ಎಲ್ಲಾದರೂ ಇರಿ, ಎಂತಾದರೂ ಇರಿ, ಕನ್ನಡ ಟೈಪ್ ಮಾಡುತ್ತಿರಿ.

Tech Talk
RaviHegde.jpg
– ರವಿ ಹೆಗಡೆ
ಎಲ್ಲಾದರೂ ಇರಿ. ಎಂತಾದರೂ ಇರಿ. ಆನ್ ಲೈನಲ್ಲಿ ಕನ್ನಡ ಟೈಪ್ ಮಾಡುತ್ತಿರಿ.
ವೆಬ್ ಸೈಟುಗಳಲ್ಲಿ ಕನ್ನಡ ಟೈಪ್ ಮಾಡಲು ಅನೇಕ ವಿಧಾನಗಳಿವೆ ಅಂತ ನನ್ನ ಈ ಹಿಂದಿನ ಲೇಖನದಲ್ಲಿ ತಿಳಿಸಿದ್ದೆ. ಈಗ ಅದೆಲ್ಲಕ್ಕಿಂತ ಇನ್ನೂ ಸುಲಭದ ವಿದ್ಯೆಯನ್ನು ಕಲಿಸಿಕೊಡುತ್ತೇನೆ. Thanks to Google’s Newest Bookmarklet!
ಭಾರತೀಯ ಭಾಷಾ ಟೂಲ್ ಅಭಿವೃದ್ಧಿಯಲ್ಲಿ ಗೂಗಲ್ ಇನ್ನೂ ಒಂದು ಹೆಜ್ಜೆ ಮುಂದೆ ಬಂದಿದೆ. ಮೂರು ತಿಂಗಳ ಹಿಂದೆ ಕನ್ನಡ ಸೇರಿದಂತೆ ಭಾರತೀಯ ಭಾಷೆಗಳಿಗೆ ಗೂಗಲ್ ಲಿಪ್ಯಂತರ (Transliteration) ಟೂಲ್ ನೀಡಿತ್ತು ತಾನೇ? ಆದರೆ, ಆ ಟೂಲ್ ಗೂಗಲ್ ಒಡೆತನದ ಜಿಮೇಲ್, ಬ್ಲಾಗರ್ ಮುಂತಾದ ಸೈಟುಗಳಲ್ಲಿ ಮಾತ್ರ ಕೆಲಸ ಮಾಡುತ್ತಿತ್ತು. ಇದೀಗ, ಜೂನ್ 4ರಂದು, ಕನ್ನಡ ಬುಕ್ಮಾರ್ಕ್-ಲೆಟ್ ಎಂಬ ವಿನೂತನ ಟೂಲನ್ನು ಗೂಗಲ್ ಬಿಡುಗಡೆ ಮಾಡಿದೆ. ಈ ಟೂಲಿಂದ ಯಾವುದೇ ಸೈಟಿನಲ್ಲಿ ಬೇಕಾದರೂ ಕನ್ನಡ ಅಥವಾ ಇತರ ಭಾರತೀಯ ಭಾಷೆಯನ್ನು ಸುಲಭವಾಗಿ ಟೈಪ್ ಮಾಡಬಹುದು. ಕನ್ನಡ ಟೈಪ್ ಮಾಡಲು ಹೆಣಗಾಡುವ ಎಲ್ಲರಿಗೂ ಈ ಟೂಲ್ ನಿಜಕ್ಕೂ ಒಂದು ವರ.
ಅಂದಹಾಗೆ, ಬುಕ್ಮಾರ್ಕ್-ಲೆಟ್ ಅಂದರೆ ಏನು ಅಂತ ನೀವು ಕೇಳಬಹುದು. Bookmark + Applet ಸೇರಿ Bookmarklet ಆಗಿದೆ. ಇದೊಂದು ಅತ್ಯಂತ ಪುಟಾಣಿ ತಂತ್ರಾಂಶ. ಕೆಲವಾರು ಸಾಲುಗಳ ಜಾವಾಸ್ಕ್ರಿಪ್ಟ್ ಅಷ್ಟೇ. ನಿಮ್ಮ ಬ್ರೌಸರಿನಲ್ಲಿ ಇದನ್ನು ಫೇವರೆಟ್ ಲಿಂಕ್ ಆಗಿ ಸೇರಿಸಿಕೊಂಡರೆ ಸಾಕು.

ಕನ್ನಡ ಟೈಪ್ ಮಾಡಬೇಕು ಅನ್ನಿಸಿದಾಗ ಈ ಲಿಂಕ್ ಒತ್ತಬೇಕು. ಕನ್ನಡ ಲಿಪ್ಯಂತರ ಕ್ರಿಯೆ ಚಾಲೂ ಆಗುತ್ತದೆ. ಕನ್ನಡ ಟೈಪಿಂಗ್ ಬೇಡ ಅನ್ನಿಸಿದಾಗ ಮತ್ತೆ ಈ ಲಿಂಕ್ ಒತ್ತಿದರೆ ಲಿಪ್ಯಂತಕ ಕ್ರಿಯೆ ಸ್ಥಗಿತಗೊಳ್ಳುತ್ತದೆ.

ಇದು ಸಹ “ಫೊನೆಟಿಕ್ ಕೀಬೋರ್ಡ ವಿನ್ಯಾಸ” ಆಧಾರಿತ ಟೂಲ್. ಅಂದರೆ, “Baruttane ಅಂತ ಟೈಪ್ ಮಾಡಿ ಒಂದು ಸ್ಪೇಸ್ ನೀಡಿದರೆ “ಬರುತ್ತಾನೆ” ಅಂತ ತಂತಾನೆ ಲಿಪ್ಯಂತರವಾಗುತ್ತದೆ.
ಈ ಟೂಲನ್ನು ಫೇವರಿಟ್ ಲಿಂಕ್ ಆಗಿ ನಿಮ್ಮ ಬ್ರೌಸರಿಗೆ ಸೇರಿಸಿಕೊಳ್ಳುವುದು ಹೇಗೆ?
1. ಮೊದಲು ಈ ಲಿಂಕಿನ ಮೇಲೆ ರೈಟ್ ಕ್ಲಿಕ್ ಮಾಡಿ. 
2. ಈಗ “Add to Favorites” ಕ್ಲಿಕ್ ಮಾಡಿ.

3. ಈಗ ಈ ಕೆಳಗಿನ ಎಚ್ಚರಿಕೆಯ ಸಂದೇಶ ಮೂಡುತ್ತದೆ. ಹೆದರ ಬೇಡಿ. Yes ಬಟನ ಒತ್ತಿ. ಏಕೆಂದರೆ, ಈ ಲಿಂಕ್ ಏನೇನೂ ಅಪಾಯಕಾರಿಯಲ್ಲ.

4. ಈಗ Links ಡೈರಕ್ಟರಿಯಲ್ಲಿ ಈ ಲಿಂಕನ್ನು ಸೇರಿಸಲು Add ಬಟನ್ ಒತ್ತಿ. ಅಷ್ಟೇ.

5. ನಿಮ್ಮ ಕನ್ನಡ ಲಿಪ್ಯಂತರ ಲಿಂಕ್ ಸಿದ್ಧ.

6. ಬ್ರೌಸರಿನ ಮೇಲಿರುವ [ಅ Type in Kannada] ಬಟನ್ ಒತ್ತಿ. ಕನ್ನಡ ಲಿಪ್ಯಂತರ ಕ್ರಿಯೆ ಆರಂಭವಾಗುತ್ತದೆ. ಈಗ ವೈಬ್ ಪೇಜಿನಲ್ಲಿ ಎಲ್ಲಿ ಕನ್ನಡ ಟೈಪ್ ಮಾಡಬೇಕೋ ಅಲ್ಲಿ ನಿಮ್ಮ ಮೌಸಿನ ಕರ್ಸರ್ ಇಟ್ಟು ಟೈಪಿಂಗ್ ಆರಂಭಿಸಿ. ಉದಾಹರಣೆಗೆ Sedina Hakki ಅಂತ ಟೈಪ್ ಮಾಡಿ. ಅದು ಸೇಡಿನ ಹಕ್ಕಿ ಅಂತ ಬದಲಾಗುತ್ತದೆ.
ಈ ರೀತಿ ನೀವು ಸುಲಭವಾಗಿ ಯಾವುದೇ ವೆಬ್ ಪೇಜಿನಲ್ಲೂ ಕನ್ನಡ ಟೈಪ್ ಮಾಡಬಹುದು.
ಈ ಟೂಲ್ Internet Explorer, Fifox, Chrome ಹಾಗೂ Safari ಬ್ರೌಸರಿಗೆ ಲಭ್ಯ. ವಿವರಗಳಿಗೆ ಇಲ್ಲಿ ನೋಡಿ.

‍ಲೇಖಕರು avadhi

June 8, 2009

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಹೆರಬೈಲು ದ್ಯಾವರ ಕೋಳಿಪಳ್ದಿ ಊಟ ಮತ್ತು ಬೊಚ್ಚ ಗಿರಿಯಣ್ಣ ಮಾಸ್ತರ

ಹೆರಬೈಲು ದ್ಯಾವರ ಕೋಳಿಪಳ್ದಿ ಊಟ ಮತ್ತು ಬೊಚ್ಚ ಗಿರಿಯಣ್ಣ ಮಾಸ್ತರ

ಈ ಉತ್ತರ ಕರ್ನಾಟಕದ ಭಾಷೆಗೆ ಗಂಡು ಮೆಟ್ಟಿನ ನಾಡು, ನಾಡಿನ ಭಾಷೆ ಅಂತ ಅನ್ನುತ್ತಾರಲ್ಲ ಹಾಗೆ ಈ ಉತ್ತರ ಕನ್ನಡಕ್ಕೆ ಸಮುದ್ರ ಮೆಟ್ಟಿದ ನೆಲ,...

2 ಪ್ರತಿಕ್ರಿಯೆಗಳು

  1. suresh kota

    ತುಂಬಾ ತುಂಬಾ ಉಪಯುಕ್ತ ಮಾಹಿತಿ. ಧನ್ಯವಾದಗಳು.

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: