ಇ೦ದು ರ೦ಗಶ೦ಕರದಲ್ಲಿ..

 

– ನಾಗರಾಜ್ ಸೋಮಯಾಜಿ

ವೈದೇಹಿ ಕನ್ನಡದ ಪ್ರಮುಖ ಕವಯಿತ್ರಿ. ಬುದ್ಧಿ ಭಾವದ ಅಪೂರ್ವ ಸಂಗಮವಾದ ವೈದೇಹಿಯ ಕವನಗಳ ಕೇಂದ್ರ ಬಿಂದು ಹೆಣ್ಣು. ಸಂಚಾರಿ ಥಿಯೇಟರ್ ಪ್ರಯೋಗದ “ವ್ಯಾನಿಟಿ ಬ್ಯಾಗ್”ವೈದೇಹಿಯ ಕಾವ್ಯಲೋಕದ ವಿವಿಧ ನೆಲೆಗಳನ್ನು ಅನಾವರಣಗೊಳಿಸುತ್ತಾ ಆ ಮೂಲಕ ಹೆಣ್ಣಿನ ಚಿತ್ತ ಚಿತ್ತಾರದ ಅನೂಹ್ಯ ಸಂಗತಿಗಳನ್ನು ಹೆಣ್ಣಿಗೆ ಮಾತ್ರ ಅನುಭವಗಮ್ಯವಾಗುವ ಹಲವು ಅಮೂರ್ತ ಪ್ರಸಂಗಗಳನ್ನು, ಅವಳ ಭಾವ ಪ್ರಪಂಚದ ಹಲವು ಸೂಕ್ಷ್ಮ ನೇಯ್ಗೆಗಳನ್ನು ದೃಶ್ಯ ರೂಪಕದಲ್ಲಿ ಕಾಣಿಸುತ್ತದೆ. “ನೋಡಬಾರದು ಚೀಲದೊಳಗನು” ಎನ್ನುವ ವೈದೇಹಿಯವರ ಮಾತನ್ನೇ ವಿಸ್ತರಿಸುತ್ತಾ, “ನೋಡಲಾಗದ” ಆ ಬ್ಯಾಗಿನ ವ್ಯಾನಿಟಿಯ ಒಳಗಿರುವ ವಸ್ತು ಪ್ರಪಂಚವನ್ನು ವೈದೇಹಿಯವರ ಕಾವ್ಯಲೋಕದ ಹಲವು ಪ್ರಸಂಗಗಳ ಮೂಲಕ ಪ್ರಸ್ತುತಪಡಿಸಲಾಗುತ್ತದೆ. ವ್ಯಾನಿಟಿ ಬ್ಯಾಗ್ ನ ರೂಪಕದಲ್ಲಿ ಹೆಣ್ಣಿನ ಅಂತರಂಗದ ಒಳನೋಟಗಳಿಗೆ ಸರ್ಚ್ ಲೈಟ್ ಬೀರಿ, ಹೆಣ್ಣಿನ ವಿಶ್ವರೂಪ ದರ್ಶನ ಮಾಡಿಸುವ ವೈದೇಹಿಯವರ ಪ್ರಯತ್ನವನ್ನು ದೃಶ್ಯರೂಪದಲ್ಲಿ ಕಟ್ಟಿಕೊಡುವ ಮಹದಾಶೆಯ ಹಂಬಲ ಸಂಚಾರಿ ಥಿಯೇಟರ್ ದು. ವ್ಯಾನಿಟಿ ಬ್ಯಾಗ್ ಎಂಬ ಈ ಸ್ತ್ರೀಲೋಕದ ಕ್ಯಾನ್ ವಾಸ್ ನಲ್ಲಿ ಹೆಣ್ಣಿನ ಅಂತರಂಗದ ಪಿಸು ಮಾತು, ಮುತ್ತಿನಂತಹ ಗೀಚು ಕೊಟ್ಟು ಮಾಯವಾದವನು ಮಾಡಿದ ಗಾಯದ ನೋವು, ನಿತ್ಯದ ಅನ್ನಕ್ಕಾಗಿ ಬೆರಣಿ ತಟ್ಟುವ ಹುಡುಗಿ, ಆ ಕಾಯ ಕಷ್ಟದ ಬಾಲೆಯ ಎದೆನೋವು, ತನ್ನದೆನ್ನುವ ಆಸ್ತಿಯೇ ಇರದ ಹೆಣ್ಣು ಬರೆವ ಉಯಿಲು, ತ್ರಿಲೋಕ ಸಂಚಾರಿಯಾದ ಶಿವಗೆ, ಸೇವೆ ಮಾಡುತ್ತಲೇ ನಾನೆಷ್ಟನೆಯ ನಾರಿ? ಎಂದು ಲೇವಡಿ ಮಾಡುತ್ತಾ ಬಿಕ್ಕುವ ಆರ್ದ್ರ್ಗಗರ್ವದ ಗೌರಿಯ ತಲ್ಲಣ, ಒಂದಕೊಂದಕೆ ಅರ್ಥಾರ್ಥವಿಲ್ಲದೆಯೂ, ಅರ್ಥವಾಗದ ಭಾಷೆಯ ನಡುವೆಯೂ ಜೀವಿಸುವ ಜೋಡಿಗಳ ವಾಸ್ತವಿಕತೆ- ಒಟ್ಟಾರೆಯಾಗಿ “ನಿತ್ಯ ಮೂಡುತ ನಿತ್ತ್ಯ ಮುಳುಗುತ ಕಷ್ಟ ಸುಖಗಳ ಬೆಟ್ಟ ಕಡಲಲಿ ನಿತ್ಯ ಸುಡುತಿಹ ಸೂರ್ಯಳಾಗಿ ಪ್ರಜ್ವಲಿಸುತ್ತಿರುವ ಹೆಣ್ಣಿನ ಮನಸ್ಸಿನ ಒಳ್ಲಲೋಕವನ್ನು ಪ್ರತಿನಿಧಿಸುವ ರೂಪಕವಾದ ವ್ಯಾನಿಟಿ ಬ್ಯಾಗಿನಲ್ಲಿ ವೈದೇಹಿಯ ಎಲ್ಲ ಪ್ರಮುಖ ಕವನ್ಗಳನ್ನು ಅಡಗಿಸಿಟ್ಟಿರುವುದು ಈ ರಂಗಪ್ರಯೋಗದ ವಿಶೇಷ]]>

‍ಲೇಖಕರು G

June 8, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಮಾಯಾ ಏಂಜೆಲೊ

ಮಾಯಾ ಏಂಜೆಲೊ

ಆರ್ ವಿಜಯರಾಘವನ್ ಮಾಯಾ ಏಂಜೆಲೊ ತಮ್ಮ 86ನೇ ವಯಸ್ಸಿನಲ್ಲಿ ತೀರಿಕೊಂಡರು. ತನ್ನ ಕ್ಯಾನ್ಸರ್ ಕುರಿತು ಆಕೆ ಹೇಳಿಕೊಂಡಿದ್ದು ತನ್ನ ನಲವತ್ತು...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This