‘ಛಂದ’ ತಂದ ದತ್ತಾತ್ರಿ ಕಾದಂಬರಿ


 

ಜಾಗತಿಕ ಅರ್ಥವ್ಯವಸ್ಥೆಯಲ್ಲಿ ಉಂಟಾಗಿರುವ ಹೊಸ ಕಾಲಮಾನದ ಪ್ರಭಾವಗಳು, ಐಟಿ ಬೀಟಿ ಕ್ಷೇತ್ರಗಳಲ್ಲಿ ಉಂಟಾಗಿರುವ ಅಸ್ಥಿರತೆ, ವಲಸೆಗೆ ಒತ್ತಾಯಿಸುವ ಬೀಸುಗಾಳಿಯ ಶಕ್ತಿ- ಸೂಕ್ಷ್ಮ ಸಂವೇದಿಗಳಾದ ನಮ್ಮ ತರುಣ ಜನಾಂಗದ ಮೇಲೆ ಯಾವ ಬಗೆಯ ಒತ್ತಡ ತರಬಲ್ಲವೆಂಬುದರ ಹೃದಯವೇಧಕ ಚಿತ್ರ ಎಂ.ಆರ್.ದತ್ತಾತ್ರಿಯವರ ದ್ವೀಪವ ಬಯಸಿ ಕಾದಂಬರಿಯಲ್ಲಿ ಇದೆ.

ಇಲ್ಲಿನದು ಒಂದು ವಿಸ್ತೃತವಾದ ಪರಿಪ್ರೇಕ್ಷ್ಯ. ಭಾರತದಿಂದ ಅಮೆರಿಕೆಗೆ, ಅಮೆರಿಕೆಯಿಂದ ಭಾರತಕ್ಕೆ ತುಯ್ಯುವ ಕಥಾನಕವು ಈ ವಿರುದ್ಧ ಚಲನೆಗಳಿಂದಲೇ ತನ್ನ ಕರ್ಷಣ ದ್ರವ್ಯವನ್ನು ಪಡೆಯುತ್ತದೆ. ಶ್ರೀಕಾಂತ, ವಾಣಿ ಈ ಕರ್ಷಣೆಯ ಪ್ರಜ್ಞಾಕೇಂದ್ರಗಳಾಗಿದ್ದಾರೆ. ಅವರ ಅನುಭವವನ್ನು ಶೋಧಿಸುವಲ್ಲಿ ಬಳಸಲಾಗುವ ಪಾತ್ರ ಮತ್ತು ಘಟನೆಗಳ ಪ್ರತಿಮಾ ಸಮೂಹವು ಬೆರಗುಪಡಿಸುವಷ್ಟು ಧ್ವನಿಪೂರ್ಣವಾಗಿದೆ.

ಇಟಲಿಯ ಜಾನಪದ ಕಥೆ, ಡ್ಯಾನಜಾಕ್ಸನ್ ಅವರ ಹಕ್ಕಿಗಳ ಚಿತ್ರಿಕೆಗಳ ಪ್ರದರ್ಶನ, ಸಮಿಂದ ಮದುರಸಿಂಘೆಯವರ ಶ್ರೀಲಂಕಾದ ಆಂತರಿಕ ಯುದ್ಧಕ್ಕೆ ಸಂಬಂಧಿಸಿದಂತೆ ರಣರಂಗದಲ್ಲಿ ಬುದ್ಧನನ್ನು ಹುಡುಕುವ ಯೋಧನ ಫೋಟೋಗ್ರಾಫ್, ಮಹಿಂದನ ಡೈರಿ, ಯೊಸಿಮಿಟಿ ಎನ್ನುವ ಪ್ರಕೃತಿಸ್ವರ್ಗದಲ್ಲಿ ನಾಯಕ ನಾಯಕಿ ಪಡೆಯುವ ಅಭೌತಿಕ ದಿವ್ಯಾನುಭವ, ಲೈಫ್ ಆಫ್ ಪೈ ಕಥೆ, ಲಾಸೇಂಜಲೀಸಿನ ಕಾಡುಬೆಂಕಿ-ಹೀಗೆ ಇಡೀ ಕಾದಂಬರಿ ಧ್ವನಿಪೂರ್ಣಚಿತ್ರಿಕೆಗಳ ಮೂಲಕ ಮಾತಾಡುತ್ತದೆ.

ಈ ಎಲ್ಲ ಚಿತ್ರಗಳು ಒಗ್ಗೂಡಿ ಕಟ್ಟುವ ಕಥಾನಕ ಮನಸ್ಸನ್ನು ತಲ್ಲಣಗೊಳಿಸುವಷ್ಟು ಪ್ರಭಾವಶಾಲಿಯಾಗಿ ಬಂದಿದೆ. ಇದೀಗಿನ ತುರ್ತು ವರ್ತಮಾನಕ್ಕೆ ಆಕಾರಕೊಡಲು ಬಯಸುವ ಅಧುನಾಪ್ರಜ್ಞೆಯ ಈ ಕಥಾಕೃತಿಯು ಈಚಿನ ದಿನಗಳಲ್ಲಿ ಕನ್ನಡಲ್ಲಿ ಕಾಣಿಸಿಕೊಂಡ ಮಹತ್ವದ ಸಂಕಥನಗಳಲ್ಲಿ ಒಂದಾಗಿದೆ.

ಎಚ್.ಎಸ್.ವೆಂಕಟೇಶ ಮೂರ್ತಿ

ಬೆನ್ನುಡಿಯಿಂದ

 

‍ಲೇಖಕರು G

January 21, 2011

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಬಯಲು ಸೀಮೆಯ ʼಒಕ್ಕಲ ಒನಪುʼ

ಬಯಲು ಸೀಮೆಯ ʼಒಕ್ಕಲ ಒನಪುʼ

ಮಧುಸೂದನ ವೈ ಎನ್ ಈ ಪುಸ್ತಕ ಕೈಗೆ ಸಿಕ್ಕಿ ಒಂದೋ ಎರಡೋ ತಿಂಗಳಾಗಿರಬಹುದು. ಎರಡು ಹಗಲು ಎರಡು ಇನ್ನಿಂಗ್ಸ್‌ ಗಳಲ್ಲಿ ಖತಂ! ಓದಿದ ಎಷ್ಟೋ...

ಗಾಲಿಬನ ಮೇಲಿನ ಪ್ರೀತಿಗಾಗಿ..

ಗಾಲಿಬನ ಮೇಲಿನ ಪ್ರೀತಿಗಾಗಿ..

ವಿರಹ, ವಿಯೋಗ, ವಿದ್ರೋಹ, ಪ್ರೇಮ, ವ್ಯಾಮೋಹ, ವಿಷಣ್ಣತೆ, ತೀವ್ರ ತೊಳಲಾಟ, ಹೂ ಪುಳಕ, ಬದುಕಿನ ಚೆಲುವುಗಳನ್ನು ಗಜಲುಗಳ ಮೂಲಕ ಕಟ್ಟಿ ಕೊಟ್ಟ...

೧ ಪ್ರತಿಕ್ರಿಯೆ

  1. ವಸುಧೇಂದ್ರ

    ಪ್ರಿಯ ಅವಧಿ,

    ಈ ಮುಖಪುಟವನ್ನು ಗೆಳೆಯ ನಾಗರಾಜ ವಸ್ತಾರೆ ಮಾಡಿದ್ದಾನೆ. ದಯವಿಟ್ಟು ಅದನ್ನೂ ತಿಳಿಸಿ.

    ವಸುಧೇಂದ್ರ

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: