ಕಾರ್ಪೊರೇಟ್‌ ಪ್ರಪಂಚದ ಗೆರಿಲ್ಲಾ ಕದನ ‘ಬೇಟೆಯಲ್ಲ ಆಟವೆಲ್ಲ’

ಕಥೆಗಾರ, ಆರ್ಥಿಕ ವಿಶ್ಲೇಷಣಾಕಾರ ಎಂ ಎಸ್ ಶ್ರೀರಾಮ್ ಅವರ ಹೊಸ ಪುಸ್ತಕ ಮಾರುಕಟ್ಟೆಯಲ್ಲಿದೆ

ಅಕ್ಷರ ಪ್ರಕಾಶನ ಈ ಕೃತಿಯನ್ನು ಹೊರತಂದಿದ್ದು ಕೃತಿಗೆ ಇನ್ನೋರ್ವ ಕಥೆಗಾರ ವಿಕ್ರಂ ಹತ್ವಾರ್ ಬರೆದ ಬೆನ್ನುಡಿ ಇಲ್ಲಿದೆ.

ವಿಕ್ರಂ ಹತ್ವಾರ್

ಕೇವಲ ರೋಚಕ ಕತೆಯಷ್ಟೆ ಅಲ್ಲ. ಇದು-ತಲೆಮಾರುಗಳ ಘರ್ಷಣೆಯಂತೆ ತೋರುತ್ತಲೇ, ಒಂದೇ ತಲೆಮಾರಿನೊಳಗೆ ಹುದುಗಿರುವ ವಿಭಿನ್ನ ಮನೋಧರ್ಮಗಳ ತುಮುಲಗಳು ಒಂದರ ಮೇಲೊಂದು ಸವಾರಿ ಮಾಡುತ್ತ, ಒಂದಕ್ಕೊಂದು ಹೆಣಿಗೆ ಹಾಕಿಕೊಳ್ಳುತ್ತ ತಲೆಮಾರುಗಳ ನಡುವಿನ ಗೆರೆಯನ್ನು ಸ್ವಲ್ಪ ಸ್ವಲ್ಪವೇ ಮಸುಕಾಗಿಸುವ ಕತೆ.

ವ್ಯಾಪಾರೋದ್ಯಮದ ನವಸಂಸ್ಕೃತಿಯು ಧರ್ಮ, ರಾಜಕೀಯ, ಪ್ರೇಮ, ನೈತಿಕತೆಯನ್ನು ವಶಪಡಿಸಿಕೊಂಡು ಹೇಗೆ ಅವುಗಳನ್ನು ಮರುವ್ಯಾಖ್ಯಾನಿಸಿದೆ, ಇಂದಿನ ರಾಜಕೀಯ ಸನ್ನಿವೇಶವು ನಮ್ಮೊಳಗೆ ಹೊಸ ಬಗೆಯ ಪೂರ್ವಾಗ್ರಹಗಳನ್ನು ಹೇಗೆ ತುಂಬಿಸುತ್ತಿದೆ ಅನ್ನುವುದನ್ನು ನಿರೂಪಿಸುವ ಕತೆ. ಜೀವನ ನಿರ್ವಹಣೆಗೆ ಆಧುನಿಕತೆಯ ಲಗಾಮು ಹಿಡಿದು, ಜೀವನ ವಿಧಾನದಲ್ಲಿ ಧಾರ್ಮಿಕ ನಂಬಿಕೆಯ ಪೋಷಾಕುಗಳಿಗೆ ಮೊರೆಹೋಗುವ ಅಖ್ತರ್‌ ಒಂದು ತುದಿಯಲ್ಲಿ.

ಧಾರ್ಮಿಕ ಸ್ಥಂಬಗಳನ್ನು ಒಡೆದು ಆಧುನಿಕ ಚಿಂತನದ ಪೋಷಾಕು ಧರಿಸಿರುವ ಅನಿರುದ್ಧ ಇನ್ನೊಂದು ತುದಿ. ಅಪ್ಪಟ ವ್ಯಾಪಾರೀ ಮನೋಧರ್ಮದ ಶಿವಾನಿ ಮತ್ತೊಂದೇ ತುದಿ. ಈ ತ್ರಿಕೋಣದ ನಡುವೆ ಸುಜಾತ ಮೂರೂ ಬಿಂದುಗಳನ್ನು ಎಂದೂ ಮುಟ್ಟಲಾಗದ ಒಳವರ್ತುಲವಾದರೆ, ಚಿನ್ಮಯ ಆ ಬಿಂದುಗಳ ಬೆಸೆಯುವ ಗೆರೆಗಳನ್ನು ಎಂದೂ ಮುಟ್ಟಲಾಗದ ಹೊರವರ್ತುಲ.

ಇಂಥ ಪಾತ್ರಗಳ ಜಂಜಾಟಗಳೇ ಈ ಕಾಲದ ಜಟಿಲತೆಯನ್ನು ನನ್ನ ಮನಸ್ಸಿನ ಮೇಲೆ ಗಾಢವಾಗಿ ಅಚ್ಚೊತ್ತಿದೆ. ಶಿವಾನಿಯ ಪಾತ್ರ ಕನ್ನಡ ಜಗತ್ತಿನಲ್ಲಿ ಹೊಸತೊಂದು ಚರ್ಚೆಯನ್ನು ಹುಟ್ಟುಹಾಕುವಷ್ಟು ಗರಿಗರಿಯಾಗಿದೆ. ಕತೆಗಾರ ಪಾತ್ರಗಳ ಜಗತ್ತನ್ನು ಆಕ್ರಮಿಸದಿದ್ದಾಗ ಆ ಪಾತ್ರ ಎಷ್ಟು ಪ್ರಖರವಾಗಿ ನಿಲ್ಲಬಹುದು ಅನ್ನುವುದಕ್ಕೊಂದು ಉದಾಹರಣೆ – ಶಿವಾನಿ.

ಅರ್ಬನ್‌ ಜಗತ್ತಿನ ತಾಜಾ ಅನಾವರಣ ಇಲ್ಲೊಂದು ವಿಶಿಷ್ಟ ಮಾಹೋಲ್‌ ನಿರ್ಮಿಸಿದೆ. ಹಳೆಯ ರೂಪಕದಂತಿರುವ ಮಾಯಾಬಜಾರಿನಲ್ಲಿ ಹೊಸ ವ್ಯಾಪಾರೀ ಮಳಿಗೆಗಳ ಗಾಜುಗೋಡೆಗಳ ಮೇಲೆ ನಮ್ಮೆಲ್ಲರ ಆಚೆ ಈಚಿನದನ್ನು ಒಟ್ಟಿಗೇ ಕಾಣಿಸುವ ಕಲಸುಮೇಲೋಗರದಂಥ ಪ್ರತಿಫಲನವಿದೆ.

‍ಲೇಖಕರು Avadhi

November 25, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಮಾಲತೇಶ ಅಂಗೂರರ ‘ಹಾವೇರಿಯಾಂವ್’

ಮಾಲತೇಶ ಅಂಗೂರರ ‘ಹಾವೇರಿಯಾಂವ್’

ಸತೀಶ ಕುಲಕರ್ಣಿ ಹಾವೇರಿ ನೆಲದ ಮಾತುಗಳಿಗೊಂದು ವಿಚಿತ್ರ ರುಚಿ ಇದೆ. ಸಿಟ್ಟು ಸೆಡವು, ಗಡಸು ಗಿಚ್ಚಿ ಹೊಡೆಯುವ ಮೊನಚು ಇವುಗಳದ್ದು. ವ್ಯಂಗ್ಯ...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This