಶಿಷ್ಟ್ಯವನ್ನು ಗ್ರಹಿಸಿ...

8 ಪ್ರತಿಕ್ರಿಯೆಗಳು

 1. bm basheer

  ಎಲ್ಲಕ್ಕಿಂತ ದೊಡ್ಡ ದುರಂತವೆಂದರೆ ಈ ಚಿತ್ರವನ್ನು ಪ್ರತಿಭಟಿಸುವ, ಅದನ್ನು ನಿಷೇಧಿಸಬೇಕು ಎಂದು ಒತ್ತಾಯಿಸುವ ಒಂದು ಸಮೂಹವನ್ನು ಮತ್ತೆ “ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ” ಅಪರಾಧಿಗಳನ್ನಾಗಿ ಕಟಕಟೆಯಲ್ಲಿ ನಿಲ್ಲಿಸುತ್ತಿರುದು. ಆ ಸಿನಿಮಾಕ್ಕೆ ಬಂದ ಪ್ರತಿಭಟನೆ ಒಂದು ಪ್ರತಿಕ್ರಿಯೆ, ಅದೂ ಅಭಿವ್ಯಕ್ತಿಯೇ ಅಲ್ಲವೇ? “ಇನ್ನೋಸೆನ್ಸ್ ಆಫ್ ಮುಸ್ಲಿಂ…” ನಿರ್ದೇಶಕ ಸಿನಿಮಾದಂತಹ ಅದ್ಭುತ ಮಾಧ್ಯಮವನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ. ಯಾವುದೇ ವೈಚಾರಿಕ ಚರ್ಚೆಗಲಿಲ್ಲದ ಈ ಚಿತ್ರ , ಕೋಟ್ಯಂತರ ಜನ ಪ್ರೀತಿಸುವ ಮನುಷ್ಯನೊಬ್ಬನ ಮೇಲೆ ದಾಳಿ ನಡೆಸುವ ಉದ್ದೇಶಕ್ಕಾಗಿಯೇ ಮಾಡಿರುದಾಗಿದೆ. ಒಂದು ಗಂಬೀರ ಚರ್ಚೆಗೆ ಸಾಧ್ಯ ಮಾಡಿಕೊಡುವ ಸಿನಿಮ ಮಾಧ್ಯಮ ಇಂಥವರ ಕೈಯಲ್ಲಿ ದುರ್ಬಳಕೆಯಾದಾಗ, ನಾಳೆ ಅದರ ಪರಿಣಾಮವನ್ನು ಸೃಜನ ಶೀಲ ನಿರ್ದೇಶಕರು ಎದುರಿಸಬೇಕಾಗುತ್ತದೆ. ಕ್ಯಾಮರದಲ್ಲಿ ಸಿನಿಮ ತೆಗೆದರೆ ಅಭಿವ್ಯಕ್ತಿ. ಅದೇ ಕ್ಯಾಮರದಲ್ಲಿ ಒಬ್ಬನ ತಲೆಗೆ ಹೊಡೆದರೆ ಅದನ್ನು ಸಿನಿಮ ಎಂದು ಕರೆಯಲಾಗುದಿಲ್ಲ. ಅದು ಹಿಂಸೆ, ಕ್ರೌರ್ಯ…ಅದನ್ನೇ ಆ ನಿರ್ದೇಶಕ ಮಾಡಿದ್ದಾನೆ.

  ಪ್ರತಿಕ್ರಿಯೆ
 2. Adithya

  If “Innocence of Muslims” is vulgar lets condemn it, but doing so one must also agree Islam needs to change and revive itself from within, why other countries especially the West making films and trashing muslim practices like bhurka and scarf culture, it is because of the rigidity in the Islam world, there is lot of difference between what is preached and what is in practice, Every non-muslim in this world now has stereotyped Islam, and I’m afraid but it is true to some extent.
  Before any event is held anywhere in the world the first thing coming to your mind is security, and we all know why, when set of people scare others with bombs and bullets, the reciprocation will be artistic either through cartoons or films, how can one nab them in this global village, by changing oneself by not being laugh stock, by not being rigid, by not alienating themselves from the society.
  Aren’t other religions of the world facing these issues or hatred from the west? yes, they do. But the ratio is very less and the reaction to such acts is negligible, thankfully the number of forward-thinkers is more than radicals in Hinduism, Buddhism and Christanity, the other major religions of this world. If we have to react to everything imagine what would have been the response to destruction of 1000s of year old Buddha statues by Taliban, I guess silence is the best response to religious hooliganism or blasphemy.
  ವ್ಯಭಿಚಾರವನ್ನು ಘನತೆ ಎಂದು ತಿಳಿದುಕೊಂಡ ಸಮಾಜದಲ್ಲಿ ವ್ಯಭಿಚಾರ ಮಾಡಬೇಡಿ. ಬೇಕಾದರೆ ಆಕೆಯನ್ನು ಮದುವೆಯಾಗಿ, ಆಕೆಗೆ ಪತ್ನಿಗೆ ಸಲ್ಲಬೇಕಾದ ಹಕ್ಕುಗಳನ್ನು ನೀಡಿ ಎಂದು ಘೋಶಿಸಿದ್ದವರನ್ನು ಪ್ರೀತಿಸದೇ ;ಇರಲು ಸಾಧ್ಯವೇ.
  And what is ವ್ಯಭಿಚಾರ & what is not a ವ್ಯಭಿಚಾರ? there is a blur line, any religion can’t define this.
  We have landed on the Moon and aiming at Mars, lets not crib on yesteryear’s hallucinations.

  ಪ್ರತಿಕ್ರಿಯೆ
 3. Ananda

  In this article, I could not find what that film is about, and what it has which is contradictory/vulgar
  If that is mentioned first, and then followed by opinions would have been the better dais for discussion

  ಪ್ರತಿಕ್ರಿಯೆ
 4. asha

  Mr.Basheer.
  I agree the movie is in poor taste…But tell me is anything that the movie has showed about Mohammed a lie….I think everything the movie showed is factual and is recorded islamic history but it was depicted poorly in the movie. Moreover, when M F Hussain took the liberty to denigrate the hindu gods and godesses where were you and other peace loving muslims…for MFH it is the right to express himself but for others it is not…why? Sauce for the goose is sauce for the gander also …no?Please visit the site faithfreedom.org and read what a ex-muslim has to say about islam and the prophet.

  ಪ್ರತಿಕ್ರಿಯೆ
 5. anada

  Basheer and all,
  Neevelru cinema nodiddeero ilvo ? sumne reviews odi bareetha iddeero?
  adaralli enide swamy?
  Sumne aa movie ge prachara kodtha ideera?

  ಪ್ರತಿಕ್ರಿಯೆ
 6. asha

  Mr.Basheer,
  >>ಎಲ್ಲಕ್ಕಿಂತ ದೊಡ್ಡ ದುರಂತವೆಂದರೆ ಈ ಚಿತ್ರವನ್ನು ಪ್ರತಿಭಟಿಸುವ, ಅದನ್ನು ನಿಷೇಧಿಸಬೇಕು ಎಂದು ಒತ್ತಾಯಿಸುವ ಒಂದು ಸಮೂಹವನ್ನು ಮತ್ತೆ “ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ” ಅಪರಾಧಿಗಳನ್ನಾಗಿ ಕಟಕಟೆಯಲ್ಲಿ ನಿಲ್ಲಿಸುತ್ತಿರುದು. ಆ ಸಿನಿಮಾಕ್ಕೆ ಬಂದ ಪ್ರತಿಭಟನೆ ಒಂದು ಪ್ರತಿಕ್ರಿಯೆ, ಅದೂ ಅಭಿವ್ಯಕ್ತಿಯೇ ಅಲ್ಲವೇ?>>
  This is a too clever by half reaction from you. People rioting, damaging property, looting and killing cannot be termed as freedom of expression by any stretch of imagination. There are other more peaceful and effective means to protest if you want to. If this is the kind of reaction we have to put up with for a silly movie, then god save us.

  ಪ್ರತಿಕ್ರಿಯೆ
 7. Ananda

  Basheer avre ide blog nalli, Heroine movie bagge nimma review nodikolli, adanna ondu thatastha konadinda nodideera( or barediddeera), ee movie bagge vaiyukthikavagi barediddeera
  neevu shuru maadode heege
  ಮಹಮ್ಮದ್ ಪೈಗಂಬರ್ ನಾನು ಅತಿ ಇಷ್ಟಪಡುವ ಮನುಷ್ಯ.
  idu vimarshe aagolla saar, nimma vichara galannu heltha ideera,
  neevu khanditha aa thara maadi,
  but ee vedike nalli alla

  ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: