ಚಾನಲ್ ಗಳಿಗೆ ಈಗ ಅಗಾಧ ಹಸಿವು

ಜಿ ಎನ್ ಮೋಹನ್

ಮೊನ್ನೆ ಒಂದು ಮಾಧ್ಯಮ ಸಂಕಿರಣಕ್ಕೆ ಹೋಗಬೇಕಾಗಿತ್ತು. ಪತ್ರಿಕೆಗಳ ಪ್ರಸಾರ ಸಂಖ್ಯೆಯ ಸ್ಪರ್ಧೆ, ಚಾನಲ್ ಗಳ ಟಿ ಆರ್ ಪಿ ಆಟಾಟೋಪ, ರೇಡಿಯೋ ಚಾನಲ್ ಗಳ ಪಟ್ ಪಟಾಕಿ ಮಾತಿನ ನಡುವೆ ‘ಅಭಿವೃದ್ಧಿ ಪತ್ರಿಕೋದ್ಯಮ’ಕ್ಕೆ ಏನಾದರೂ ಜಾಗ ಉಂಟೇ ಎಂದು ಹುಡುಕಿ ನೋಡುವ ಪ್ರಯತ್ನ ಅದು. ನನ್ನದು ಹೇಳಿ ಕೇಳಿ ಎಲೆಕ್ಟ್ರಾನಿಕ್ ಮಾಧ್ಯಮದ ಪ್ರಪಂಚ. ಇವತ್ತು ನಾಲ್ಕು ಜನ ಸೇರಿದರೆ ಚಾನಲ್ ಗಳು, ಅದು ಕೊಡುತ್ತಿರುವ ಕಾರ್ಯಕ್ರಮಗಳು ಪ್ರಸ್ತಾಪವಾಗದೆ ಮಾತು ಮುಗಿಯುವುದಿಲ್ಲ. ಚಾನಲ್ ಗಳಲ್ಲಿನ ಭಯ ಬಿತ್ತುವ, ಇನ್ನಷ್ಟು ಮೂಢರನ್ನಾಗಿಸುವ, ಅತಿ ರಂಜಿಸುವ ಗುಣವೇ ಈ ಚರ್ಚೆಗೆ ಕಾರಣವಾಗಿದೆ. ಯಾಕೆ ಹೀಗಾಯ್ತು? ಸುದ್ದಿಗಾಗಿಯೇ ಮೀಸಲಾದ ಚಾನಲ್ ಗಳು ಬರುವವರೆಗೆ ಇಲ್ಲದ ಒಂದು ಅಸಹನೆ ಆನಂತರ ಕಟ್ಟೆಯೊಡೆಯಲು ಏನು ಕಾರಣ? ನ್ಯೂಸ್ ಚಾನಲ್ ಗಳಲ್ಲಿ ಹಾಗಾದರೆ ಸಮಾಜಮುಖಿಯಾದದ್ದು ಏನೂ ಬರುತ್ತಿಲ್ಲವೇ? ಸಮಾಜದ ಒಳಿತು ಚಾನಲ್ ಗಳಿಗೆ ಕಾಣುತ್ತಲೇ ಇಲ್ಲವೇ ಎಂಬ ಪ್ರಶ್ನೆ ಹರಡಿಕೊಂಡು ಕುಳಿತೆ. ಆಗ ಯಾಕೋ ಈ ಹಿಂದೆ ಹೀಗೇ ನೆಟ್ ಲೋಕದಲ್ಲಿ ವಿಹರಿಸುತ್ತಿದ್ದಾಗ ಗಮನಕ್ಕೆ ಬಂದ ಎರಡು ಖಾಯಿಲೆಗಳ ನೆನಪಾಯಿತು. ಆ ಖಾಯಿಲೆಗಳಿಗೂ ಚಾನಲ್ ನ ಇಂದಿನ ಸ್ಥಿತಿಗೂ ಏನಾದರೂ ಸಂಬಂಧವಿದೆಯಾ ಎಂದು ನಾನು ಹುಡುಕುತ್ತಾ ಹೋದೆ. ಆ ಖಾಯಿಲೆಯಲ್ಲಿ ಒಂದು Anosmia. ಇದು ವಾಸನೆಯೇ ಗೊತ್ತಾಗದ ಖಾಯಿಲೆ. ಅದು ಪರಿಮಳವಿರಲಿ, ದುರ್ನಾತವಿರಲಿ ಏನೇನೂ ಗೊತ್ತಾಗದ ಖಾಯಿಲೆ. ಇಂತಹ ಖಾಯಿಲೆಯೇನಾದರೂ ನಮ್ಮ ಚಾನಲ್ ಗಳಿಗೆ ಹರಡಿಕೊಂಡಿದೆಯೇ? ಪತ್ರಿಕೋದ್ಯಮದ ತರಗತಿಗಳಲ್ಲಿ ಮೊದಲು ಕಲಿಸುವ ಪಾಠವೇ ಸುದ್ದಿ ನಾಸಿಕದ ಬಗ್ಗೆ. Nose for the News. ಸುದ್ದಿ ಎಲ್ಲಿದ್ದರೂ ಅದರ ವಾಸನೆ ಹಿಡಿಯುವ ಶಕ್ತಿ ಪತ್ರಕರ್ತನ ಮೂಗಿಗಿರಬೇಕು. ಆದರೆ ಮೂಗಿಗೆ ಏನಾದರೂ ಈ Anosmia (ವಾಸನೆ ಹಿಡಿಯಲಾಗದ ರೋಗ) ಹತ್ತಿದೆಯೇ? ನಾನು ಗುಲ್ಬರ್ಗದಲ್ಲಿದ್ದಾಗ ಒಂದು ದುರಂತವನ್ನು ಗಮನಿಸಿದೆ. ಯುಗಾದಿ ಎಂಬುದು ಅಲ್ಲಿ ಸಂಭ್ರಮವಲ್ಲ, ಸಾವಿನ ಕುಣಿಕೆಯಾಗಿತ್ತು. ಯುಗಾದಿ ಹತ್ತಿರ ಬರುತ್ತಿದ್ದಂತೆ ಗುಲ್ಬರ್ಗದ ಹಳ್ಳಿಗಳಲ್ಲಿ ಸಾಲು ಸಾಲು ಆತ್ಮಹತ್ಯೆಗಳಾಗುತ್ತಿದ್ದವು. ಏಕೆ ಹೀಗೆ? ಎಂದು ನಾನು ಬೆಂಬತ್ತಿದಾಗ ಅನಾವರಣಗೊಂಡದ್ದು ಕೃಷಿಕ ಜಗತ್ತಿನ ಧಾರುಣ ಕಥೆ. ಒಳ್ಳೆಯ ಫಸಲು, ನೆಮ್ಮದಿಯ ಜೀವನ ಬಯಸುವ ರೈತ ಆ ಕಾರಣಕ್ಕಾಗಿ ಪಡೆದ ಸಾಲವನ್ನು ಬಡ್ಡಿ ಸಮೇತ ತುಂಬಿಸಿ ಕೊಡಬೇಕಾಗಿತ್ತು. ಇದಕ್ಕೆ ಗಡುವು ಯುಗಾದಿ. ಇಲ್ಲದ ಮಳೆ, ಕಳಪೆ ಕ್ರಿಮಿನಾಶಕ, ಜೀವ ಕಳೆದುಕೊಂಡ ಬೀಜ ರೈತನ ನೆಮ್ಮದಿಯನ್ನು ಹೊಸಕಿಹಾಕಿಬಿಡುತ್ತಿತ್ತು. ಯುಗಾದಿ ಇನ್ನೇನು ಹತ್ತಿರ ಬಂತು ಎನ್ನುವಾಗ ಸಾಲ ತೀರಿಸಲಾಗದ ಭಯದಲ್ಲಿ ಆತ ಅದೇ ಕ್ರಿಮಿನಾಶಕಕ್ಕೆ ಶರಣಾಗಿಬಿಡುತ್ತಿದ್ದ. ಇಂತಹ ಹತ್ತು ಹಲವಾರು ಕಥೆಗಳು ಗ್ರಾಮೀಣ ಕರ್ನಾಟಕದಲ್ಲಿ ಹರಡಿ ಕೂತಿವೆ. ಗ್ರಾಮೀಣ ಭಾಗದ ಮಾತು ಇರಲಿ ನಗರಗಳಲ್ಲೇನಾದರೂ ಸಾವಿನ ಕಥೆಗಳಿಗೆ ಕಡಿಮೆ ಇವೆಯೇ? ಇದನ್ನೇ ಸಾಯಿನಾಥ್ Sunshine ಮತ್ತು Sobbing stories ಅಂತ ಕರೆದರು. ಆರ್ಥಾತ್ ಜಗ ಮಗ ಹೊಳೆಯುವ ಮತ್ತು ಅಳುಬುರುಕ ಸುದ್ದಿಗಳು ಅಂತ. ಇಂದು ಮಾಧ್ಯಮಕ್ಕೆ ಬೇಕಿರುವುದು ಜಗಮಗ ಹೊಳೆಯುವ ಸುದ್ದಿಗಳು ಮಾತ್ರ. ಯುಗಾದಿ ಸಾವಿನಂಥಹ ಅಳುಬುರುಕ ಸುದ್ದಿಗಳಿಂದ ಟಿ ಆರ್ ಪಿ ಬರುತ್ತದೆಯೇ ಎನ್ನುವ ಪ್ರಶ್ನೆ ತಕ್ಷಣವೇ ಎದ್ದು ನಿಲ್ಲುತ್ತದೆ. ಆಗಲೇ ನನಗೆ ಇನ್ನೊಂದು ಖಾಯಿಲೆಯ ನೆನಪಾದದ್ದು. Gluttomy Gene ಅಂತ ಒಂದಿದೆ. ಇದು ಆಸೆಬುರುಕ ಜೀನ್. ಸಿಕ್ಕಷ್ಟೂ ಮುಕ್ಕಬೇಕು, ಅದು ಏನಾದರೂ ಸರಿ ಎನ್ನುವ ಚಪಲ. ಈ ಜೀನ್ ಮೆದುಳು ಮತ್ತು ದೇಹದ ನಡುವೆ ಇರುವ ಸಂಪರ್ಕವನ್ನೇ ಕಿತ್ತುಹಾಕಿಬಿಡುತ್ತದೆ. ಆಗ ಮೊದಲು ಪೆಟ್ಟು ಬೀಳುವುದೇ ವಿವೇಚನೆಗೆ, ಎಷ್ಟು ತಿನ್ನಬೇಕು, ಏನು ತಿನ್ನಬೇಕು ಎನ್ನುವ ವಿವೇಚನೆಯೇ ಮರೆಗೆ ಸರಿಯುತ್ತದೆ. ಇವತ್ತಿನ ಸುದ್ದಿ ವಾಹಿನಿಗಳಿಗೆ ಸದಾ ಏನನ್ನಾದರೂ ಉಣಬಡಿಸುತ್ತಲೇ ಇರಬೇಕು. ಹೇಳಿ ಕೇಳಿ ನ್ಯೂಸ್ ಚಾನಲ್ ಗಳು ಕೆಲಸ ಮಾಡುವುದು ಸೆಕೆಂಡ್ ಗಳ ಲೆಕ್ಕದಲ್ಲಿ. ಅಂದರೆ ಒಂದು ದಿನ ಎನ್ನುವುದು ಚಾನಲ್ ಗಳಿಗೆ 86, 400 ಸೆಕೆಂಡ್ ಗಳು. ಈ 86 ಸಾವಿರ ಸೆಕೆಂಡ್ ಗಳ ಕಾಲ ಏನನ್ನಾದರೂ ತಿನ್ನುತ್ತಲೇ ಇರಬೇಕು. ಈ ಧಾವಂತದಲ್ಲಿ ಸರಿ/ತಪ್ಪು, ಅಗತ್ಯ/ಅನಗತ್ಯ ಎನ್ನುವುದನ್ನು ಯೋಚಿಸುವ ಬಗೆ ಹೇಗೆ? ನ್ಯೂಸ್ ಚಾನಲ್ ಗಳ ಧಾವಂತಕ್ಕೆ ಮೊದಲು ಬಲಿಯಾಗುವುದೆ ತರ್ಕ. ಸರಿ ಬಿಡಿ. ಈ ಎರಡೂ ಖಾಯಿಲೆಗಳು ನ್ಯೂಸ್ ಚಾನಲ್ ಗಳಿಗೆ ಇದೆ ಎಂದೇ ಇಟ್ಟುಕೊಳ್ಳೋಣ. ಹಾಗಾದರೆ ಇದಕ್ಕೆ ಪರಿಹಾರವೇ ಇಲ್ಲವೇ?. ಹೌದು ಇಲ್ಲವೇ ಎಂದು ನಾನೂ ಯೋಚಿಸಿದ್ದೇನೆ, ಇದಕ್ಕೊಂದು ಪುಟ್ಟ ಉತ್ತರವೂ ಇದೆ. ಪತ್ರಿಕೆಗಳ ಪ್ರಸಾರ, ಓದುಗರ ಸಂಖ್ಯೆಯ ವಿವರ ಪ್ರಕಟವಾಗುವುದು ವರ್ಷಕ್ಕೆ ಒಂದು ಬಾರಿ. ಟ್ರೆಂಡ್ ಗೊತ್ತಾಗುವುದು ತ್ರೈಮಾಸಿಕದಲ್ಲಿ. ಆದರೆ ನ್ಯೂಸ್ ಚಾನಲ್ ಗಳಿಗೆ ಹಾಗಲ್ಲ. ಟಿ ಆರ್ ಪಿ ಪ್ರತೀ ವಾರ ಪ್ರಕಟವಾಗುತ್ತದೆ. ಟ್ರೆಂಡ್ ವಾರ ಮಧ್ಯೆಯೇ ಸಿಕ್ಕುಬಿಡುತ್ತದೆ. ಹಾಗಾಗಿಯೇ ಪ್ರತೀ ವಾರ ಟಿ ಆರ್ ಪಿ ಯುದ್ಧದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ. ಇದ್ದ ಒಂದೇ ಕೇಕ್ ಗೆ ಹಲವರು ಕೈ ಹಾಕಬೇಕಾದ ಒತ್ತಡ. ಆಗ ಹೊಳೆಯುವುದೇ ಸುಲಭ ದಾರಿಗಳು. ಅಥವಾ ರಾತ್ರಿ ಕಳೆದು ಬೆಳಗಾಗುವುದರೊಳಗೆ ಯಶಸ್ವಿಯಾಗಲು ಇರುವ ಶಾರ್ಟ್ ಕಟ್ ಗಳು. ಜನರನ್ನು ಭ್ರಮೆಗೆ ತಳ್ಳುವ, ಕತ್ತಲನ್ನು ಇನ್ನಷ್ಟು ಹೆಚ್ಚಿಸುವ, ಮೂಢ ನಂಬಿಕೆಗೆ ಇನ್ನಷ್ಟು ತುಪ್ಪ ಸುರಿಯುವ, ಅತಿ ರಂಜಿಸುವ ಶಾರ್ಟ್ ಕಟ್ ಗಳು ಎಲ್ಲರಿಗೂ ಅಸೆ ಹುಟ್ಟಿಸುವುದು ಆಗಲೇ. ಟೆಲಿವಿಷನ್ ರೇಟ್ ಪಾಯಿಂಟ್ಸ್( ಟಿ ಆರ್ ಪಿ) ಎನ್ನುವ ವ್ಯವಸ್ಥೆ ನಿಜಕ್ಕೂ ವೈಜ್ಞಾನಿಕವಾಗಿದೆಯೇ ಎನ್ನುವುದು ಇನ್ನೊಂದು ಪ್ರಶ್ನೆ. ಕೆಲವೇ ನೂರು ಮೀಟರ್ ಗಳು ಆರು ಕೋಟಿ ಜನರ ಬೇಕುಬೇಡಗಳನ್ನು ನಿರ್ಧರಿಸುತ್ತದೆ. ಈ ಮಧ್ಯೆಯೇ ಸಂಸತ್ತು ಈಗ ವರ್ಷಕ್ಕೊಮ್ಮೆ ಟಿ ಆರ್ ಪಿ ಪ್ರಕಟಿಸುವ ಬಗ್ಗೆ ಗಂಭೀರ ಚಿಂತನೆಯಲ್ಲಿ ತೊಡಗಿದೆ. ಹಾಗಾದಲ್ಲಿ ಸಿಕ್ಕಂತೆ ಓಡುತ್ತಿರುವ ಕುದುರೆಗೆ ಒಂದಿಷ್ಟಾದರೂ ವಿವೇಚನೆಯ ಲಗಾಮು ಬೀಳಬಹುದು ಎನ್ನುವ ಆಸೆ ನನ್ನದು. ‘ಸಿಹಿಗಾಳಿ’ಯಲ್ಲಿ ಪ್ರಕಟವಾದ ಬರಹ  ]]>

‍ಲೇಖಕರು G

June 23, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ದೇವನೂರು ಎಂಬ ‘ಜೋತಮ್ಮ’

ದೇವನೂರು ಎಂಬ ‘ಜೋತಮ್ಮ’

ಜಿ ಎನ್ ಮೋಹನ್ ಅದು ಮಾಧ್ಯಮ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ. ದೇಶದ ಪ್ರತಿಷ್ಠಿತ ಮಾಧ್ಯಮ ಕಾಲೇಜುಗಳ ಗಣ್ಯರು ನೆರೆದಿದ್ದರು. ಮಾಧ್ಯಮ...

‘ಎದೆ ತುಂಬಿ ಹಾಡಿದ’ ಎಸ್ ಪಿ ಸರ್…

‘ಎದೆ ತುಂಬಿ ಹಾಡಿದ’ ಎಸ್ ಪಿ ಸರ್…

-ಜಿ ಎನ್ ಮೋಹನ್ 'ಇದು ಕೇಳೋ ಪ್ರಶ್ನೆನಾ..' ಅಂತ ಗದರಿದ ದನಿಯಲ್ಲೇ ಕೇಳಿದೆ. ಎಸ್ ಪಿ ಬಾಲಸುಬ್ರಮಣ್ಯಂ ಅವರ 'ಎದೆ ತುಂಬಿ...

6 ಪ್ರತಿಕ್ರಿಯೆಗಳು

 1. prasad raxidi

  ಟಿ.ಆರ್.ಪಿ. ಅನ್ನುವುದು, ಕಾಫಿ ಉದ್ಯಮದಲ್ಲಿ ಹೇಳುವ ಕಪ್ ಟೇಸ್ಟಿಂಗ್ ನ ಹಾಗೆ ವಿಜ್ಞಾನದ ಮುಸುಕು ಹೊದ್ದ ಅಸಂಬದ್ದ ತೀರ್ಮಾನಗಳು ಅಷ್ಟೇ, ಇವೆಲ್ಲ ದುಡ್ಡಿನ ಲೋಕದ ಹುನ್ನಾರಗಳು, ಬಳಕೆದಾರರನ್ನು ಕೃಷಿಕರನ್ನು- ಮಾದ್ಯಮಗಳಲ್ಲಿ ವೀಕ್ಷಕರನ್ನು ಮಂಕುಮಾಡಿ ಹಣದೋಚುವ ವಿಧಾನಗಳು…

  ಪ್ರತಿಕ್ರಿಯೆ
 2. ಕಾವ್ಯಾ ಕಡಮೆ

  ಸ್ವನಿಯಂತ್ರಣ ಓಂಬುಡ್ಸ್ ಮನ್ ಅಂತೆಲ್ಲ ಎಷ್ಟೇ ಬಡಿದುಕೊಂಡರೂ ಅವಕ್ಕೆಲ್ಲ ಇಷ್ಟೇ ಮಾನದಂಡ ಅಂತಿಲ್ಲ. ಒಂದು ಹಂತದ ಬೇಲಿ ದಾಟಿದ ಮೇಲೆ ಸರಿ ತಪ್ಪುಗಳ ಜಿಜ್ಞಾಸೆಯೇ ಕಾಡುವುದಿಲ್ಲವಂತೆ. ಇನ್ನೇನು ಮನಃಸಾಕ್ಷಿಯೇ ಮಾನದಂಡ ಅಂತೆಲ್ಲ ಅನ್ನಹೋದರೆ ತೀರ ಫಿಲಾಸಾಫಿಕ್ ಅನ್ನಿಸುತ್ತದೆ.

  ಪ್ರತಿಕ್ರಿಯೆ
 3. Nataraju S M

  ಎರಡು ಹಳೆ ಖಾಯಿಲೆಗಳನ್ನು ಹೊಸ ರೂಪದಲ್ಲಿ ನೋಡಿದ್ದೀರ.. ಚೆನ್ನಾಗಿದೆ ಸರ್ ಲೇಖನ..

  ಪ್ರತಿಕ್ರಿಯೆ
 4. D.RAVI VARMA

  ಸರ್ ನಮಸ್ಕಾರ. ಎಲ್ಲೋ ಹಿಂದೊಮ್ಮೆ ಲಂಕೇಶ್ ಒಂದು ಸಂದರ್ಶನದಲ್ಲಿ “ದಣಿ ಕರೆಯುವುದಕ್ಕಿಂಥ ಮುಂಚೆಯೇ ಅವನ ಕಾಲೊತ್ತುವ ಜನ ನಾವು ,ಇಲ್ಲಿ ಪತ್ರಿಕೆಗಲಿನ್ದಾಗಲಿ, ಪತ್ರಿಕೊದ್ಯೋಗಿಗಲಿನ್ದಲಾಗಲಿ ವಾಸ್ತವ ಕಂಡೀತೆಂದು ಬಯಸಿದರೆ ಅಂಥವನು ಒಬ್ಬ ಹುಚ್ಚನಸ್ತ್ಯೆ .ಅದೇ ಪ್ರಸ್ನೇಗೆ ದೇವನುರ್ ಮಹಾದೇವ ನಮ್ಮ ಜನರ ತಲೆಯಲ್ಲಿ ಮೆದುಳಿಲ್ಲ,ಕಕ್ಕಸು ತುಂಬಿದೆ, ಅಂತಾ ಮಾರ್ಮಿಕವಾಗಿ ಹೇಳಿದ್ದರು, ಈಗ ನಿಮ್ಮ ಹಳಹಳಿಕೆ, ಹತಾಶೆ ಓದಿ ಅದ್ಯಾಕೋ ಅದೆಲ್ಲ ನೆನಪಿಗೆ ಬಂತು .ನಾನು ನನ್ನ ಎರಡು ವರ್ಷದ ಮ್,ಕಂ ಅಲ್ಲೇ ಮಾಡಿದ್ದೆ,ಅಸ್ತೆ ಅಲ್ಲ ನನ್ನ ನನ್ನ ಮೊದಲ [ಪೋಸ್ಟಿಂಗ್ ಕೂಡ ಅಲ್ಲಿಗೆ ಆಗಿತ್ತು ತೀರ ಹಳ್ಳಿಗಳಿಗೆ ಹೊಗಿಲ್ಲವದರು ಸುಮ್ಮನೆ ನನ್ನ ಗೆಳೆಯರ ಊರಿಗೆ ಹೋದಾಗ ಅಲ್ಲಿಯ ಚಿತ್ರಣ ನಿಜಕ್ಕೂ ಘ್ಯಾಬರಿಯಾಗುವಂತಿತ್ತು ಹಲವೊಮ್ಮೆ ವಾರಗಟ್ಟಲೆ ನೀರಿಲ್ಲದೆ ಇರಬೇಕಾದ ಸ್ತಿತಿ ಇತ್ತು ಆ ಬಗ್ಗೆಯೇ ನಾನು ಒಂದುಲೆಖನ ಅನುವಾದ ಮಾಡಿದ್ದು,sainath ಅವರ ಹೇಳಿಕೆ ಅಲ್ಲಿದೆ, ನಾವು telivision ,fridge ,ಆಟದಸಮಾನು.ಏನು ಇಲ್ಲದೆ ಬದುಕಬಹುದು, ಆದರೆ ನೀರು ಮತ್ತು ಆಹಾರ ಮುಕ್ಯ, bahurastreeeya ಕಂಪನಿಗಳು ಈ ನಮ್ಮ ನೀರನ್ನು ವ್ಯಾಪಾರದ ಸರಕನ್ನಗಿಸಿ ನಮಗೆ ಮಾರುತಿದ್ದರೆ, ಮುಂದೊಮ್ಮೆ ಈ ಜಗತ್ತಿನಲ್ಲಿ ನಡೆದರೆ ಅವು “ವಾಟರ್ ವಾರ್” ಗಳಾಗುತ್ತವೆ ನಾವು ಈ ಬಗ್ಗೆಎಚ್ಹೆತ್ತುಕೊಲ್ಲದಿದ್ದಲ್ಲಿ , ನಮ್ಮ ದುರಂತದ ಹಾದಿ ನಾವೇ ಮಾಡಿಕೊಂಡಂತೆ ಎಂದು ಹೇಳಿದ್ದರೆ ನಾನು ನಿಮಗೆ ಕಳಿಸಿದ ಲೇಖನದಲ್ಲಿ ಅದು ಇದೆ ನನಗೆ ನಿಮ್ಮ ನೋವು,ಸ್ಪಂದನ ಹಳಹಳಿಕೆ ಅರ್ಥವಾಗ್ತಾ ಇದೆ
  ರವಿ ವರ್ಮ ಹೊಸಪೇಟೆ

  ಪ್ರತಿಕ್ರಿಯೆ
 5. nempedevaraj

  bharatiiya elektronik madhyama innuu baalyavstheyallide.yavvanavsthege baruva munnavee saakashtu yadavttu madiyee tiiruva shapata madidante kanuttide.suddi channelgalannu manarnjaneyagi tegedukolluva nooduva varga ee bagge ecchara gollabekide.anu bamb biddare tanee modalu suddi madabeeku ennuva manoobhavaneya chanelgalu mundina apayakke tnnannu tanee anigolisikollabeekaguva kala duuravilla.
  nempe devaraj.thirthahalli.

  ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: