ಕೆಲವು ನ್ಯಾನೋ ಕಥೆಗಳು

ಎರಡು ಪ್ರಶ್ನೆ ಮತ್ತೆ ಇತರೆ ಕಥೆಗಳು….

– ಮೋಹನ್ ವಿ ಕೊಳ್ಳೇಗಾಲ

ಭಾವಗೊ೦ಚಲು

ಎರಡು ಪ್ರಶ್ನೆ…. ಆತ ಆಶ್ರಮಕ್ಕೆ ಬಂದು ಸ್ವಾಮೀಜಿಗೆ ಗದರಿಸಿದ: “ನಾನ್ಯಾರು ಗೊತ್ತೇ?” ಸ್ವಾಮೀಜಿ ಶಾಂತಚಿತ್ತರಾಗಿ ಹೇಳಿದರು: ಗೊತ್ತಿಲ್ಲ, ಅದಿರಲಿ ನಿನಗೇನಾದರು ಗೊತ್ತೆ “ನಾನಾರೆಂದು?”   ಹೆಸರು… ಅವರಿಬ್ಬರೂ ಓಡಿಹೋಗಿ ಮದುವೆಯಾದರು. ಬೇರೆ ಬೇರೆ ಜಾತಿಯಾದುದರಿಂದ ಹುಡುಗಿಯನ್ನು ಹೆತ್ತವರೇ ಕೊಂದುಬಿಟ್ಟರು. ಮಾಧ್ಯಮದವರು ಅದಕ್ಕೆ ನೀಡಿದ ಹೆಸರು “ಮರ್ಯಾದಾ ಹತ್ಯಾ!”   ಸಹಪಂಕ್ತಿ… ಇಬ್ಬರ ನಡುವೆ ವಾದ ವಿವಾದ ನಡೆಯುತ್ತಿತ್ತು. ಒಬ್ಬ ಸಹಪಂಕ್ತಿ ಭೋಜನ ಸರಿ ಎಂದ ಮತ್ತೊಬ್ಬ ತಪ್ಪು ಎಂದ. ಇಬ್ಬರು ಕುಳಿತಿದ್ದದ್ದು ಮಾತ್ರ “ಸಹಪಂಕ್ತಿ ಕೇಶ ಮುಂಡನಕ್ಕೆ!” ಇವರಿಗಿಂತ ಮುಂಚೆ ಹತ್ತಾರು ಜನಕ್ಕೆ ಒಂದೇ ಕತ್ತರಿ ಬಾಚಣಿಗೆ ಉಪಯೋಗಿಸಿದ್ದ ಕ್ಷೌರಿಕ ಮಾತ್ರ ನಗುತ್ತಿದ್ದ. ಅಷ್ಟರಲ್ಲಿ ಮುಂದಿನ ಹೋಟೇಲಿನಲ್ಲಿ ಎಲ್ಲರಿಗೂ ಸೇರಿ ನಾಲ್ಕು ಲೋಟದಲ್ಲಿ ಟೀ ತರಿಸಲಾಯಿತು.   ಭಾರತರತ್ನ… ತನ್ನ ದೇಶದ ಹೆಮ್ಮೆಯ ಕ್ರಿಕ್ಕೆಟ್ಟಿಗನೊಬ್ಬನಿಗೆ “ಭಾರತ ರತ್ನ” ಪ್ರಶಸ್ತಿ ನೀಡಲಾಯಿತು. ಆತ ಕೋಕ್ ಕುಡಿಯುತ್ತಾ ಜಾಹಿರಾತಿನಲ್ಲಿ ಕಾಣಿಸಿಕೊಂಡ ತಕ್ಷಣವೇ ಅಪ್ಪ ಮುಖ ಅರಳಿಸಿ ನುಡಿದ “ಈತನೇ ಭಾರತರತ್ನ” ಮಗು ನುಡಿಯಿತು: “ಅಪ್ಪ ಕೋಕಿನಲ್ಲಿ ವಿಷವಿದೆಯಂತೆ”   ಧರ್ಮ…   ಆ ಸಂತನನ್ನು ಒಬ್ಬಾತ ಕೇಳಿದ “ಧರ್ಮವೆಂದರೇನು ಗುರುಗಳೇ?” ಪಕ್ಕದಲ್ಲಿರುವ ಮಗು ಮತ್ತೊಂದು ಮಗುವಿಗೆ ಹೇಳುತ್ತಿತ್ತು – “ನಮ್ಮ ಮನೆಯಲ್ಲಿ ಒಟ್ಟು 50 ನಲ್ಲಿಗಳಿವೆ, ಎಲ್ಲದಕ್ಕೂ ನೀರು ಬರುವುದು ಮಾತ್ರ ಮೇಲಿನ ಟ್ಯಾಂಕ್ ನಿಂದ” ಸಂತ ನಕ್ಕು ನುಡಿದ – “ಅದೇ ಶ್ರೇಷ್ಟ ಉತ್ತರ, ಯೋಚಿಸು”   ಅವರವರ ಭಾವ… ಮನೆಯವರ ವಿರೋಧದಿಂದ ಬೇಸರವಾಗಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡರು ಹುಡುಗಿಯ ಕಡೆಯವರು: ಪಾಪಿ ಹುಡುಗ, ನನ್ನ ಮಗಳ ಜೀವ ತಿಂದುಕೊಂಡ ಹುಡುಗನ ಕಡೆಯವರು: ದರಿದ್ರ ಹುಡುಗಿ, ನನ್ನ ಮಗನ ಜೀವ ನುಂಗಿಕೊಂಡಳು ಅಲ್ಲಿದ್ದ ಒಂದು ಮಗು: ಪಾಪಿ ಮುಂಡೆ ಮಕ್ಕಳು, ಎರಡು ಜೀವ ತಿಂದುಬಿಟ್ಟರು!   ಜ್ಯೋತಿಷಿ… ಈ ಪೂಜೆ ಮಾಡಿ ನಿಮಗೆ ತಿಂಗಳಲ್ಲಿಯೇ ಕೋಟಿ ಕೋಟಿ ಲಾಭ ಬರುವಂತೆ ಮಾಡಿಕೊಡುತ್ತೇನೆ ಎಂದು ಆ ಜ್ಯೋತಿಷಿ ಹೇಳಿದ ಆತ: ಮತ್ತೆ ಪೂಜೆ ನಡೆಯಲಿ ಸ್ವಾಮಿ.. ಜ್ಯೋತಿಷಿ: ಪೂಜೆಯ ಖರ್ಚು 500 ಆಗುತ್ತದೆ…]]>

‍ಲೇಖಕರು G

June 28, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಕಡಲಂತರಾಳವ ಬಲ್ಲವರಾರು?

ಕಡಲಂತರಾಳವ ಬಲ್ಲವರಾರು?

ಶಿವಲೀಲಾ ಹುಣಸಗಿ ಯಲ್ಲಾಪುರ ಪ್ರತಿ ದಿನವೂ ಪ್ರೀತಿಯ ಹುಚ್ಚ ಹಿಡಿಸಿದವ ಒಮ್ಮಿಂದೊ ಮ್ಮೆಲೆ ಮೌನವಾಗಿದ್ದು, ಕೊನೆಗವನು ನನಗರಿವಿಲ್ಲದೆ ಮಂಪರು...

ಆರನೇ ಬೆರಳು

ಆರನೇ ಬೆರಳು

ಬಸವಣ್ಣೆಪ್ಪ ಕಂಬಾರ ಸುಂಕದ ಕಟ್ಟೇಲಿ ಚಿನ್ನವ್ವ ತುಂಬ ಅದೃಷ್ಟದ ಹೆಂಗಸು ಎಂದು ಮನೆಮಾತಾಗಿದ್ದಳು. ಮನೆ ಗುದ್ದಲಿ ಪೂಜೆ, ಬಾಣಂತನಕ್ಕೆ, ಮಗಳನ್ನು...

ಹಬ್ಬಿದಾ ಬಲೆ ಮಧ್ಯದೊಳಗೆ…

ಹಬ್ಬಿದಾ ಬಲೆ ಮಧ್ಯದೊಳಗೆ…

ರಾಜು ಎಂ ಎಸ್ ಸಾಲಿಗುಡಿ ಬಿಟ್ ಕೂಡ್ಲೇ ನಿಂಗಿ, ಗುಡ್ಲು ಕಡಿಕ್ ಹೊಂಟವ್ಳು... ತಾರ್ಸಿ ಮನೆ ಗುರ್ಲಿಂಗಪ್ಪನ್  ಮಗ್ಳು ಪರಿಮಳ ತನ್...

4 ಪ್ರತಿಕ್ರಿಯೆಗಳು

  1. savitri

    ಸೊಗಸಾದ ಕಥೆಗಳು. “ಧರ್ಮ” ಕಥೆ ತುಂಬ ಇಷ್ಟವಾಯಿತು:-)

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: