ನಾನು ಪತ್ರಕರ್ತನಾಗಿ ಸರಿಯಾಗಿದ್ದೀನಾ ?..

ನವೀನ್ ಸೂರಿಂಜೆ

ಜುಲೈ 28 ಸಂಜೆ 6.45 ರ ವೇಳೆ. ನನ್ನ ಸುದ್ದಿ ಮೂಲ ಯುವಕನೊಬ್ಬ ನನಗೆ ಕರೆ ಮಾಡಿದ್ದ. ಆತ ಪಡೀಲ್ ನಿವಾಸಿ. ಆತ ನನಗೆ ತಿಳಿಸಿದ್ದಿಷ್ಟು. “ನವೀನಣ್ಣ, ನಮ್ಮ ಪಡೀಲ್ ಜಂಕ್ಷನ್ನಲ್ಲಿ ಒಂದು ಟಿಂಬರ್ ಯಾಡರ್್ ಇದೆಯಲ್ವ. ಅಲ್ಲಿ ಒಂದು ಸುಮಾರು 30 ಮಂದಿ ಯುವಕರು ನಿಂತುಕೊಂಡು ಮಾತನಾಡುತ್ತಿದ್ದರು. ಇನ್ಯಾರನ್ನೋ ಕರೆಯಲು ಇನ್ಯಾರಿಗೋ ಒತ್ತಾಯಿಸುತ್ತಿದ್ದರು. ಬೈಕುಗಳನ್ನು ರೆಡಿ ಇಟ್ಟುಕೊಳ್ಳಿ ಎನ್ನುತ್ತಿದ್ದರು. ಬಹುಷಃ ಅವರು ನಮ್ಮ ಮೇಲಿನ ಗುಡ್ಡೆಯಲ್ಲಿರುವ ಗೆಸ್ಟ್ ಹೌಸ್ಗೆ ದಾಳಿ ಮಾಡಲು ಯೋಚಿಸುತ್ತಿದ್ದಾರೆ ಎನಿಸುತ್ತದೆ. ಬ್ಯಾರಿ ಹುಡುಗರು, ಹಿಂದೂ ಹುಡುಗಿಯರು ಎಂದೆಲ್ಲಾ ಮಾತನಾಡುತ್ತಿದ್ದರು” ಎಂದ. ಅವರು ಯಾವ ಸಂಘಟನೆಯವರು ಅಂತಿ ತಿಳ್ಕೋ ಮಾರಾಯ ಎಂದೆ ನಾನು. ಅವರು ಹಿಂದೂ ಸಂಘಟನೆಗಳು ಎಂಬುದಷ್ಟೇ ಅವನಿಗೆ ಖಚಿತವಾಯ್ತೆ ವಿನಹ ನಿಖರವಾಗಿ ಯಾವ ಸಂಘಟನೆ ಎಂಬುದು ತಿಳಿಯಲಿಲ್ಲ. ತಕ್ಷಣ ನನ್ನ ಮನಸ್ಸಿಗೆ ಬಂದ ಪ್ರಶ್ನೆ “ಈ ಮಾಹಿತಿಯನ್ನು ಪೊಲೀಸರಿಗೆ ನೀಡಬೇಕೇ ಬೇಡವೇ” ಎಂಬುದು. ದಾಳಿ ಯಾರು ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ಯಾಕಾಗಿ, ಯಾರ ಮೇಲೆ, ಯಾವ ಸಂಘಟನೆ, ಎಲ್ಲಿಗೆ ದಾಳಿ ಮಾಡುತ್ತಿದೆ ಎಂಬುದೂ ಗೊತ್ತಿಲ್ಲ. ಒಂದು ತೀರಾ ಪ್ರಾಥಮಿಕ ಮಾಹಿತಿಯಷ್ಠೆ ತಿಳಿದಿದೆ. ಸಂಘಟನೆಯ ಕಾರ್ಯಕರ್ತರೇ ಫೋನಾಯಿಸಿದ್ದರೆ ಪೊಲೀಸರಿಗೆ ಮಾಹಿತಿ ನೀಡಬಹುದಿತ್ತು. ನನ್ನ ಸುದ್ದಿಮೂಲ ಮಾಹಿತಿ ನೀಡಿದ್ದರಿಂದ ಆ ಸುದ್ದಿಯನ್ನು ಖಚಿತಪಡಿಸಿಕೊಂಡೇ ಪೊಲೀಸರಿಗೆ ಮಾಹಿತಿ ನೀಡೋಣ ಎಂದುಕೊಂಡು ನಾನು ಮತ್ತು ನನ್ನ ಕ್ಯಾಮರಮೆನ್ ಪಡೀಲ್ ಗುಡ್ಡೆಯ ಮೇಲಿರುವ ಗೆಸ್ಟ್ ಹೌಸ್ ಕಡೆ ಬೈಕಿನಲ್ಲಿ ತೆರಳಿದೆ.

ಚಿತ್ರ ಕೃಪೆ:ಸತೀಶ್ ಆಚಾರ್ಯ

ಒಂದೈದು ನಿಮಿಷದಲ್ಲಿ ಪಡೀಲ್ ಗುಡ್ಡೆಯಲ್ಲಿರುವ ಮಾನರ್ಿಂಗ್ ಮಿಸ್ಬಾ ಎನ್ನುವ ಹೋಂ ಸ್ಟೇ ಅಥವಾ ಗೆಸ್ಟ್ ಹೌಸ್ ಹೊರಭಾಗದಲ್ಲಿ ನಾನು ಮತ್ತು ನನ್ನ ಕ್ಯಾಮರಮೆನ್ ಇದ್ದೆವು. ಆಗ ಅಲ್ಲಿ ಯಾವ ದಾಳಿಕೋರರೂ ಇರಲಿಲ್ಲ. ಐದು ನಿಮಿಷ ಅಲ್ಲೇ ಕಾದು ನಿಂತೆವು. ಯಾರು ಯಾಕಾಗಿ ಈ ಹೋಂ ಸ್ಟೇಗೆ ದಾಳಿ ಮಾಡಲು ಸಿದ್ದತೆ ಮಾಡುತ್ತಾರೆ ಎಂಬುದು ಗೊತ್ತೇ ಆಗಲಿಲ್ಲ. ಪಡೀಲ್ ಹೆದ್ದಾರಿಯಿಂದ ಅಂದಾಜು ಅರ್ಧ ಕಿಮಿ ರಸ್ತೆ ದಾರಿಯಲ್ಲಿ ಈ ಹೋಂ ಸ್ಟೇ ಇದೆ. ಇದರ ಸುತ್ತಲೂ ದೊಡ್ಡದಾದ ಕಂಪೌಂಡ್ ಇದೆ. ಒಂದೇ ಒಂದು ಗೇಟ್ ಇದೆ. ಗೇಟ್ನಿಂದ 60 ಮೀಟರ್ ದೂರದಲ್ಲಿ ಹೋಂ ಸ್ಟೇ ಬಂಗಲೆ ಇದೆ. ನಾನು ಗೇಟ್ ಹತ್ತಿರ ನಿಂತು ಒಮ್ಮೆ ಇಡೀ ಬಂಗಲೆಯತ್ತಾ ಕಣ್ಣಾಡಿಸಿದೆ. ಅಲ್ಲಿ ದಾಳಿ ಮಾಡಲು ಕಾರಣವಾಗುವಂತಹ ಯಾವುದೇ ಆ್ಯಕ್ಟಿವಿಟೀಸ್ ನನಗೆ ಗೋಚರಿಸಲಿಲ್ಲ. ಒಬ್ಬಳು ಹುಡುಗಿ ಹೊರಗೆ ಚೇರ್ನಲ್ಲಿ ಕುಳಿತಿದ್ದಳು. ಇನ್ನಿಬ್ಬರು ಹುಡುಗರು ಬಂಗಲೆಯ ಮತ್ತೊಂದು ಮೂಲೆಯಲ್ಲಿ ನಿಂತುಕೊಂಡು ಮೊಬೈಲ್ನಲ್ಲಿ ಆಟವಾಡುತ್ತಿದ್ದರು. ಅವರು ಯಾವುದೇ ರೀತಿಯಲ್ಲೂ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿರಲಿಲ್ಲ. ಆದುದರಿಂದ ದಾಳಿಕೋರರು ಬಯಸುವ ಸನ್ನಿವೇಶ ಅಲ್ಲಿರಲಿಲ್ಲ. ಆದುದರಿಂದ ಆಗಲೂ ನನಗೆ ಪೊಲೀಸರಿಗೆ ಮಾಹಿತಿ ನೀಡಬೇಕು ಅನ್ನಿಸಲಿಲ್ಲ. ನನ್ನ ಮಾಹಿತಿ ತಪ್ಪಾದರೆ ಒಂದಿಡೀ ಪೊಲೀಸ್ ಇಲಾಖೆಗೆ ತಪ್ಪು ಮಾಹಿತಿ ನೀಡಿದಂತಾಗುತ್ತದೆ. ಮತ್ತು ಹೋಂ ಸ್ಟೇಯಲ್ಲಿದ್ದವರಿಗೆ ವಿನಾಕಾರಣ ಪೊಲೀಸ್ ಕಿರುಕುಳ ನೀಡಲು ಕಾರಣನಾಗುವಂತಾಗುತ್ತೇನೆ ಎಂಬ ಆತಂಕದಿಂದಲೇ ಮಾಹಿತಿ ನೀಡಲಿಲ್ಲ. ನಾನು ಈ ರೀತಿ ಯೋಚಿಸುತ್ತಿರುವಾಗಲೇ ಸುಮಾರು ಮೂವತ್ತೂ ಅಧಿಕ ಇದ್ದ ತಂಡವೊಂದು ಹೋಂ ಸ್ಟೇಯ ಗೇಟಿನತ್ತಾ ಬರುತ್ತಿತ್ತು. ನಾನು ತಕ್ಷಣ ಕುತೂಹಲದಿಂದಲೇ ಕೇಳಿದೆ. “ಏನು ವಿಷಯ? ಏನಾಗ್ತಾ ಇದೆ ಇಲ್ಲಿ ?” ಎಂದು ತುಳುವಿನಲ್ಲಿ ಪ್ರಶ್ನಿಸಿದೆ. ತಕ್ಷಣ ಯುವಕನೊಬ್ಬ “ಬ್ಯಾರಿಗಳು ನಮ್ಮ ಹಿಂದೂ ಹುಡುಗಿಯರನ್ನು ಇಲ್ಲಿ ಕರೆದುಕೊಂಡು ಬಂದಿದ್ದಾರೆ. ಅವರನ್ನು ಬಿಡಬಾರದು” ಎಂದ. ಅಷ್ಟರಲ್ಲಿ ಗುಂಪಿನಲ್ಲಿದ್ದ ಇನ್ನಿತರ ಯುವಕರು ಹೊರಗೆ ಕುಳಿತಿದ್ದ ಹುಡುಗಿಯತ್ತಾ ಕೈ ತೋರಿಸಿ “ಅಲ್ಲಿ ಅಲ್ಲಿ ಇದ್ದಾಳೆ ಹುಡುಗಿ, ಅಗೋ ಹುಡುಗರು ಅಲ್ಲಿದ್ದಾರೆ ” ಎಂದು ಯುವಕ ಯುವತಿಯರತ್ತಾ ಓಡಿಕೊಂಡು ದಾಳಿಗೆ ಸಿದ್ದರಾದರು. ತಕ್ಷಣ ದಾಳಿ ಅರಿವಾದ ಯುವತಿ ತನ್ನನ್ನು ತಾನು ರಕ್ಷಣೆ ಮಾಡಿಕೊಳ್ಳಲು ಬಂಗಲೆಯ ಒಳ ಹೋದಳು. ಮತ್ತು ಬಾಗಿಲು ಹಾಕಲು ಯತ್ನಿಸಿದಳು. ಆಗ ಸುಮಾರು 30 ರಷ್ಟಿದ್ದ ದಾಳಿಕೋರರು ಬಾಗಿಲನ್ನು ಬಲವಾಗಿ ದೂಡಿ ಬಾಗಿಲು ತೆರೆಯುವಲ್ಲಿ ಸಫಲರಾದರು.   ಈಗ ನನ್ನ ಪ್ರಜ್ಞೆ ನಿಜವಾಗಿಯೂ ಜಾಗೃತವಾಗಿತ್ತು. ತಕ್ಷಣ ನನ್ನ ಕಚೇರಿ ಮೊಬೈಲ್ 9972570044 ನಿಂದ ಮಂಗಳೂರು ಗ್ರಾಮಾಂತರ ಪೊಲೀಸ್ ನಿರೀಕ್ಷಕ ರವೀಶ್ ನಾಯಕ್ಗೆ 9480805330 ಎಂಬ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದೆ. ಆಗ ಸುಮಾರು 7.15 ರ ಸಂಜೆ ಸಮಯ. ರವೀಶ್ ನಾಯಕ್ ನನ್ನ ಕರೆ ಸ್ವೀಕರಿಸಲೇ ಇಲ್ಲ. ಒಂದು ಕಡೆಯಿಂದ ದಾಳಿ ಪ್ರಾರಂಭವಾಗಿದೆಯಷ್ಟೆ. ಇನ್ನೇನು ಆಗುತ್ತೋ ಎಂಬ ಆತಂಕದ ನಡುವೆಯೇ ಕಕ್ಕಾಬಿಕ್ಕಿಯಾದ ಹುಡುಗಿಯರು ಎಲ್ಲೆಲ್ಲೋ ಓಡಲು ಶುರುವಿಟ್ಟುಕೊಂಡಿದ್ದರು. ಪೊಲೀಸರಿಗೆ ಫೋನ್ ಮಾಡಿದರೆ ಕರೆ ಸ್ವೀಕರಿಸುತ್ತಿರಲಿಲ್ಲ. ಬೇರೆ ದಾರಿ ಕಾಣದೆ ಟಿವಿ 9 ವರದಿಗಾರನಾಗಿರುವ ನನ್ನ ಗೆಳೆಯ ರಾಜೇಶ್ ರಾವ್ ಬಳಿ ಪೊಲೀಸರಿಗೆ ಫೋನ್ ಮಾಡುವಂತೆ ಹೇಳಿದೆ. ರಾಜೇಶ್ ರಾವ್ ಅವರ ಮೊಬೈಲ್ನಿಂದ ಇನ್ಸ್ಸ್ಪೆಕ್ಟರ್ ರವೀಶ್ ನಾಯಕ್ಗೆ ಕರೆ ಮಾಡಿದರು. ಆಗಲೂ ರವೀಶ್ ನಾಯಕ್ ಕರೆ ಸ್ವೀಕರಿಸಲೇ ಇಲ್ಲ.   ನಾವು ಇನ್ಸ್ಸ್ಪೆಕ್ಟರ್ಗೆ ಫೋನ್ ಕರೆ ಮಾಡುತ್ತಿದ್ದಂತೆ ನಮ್ಮ ಕ್ಯಾಮರಾಮೆನ್ ದಾಳಿಕೋರರ ಹಿಂದೆಯೇ ಹೋಗಿ ಕರ್ತವ್ಯ ನಿರ್ವಹಿಸುತ್ತಿದ್ದ. ನಾನು ಮತ್ತು ನನ್ನ ಕ್ಯಾಮರಮೆನ್ ಮಾತ್ರ ಅಲ್ಲಿದ್ದೆವು. ಅಷ್ಟರಲ್ಲಿ ಸ್ಥಳೀಯ ಸಹಾಯ ಎಂಬ ಕೇಬಲ್ ಚಾನೆಲ್ ಕ್ಯಾಮರಮೆನ್ ಶರಣ್ ಮತ್ತು ಫೋಟೋಗ್ರಾಫರ್ ವಿನಯ ಕೃಷ್ಣ ಅಲ್ಲಿಗೆ ಬಂದಿದ್ದರು. ನಾನು ಎಲ್ಲವನ್ನೂ ಮೂಕ ಪ್ರೇಕ್ಷಕನಾಗಿ ನೋಡುತ್ತಿದ್ದೇನೆ. ನನಗೇನೂ ಮಾಡಲಾರದ ಅಪರಾಧಿ ಮನೋಭಾವ ನನ್ನಲ್ಲಿ ಮೂಡಿತ್ತು. ದಾಳಿಕೋರರಲ್ಲಿ ಶೇಕಡಾ 50ಕ್ಕೂ ಅಧಿಕ ಮಂದಿ ಮಧ್ಯಪಾನ ಮಾಡಿದ್ದರು. ನಾನು ಹೇಳಿದರೂ ಕೇಳೋ ಸ್ಥಿತಿಯಲ್ಲಿ ಇರಲಿಲ್ಲ. ಈ ಜಗತ್ತಿನಲ್ಲಿ ಏನೇನೋ ಹಿಂಸೆಗಳು ನಡೆದಿರಬಹುದು. ಆದರೆ ನನ್ನ ಜೀವಮಾನದಲ್ಲಿ ಇಂತಹ ಹಿಂಸೆಯನ್ನು ನೋಡಿರಲಿಲ್ಲ. ನನ್ನ ಕ್ಯಾಮರಾಮೆನ್ ಎಲ್ಲೆಲ್ಲಿ ಹೊಡೆಯುತ್ತಾರೋ ಅಲ್ಲಲ್ಲಿ ಓಡುತ್ತಿದ್ದ. ನಾನು ನೋಡುತ್ತಿದ್ದೆ ಮತ್ತು ಸಾಧ್ಯವಾದಷ್ಟೂ ಕಿರಿಚುತ್ತಿದ್ದೆ. “ಏ ಹುಡುಗಿರಿಗೆ ಹೊಡಿಬೇಡ್ರಿ” ಎಂತ ಬೊಬ್ಬೆ ಹೊಡೆಯುತ್ತಿದ್ದೆ. ನನ್ನ ಬೊಬ್ಬೆ ನನ್ನ ಕ್ಯಾಮರಾದಲ್ಲಿ ದಾಖಲಾಗಿದೆಯೇ ವಿನಹ ದಾಳಿಕೋರರ ಹೃದಯಕ್ಕೆ ತಟ್ಟಲೇ ಇಲ್ಲ. ಹಲ್ಲೆಗೆ ಒಳಗಾದ ಯುವಕರು ಗೋಗೆರೆಯುತ್ತಿದ್ದರು. “ಪ್ಲೀಸ್ ಬಿಟ್ಟುಬಿಡಿ. ನಾವು ಬತರ್್ ಡೇ ಪಾಟರ್ಿ ನಡೆಸುತ್ತಿದ್ದೇವೆ, ಪ್ಲೀಸ್” ಎಂದು ಕಾಲಿಗೆ ಬೀಳುತ್ತಾನೆ. ಆದರೂ ಕ್ರೂರಿ ದಾಳಿಕೋರರ ಮನಸ್ಸು ಕರಗುವುದಿಲ್ಲ. ಇಷ್ಟೇ ಆಗಿದ್ದರೆ ನಾನು ಮರೆತುಬಿಡುತ್ತಿದ್ದೆ. ಆದರೆ ಮುಂದೆ ನನ್ನ ಕಣ್ಣ ಮುಂದೆ ಬಂದಿದ್ದು ಭೀಭತ್ಸ ದೃಶ್ಯಗಳು.   ನಾಲ್ವರು ಹುಡುಗರಿಗೆ ದಾಳಿಕೋರರು ಬಡಿಯುತ್ತಿರುವ ದೃಶ್ಯ ನೋಡಿ ಶಾಕ್ಗೆ ಒಳಗಾದ ಯುವತಿಯರು ದಿಕ್ಕಾಪಾಲಾಗಿ ಓಡಲು ಶುರುವಿಟ್ಟುಕೊಂಡರು. ಬಂಗಲೆಯ ತುಂಬಾ ಓಡುತ್ತಿರುವ ಯುವತಿಯರ ಹಿಂದೆ ಒಂದಷ್ಟು ದಾಳಿಕೋರರ ಓಟ ನಡೆಯುತ್ತಿತ್ತು. ನಂಬಿದರೆ ನಂಬಿ. ಬಿಟ್ಟರೆ ಬಿಡಿ. ಒಬ್ಬಳು ಹುಡುಗಿ ಒಂದನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾಳೆ. ಅವಳನ್ನು ಹಿಡಿದುಕೊಂಡ ಇಪ್ಪತ್ತೂ ಅಧಿಕ ದಾಳಿಕೋರ ಕಾರ್ಯಕರ್ತರು ಆಕೆಯ ವಸ್ತ್ರಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಆಕೆಯ ಕೆನ್ನೆಗೆ ಬಿಗಿದು, ಗೋಡೆಗೆ ನೂಕಿದ್ದಾರೆ. ಅಷ್ಟರಲ್ಲಿ ಪಿಂಕ್ ಡ್ರೆಸ್ ತೊಟ್ಟುಕೊಂಡಿದ್ದ ಹುಡುಗಿಯೊಬ್ಬಳು ಓಡಲು ಶುರುವಿಟ್ಟುಕೊಂಡಳು. ಆಕೆಯನ್ನು ಹಿಡಿದ ಗೂಂಡಾ ದಾಳಿಕೋರರು ಅಕ್ಷರಶ ಆಕೆಯನ್ನು ಬೆತ್ತಲು ಮಾಡಿದ್ದಾರೆ. ಒಂದು ತುಂಡು ವಸ್ತ್ರ ಹೊರತುಪಡಿಸಿ ವಿವಸ್ತ್ರ ಮಾಡಿದ ನಂತರ ಆಕೆಯ ಅಂಗಾಂಗಳ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ಮಾಡಿದ್ದಾರೆ. ಇದು ನನ್ನನ್ನು ಅಕ್ಷರಶ ಅಧೀರನನ್ನಾಗಿಸಿದ ಧೃಶ್ಯ. ಈ ರೀತಿಯ ದೃಶ್ಯವನ್ನು ನಾನು ನನ್ನ ಜೀವಮಾನದಲ್ಲಿ ನೋಡಿರಲಿಲ್ಲ. ಕೇಳಿದ್ದೆ. ಇವೆಲ್ಲವೂ ವಿಶುವಲ್ ಆಗದೇ ಇರುವಂತದ್ದು. ಶೂಟಿಂಗ್ ಆಗಿದ್ದು ಸ್ವಲ್ಪವೇ ಸ್ವಲ್ಪ ಭಾಗ. ಆನಂತರ ಪಾಟರ್ಿಯಲ್ಲಿ ಪಾಲ್ಗೊಂಡಿದ್ದ ಎಲ್ಲಾ ಹುಡುಗ ಹುಡುಗಿಯರನ್ನು ಒಂದೇ ಕೋಣೆಯಲ್ಲಿ ಹಾಕಿ ಚಿಲಕ ಹಾಕಿದರು. ಇವೆಲ್ಲವೂ ನಡೆದಿದ್ದು ಮಿಂಚಿನ ವೇಗದಲ್ಲಿ. ಹೆಚ್ಚೆಂದರೆ 15 ನಿಮಿಷದಲ್ಲಿ ಇವೆಲ್ಲವೂ ಮುಗಿದು ಹೋಗಿತ್ತು.   ದಾಳಿಕೋರರ ಕಾರ್ಯಾಚರಣೆ ಒಂದು ಹಂತಕ್ಕೆ ಮುಗಿದ ನಂತರ ಪೊಲೀಸ್ ಇನ್ಸ್ಸ್ಪೆಕ್ಟರ್ ರವೀಶ್ ನಾಯಕ್, ಪೊಲೀಸ್ ಎಸೈ ಮುನಿಕಂಠ ನೀಲಸ್ವಾಮಿ ಮತ್ತು ಪೋಲೀಸ್ ಪೇದೆಗಳು ಬಂದಿದ್ದಾರೆ. ವಿಶೇಷ ಎಂದರೆ ಪೊಲೀಸರಿಗೆ ದಾಳಿಕೋರರ ಜೊತೆ ಮೊದಲೇ ಸಂಪರ್ಕ ಇರೋ ರೀತಿಯಲ್ಲಿ ಪೊಲೀಸರು ವತರ್ಿಸಿದ್ದಾರೆ. ಸುಮಾರು ಅರ್ಧ ಗಂಟೆಗಳಿಗೂ ಹೆಚ್ಚು ಕಾಲ ಪೊಲೀಸರು ದಾಳಿಕೋರರ ಜೊತೆ ಮಾತಕತೆಯಲ್ಲಿ ತಲ್ಲೀನರಾಗಿದ್ದರು. ದಾಳಿಕೋರರ ಬಂಧಿಸುವ ಬದಲು ಅವರ ಜೊತೆ ಹರಟೆ ಹೊಡೆಯುತ್ತಿರುವುದು ನನಗೆ ಆಶ್ಚರ್ಯ ಉಂಟು ಮಾಡಿತ್ತು. ಇವೆಲ್ಲಾ ನಡೆಯುತ್ತಿರಬೇಕಾದರೆ ಪಾಟರ್ಿಯಲ್ಲಿ ಪಾಲ್ಗೊಂಡಿದ್ದ ಯುವಕನೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿದ. ತಕ್ಷಣ ಪೊಲೀಸರು ಆ ಯುವಕನನ್ನು ವಶಕ್ಕೆ ತೆಗೆದುಕೊಂಡರು. ಪೊಲೀಸರ ವಶದಲ್ಲಿದ್ದ ಯುವಕನಿಗೆ ದಾಳಿಕೋರರು ಪೊಲೀಸರ ಸಮ್ಮುಖದಲ್ಲೇ ಹಲ್ಲೆ ನಡೆಸಿದರು.   ಅಷ್ಟರಲ್ಲಿ ನಮ್ಮ ಇನ್ನಷ್ಟೂ ಕ್ಯಾಮರಮೆನ್ಗಳು ಬಂದಿದ್ದರು. ನಾನು ನನ್ನ ಕ್ಯಾಮರಮೆನ್ ಜೊತೆ ಕಚೇರಿಗೆ ಬಂದು ಎಲ್ಲಾ ವಿಝುವಲ್ಸ್ ಬೆಂಗಳೂರು ಕಚೇರಿಗೆ ಅಪ್ಲಿಂಕ್ ಮಾಡಿದೆ. 7.45 ಕ್ಕೇ ವರದಿ ಪ್ರಕಟವಾಯಿತು. ವರದಿ ಪ್ರಕಟವಾದ ಕೆಲವೇ ನಿಮಿಷಗಳಲ್ಲಿ ನಮ್ಮ ಚಾನೆಲ್ನಲ್ಲಿ ಬರುತ್ತಿದ್ದ ವರದಿ ಮತ್ತು ದೃಶ್ಯಗಳನ್ನು ರಾಷ್ಟ್ರೀಯ ವಾಹಿನಿಗಳು ಬಳಕೆ ಮಾಡಿಕೊಂಡು ಸುದ್ಧಿ ಪ್ರಕಟಿಸಿದವು. ತಕ್ಷಣ ಇದೊಂದು ರಾಷ್ಟ್ರೀಯ ಸುದ್ಧಿಯಾಗಿ ಮಾರ್ಪಡಾಗಿತ್ತು. ಇದರಿಂದ ತೀವ್ರ ಕೋಪಗೊಂಡಿದ್ದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನನ್ನ ಗೆಳೆಯ, ಟಿವಿ 9 ವರದಿಗಾರ ರಾಜೇಶ್ ರಾವ್ಗೆ ದೂರವಾಣಿ ಕರೆ ಮಾಡಿದ್ದಾರೆ. ರಾಜೇಶ್ಗೆ ಸೀಮಂತ್ ಕುಮಾರ್ ಸಿಂಗ್ ಕರೆ ಮಾಡಿದಾಗ ನಾನೂ ಕೂಡಾ ರಾಜೇಶ್ ಜೊತೆಗಿದ್ದೆ. ಸೀಮಂತ್ ಮಾತುಗಳನ್ನು ರಾಜೇಶ್ ಲೌಡ್ ಸ್ಪೀಕರ್ ಇಟ್ಟು ನನಗೆ ಕೇಳಿಸುತ್ತಿದ್ದ. “ನವೀನ ನ್ಯೂಸ್ ಯಾಕೆ ಮಾಡಬೇಕಿತ್ತು. ಅವನಿಗೆ ಅಕ್ಕ ತಂಗಿ ಇಲ್ಲವಾ ? ಅವರಿಗೆ ಹೊಡೆಯಲ್ವ ? ಅದನ್ನು ಟಿವಿಯಲ್ಲಿ ತೋರಿಸ್ತಾರಾ ? ನೋಡ್ಕೋತೀನಿ ನಾನು ಅವನನ್ನು. ಅವನು ಮಂಗಳೂರಿನಲ್ಲಿ ತಾಲೀಬಾನ್ ಸಂಸ್ಕೃತಿ ಇದೆ ಎಂದು ಹೇಳಿದ. ಅಸ್ಸಾಂನ ಘಟನೆಗೆ ಈ ಘಟನೆಯನ್ನು ಹೋಲಿಸಿ ಲೈವ್ ಕೊಟ್ಟ. ಈ ಬಾರಿ ಅವನನ್ನು ಬಿಡುವುದಿಲ್ಲ. ಈ ಕೇಸ್ನಲ್ಲಿ ಅವನನ್ನು ಫಿಕ್ಸ್ ಮಾಡುತ್ತೇನೆ. ಅವನಿಗೆ ಎಷ್ಟು ಬೇಕಾದರೂ ಇಂಪ್ಲ್ಯೂಯನ್ಸ್ ಇರಲಿ. ಫಿಕ್ಸ್ ಮಾಡುವುದು ಮಾಡೋದೆ” ಎಂದು ಸೀಮಂತ್ ಹೇಳುತ್ತಿದ್ದರು. “ಹುಡುಗಿಯರಿಗೆ ಮತ್ತು ಹುಡುಗರಿಗೆ ಹೊಡೆದಿದ್ದು ದೊಡ್ಡ ವಿಷಯ ಅಲ್ಲ. ಅದನ್ನು ಚಿತ್ರೀಕರಿಸಿದ್ದು ಮಹಾ ಅಪರಾಧ ಎಂಬುದಷ್ಟೇ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾತಿನ ಅರ್ಥ ಎಂಬುದಂತೂ ಸ್ಪಷ್ಟ.   ಇಂದು ಬೆಳಿಗ್ಗೆ ನನಗೆ ಇನ್ನೊಂದು ಶಾಕ್ ಕಾದಿತ್ತು. ನಾನು ಯಾರ ಪರವಾಗಿ ಸುದ್ದಿ ಮಾಡಿದ್ದೇನೋ ಅವರೇ ನನ್ನ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ನನಗೆ ಸ್ಪಷ್ಟವಾಗಿ ಗೊತ್ತಿತ್ತು. ಹಲ್ಲೆಗೊಳಗಾದ ಯಾವುದೇ ಹುಡುಗ ಹುಡುಗಿ ಸ್ವ ಇಚ್ಚೆಯಿಂದ ನನ್ನ ವಿರುದ್ಧ ದೂರು ನೀಡಲು ಸಾದ್ಯವಿಲ್ಲ. ಪ್ಲೀಸ್ ಹೊಡಿಯಬೇಡಿ ಎಂದು ನಾನು ಸಾಧ್ಯವಾದಷ್ಟು ಬೊಬ್ಬೆ ಹಾಕುತ್ತಿದ್ದದ್ದು ಹಲ್ಲೆಗೊಳಗಾದ ಯುವತಿಯರಿಗೆ ಗೊತ್ತಿತ್ತು ಅಂದುಕೊಳ್ಳುತ್ತೇನೆ. ಸಂಜೆಯಾಗುವಾಗ ನನ್ನ ಡೌಟ್ ಕ್ಲೀಯರ್ ಆಗಿತ್ತು. ಮಾಧ್ಯಮದ ಜೊತೆ ಮಾತನಾಡಿದ ಹಲ್ಲೆಗೊಳಗಾದ ಯುವಕರು “ನಾವು ಮಾಧ್ಯಮ ಮಂದಿ ವಿರುದ್ಧ ದೂರು ನೀಡಿಲ್ಲ. ನಮಗೆ ಮಾಧ್ಯಮದವರು ಸಪೋಟರ್್ ಮಾಡಿದ್ದಾರೆ” ಎಂದರು.   ಅದೇನೇ ಇರಲಿ. ಮಂಗಳೂರು ಗ್ರಾಮಾಂತರ ಪೊಲೀಸರು ನನ್ನ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ನಾವು ಚಿತ್ರೀಕರಿಸಿದ ವಿಝುವಲ್ಸ್ ಆಧಾರದಲ್ಲೇ ಈವರೆಗೆ 8 ಮಂದಿ ದಾಳಿಕೋರರನ್ನು ಬಂಧಿಸಿದ್ದಾರೆ. ನಾವು ಒಂದು ಆಕ್ಷೇಪಾರ್ಹ ಘಟನೆಯನ್ನು ಚಿತ್ರೀಕರಿಸಿ ಸುದ್ದಿ ಪ್ರಸಾರ ಮಾಡಿದ್ದೇವೆಯೇ ಹೊರತು ಆಕ್ಷೇಪಾರ್ಹ ದೃಶ್ಯವನ್ನಲ್ಲ ಎಂಬುದು ನನಗೆ ಸ್ಪಷ್ಟತೆ ಇದೆ. ಮಂಗಳೂರಿನಲ್ಲಿ ಜುಲೈ 28 ರಾತ್ರಿ ನಡೆದ ದಾಳಿ ಹೊಸದೇನೂ ಅಲ್ಲ. ಪ್ರತೀ ವಾರಕ್ಕೊಂದು ಇಂತಹ ಘಟನೆ ನಡೆಯುತ್ತದೆ. ಮುಸ್ಲಿಂ ಹುಡುಗ ಹಿಂದೂ ಹುಡುಗಿ ಒಟ್ಟಿಗಿದ್ದರೆ ಹಿಂದೂ ಮತೀಯವಾದಿಗಳು ಅವರಿಗೆ ಹಲ್ಲೆ ಮಾಡಿ ಮತೀಯವಾದಿಗಳೇ ಅವರನ್ನು ಠಾಣೆಗೆ ಕೊಂಡೊಯ್ದು ಪೊಲೀಸರ ವಶಕ್ಕೆ ನೀಡುತ್ತಾರೆ. ಪೊಲೀಸರು ಪ್ರೇಮಿ(ಗೆಳೆಯರು)ಗಳ ತಂದೆ ತಾಯಿಯನ್ನು ಕರೆಸಿ ಎಚ್ಚರಿಕೆ ನೀಡಿ ಕಳುಹಿಸುತ್ತಾರೆ. ನಾವು ಶೂಟಿಂಗ್ ಮಾಡದೇ ಇದ್ದರೆ ಇಲ್ಲೂ ಅಷ್ಟೇ ನಡೆಯುತ್ತಿತ್ತು. ನಮ್ಮ ಶೂಟಿಂಗ್ನಿಂದ ಕೋಮುವಾದಿಗಳ ಒಂದು ಕ್ರೂರ ಮುಖ ಬಯಲಾಗಿದೆ ಮತ್ತು ಎಂಟು ಮಂದಿ ಬಂಧಿತರಾಗುವಂತೆ ಮಾಡಿದೆ. ಯಾರು ಏನೇ ಅನ್ನಲ್ಲಿ. ಯಾವ ಕೇಸೇ ಬೀಳಲಿ. ನಾನು ಪತ್ರಕರ್ತನಾಗಿ ಸಮಾಜಕ್ಕೆ ಏನೋ ನ್ಯಾಯ ನೀಡಿದ್ದೇನೆ ಅನ್ನಿಸುತ್ತಿದೆ. ಅಳುತ್ತಿರುವ ನನ್ನ ಮನಸ್ಸಿಗೆ ಸಧ್ಯ ಅಂತಹ ಸಮಾಧಾನ ಸಾಕು.   ನನ್ನ ಮೇಲೆ ದೂರು ನೀಡಿರುವುದು ಮತ್ತು ನನ್ನ ವಿರುದ್ಧ ಎಫ್ಐಆರ್ ದಾಖಲಿಸಿರುವುದು ದೊಡ್ಡ ವಿಷಯವೇ ಅಲ್ಲ. ನನ್ನ ಮೇಲಿನ ಎಫ್ಐಆರ್ನಿಂದ ದಾಳಿಕೋರ ಕ್ರೂರಿ ಮೃಗಗಳಿಗೆ ಶಿಕ್ಷೆಯಾಗುವುದಾದರೆ ನನ್ನ ಮೇಲಿನ ಎಫ್ಐಆರನ್ನು ನಾನು ಖುಷಿ ಪಡುತ್ತೇನೆ. ಯಾವುದಾದರೂ ಒತ್ತಡಕ್ಕೆ ಮಣಿದು ಆರೋಪದಿಂದ ನನ್ನನ್ನು ಬಿಡುಗಡೆ ಮಾಡುವಾಗ ಅಂತಹ ಬಿಡುಗಡೆಯಿಂದ ಆರೋಪಿ ದಾಳಿಕೋರರಿಗೆ ಲಾಭವಾಗುವುದಾದರೆ ಆಂತಹ ಬಿಡುಗಡೆ ನನಗೆ ಬೇಕಾಗಿಲ್ಲ. ನನ್ನ ಸಮ್ಮುಖದಲ್ಲೇ ನನ್ನ ಸಹೋದರಿಯರ ಮೇಲೆ ದಾಳಿ ನಡೆಸಿದ ದಾಳಿಕೋರರಿಗೆ ನ್ಯಾಯಾಲಯ ಅದೆಂತಹ ಶಿಕ್ಷೆ ನೀಡಿದರೂ ನ್ಯಾಯ ನೀಡಿದಂತಾಗುವುದಿಲ್ಲ. ಆದರೂ ಅವರಿಗೆ ಶಿಕ್ಷೆಯಾಗಬೇಕು. —————————————————— ಇನ್ನಷ್ಟೂ ಬರೆಯಲು ಇದೆ. ಬರೆಯಲು ಸಮಯ ಸಾಕಾಗಿಲ್ಲ. ಯಾವುದೇ ವ್ಯಕ್ತಿ ಯಾ ಸಂಘಟನೆಗೆ ಈ ದಾಳಿ ವಿರುದ್ದ ಹೋರಾಟ ಮಾಡುವುದಾದರೆ ಇನ್ನಷ್ಟೂ ಮಾಹಿತಿ ಬೇಕಾಗಿದ್ದಲ್ಲಿ ಅಥವಾ ಯಾವುದೇ ತನಿಖಾ ಸಂಸ್ಥೆಗೆ ಮಾಹಿತಿ ಬೇಕಾದ್ದಲ್ಲಿ ಯಾವುದೇ ಅವಧಿಯಲ್ಲಿ ನನ್ನನ್ನು ಸಂಪಕರ್ಿಸಬಹುದು.   ನನ್ನ ವಿಳಾಸ : ನವೀನ್ ಸೂರಿಂಜೆ ಪತ್ರಕರ್ತ ಕಸ್ತೂರಿ ನ್ಯೂಸ್ 24 ಮಂಗಳೂರು ಮೊಬೈಲ್ : 9972570044, 8971987904  ]]>

‍ಲೇಖಕರು G

July 30, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಮಾಧ್ಯಮಕ್ಕೆ ಮರ್ಯಾದೆ ಇದೆ ಅಲ್ಲವೇ.. ಸಾವಿಗೆ ಘನತೆ ಇದೆ ಅಲ್ಲವೇ..

ಮಾಧ್ಯಮಕ್ಕೆ ಮರ್ಯಾದೆ ಇದೆ ಅಲ್ಲವೇ.. ಸಾವಿಗೆ ಘನತೆ ಇದೆ ಅಲ್ಲವೇ..

ಮಾತಿನ ಶೈಲಿ, ಪ್ರಸ್ತುತಪಡಿಸುವಿಕೆ,  ನಿರೂಪಣೆ ಕುರಿತಂತೆ ಸಾಕಷ್ಟು ಅಧ್ಯಯನ ನಡೆಸಿದವರು. ನಿರೂಪಣೆ ಕುರಿತ ಇವರ ಕೃತಿ 'ಮಾತಲ್ಲ ಗೀತೆ'.  ಕರೋನ...

ಪ್ರಧಾನಮಂತ್ರಿ ಎಮ್ಮೆ ಯೋಜನೆ: ಪಿ. ಸಾಯಿನಾಥ್ ಹೇಳಿದ ಕತೆ.

ಪ್ರಧಾನಮಂತ್ರಿ ಎಮ್ಮೆ ಯೋಜನೆ: ಪಿ. ಸಾಯಿನಾಥ್ ಹೇಳಿದ ಕತೆ.

ಕೇಸರಿ ಹರವೂ  ಮಹಾರಾಷ್ಟ್ರದ ವಿದರ್ಭ ಜಿಲ್ಲೆ ಬಹಳ ಮುಂಚಿನಿಂದಲೂ ಹತ್ತಿ ಬೆಳೆಗೆ ಹೆಸರುವಾಸಿಯಾಗಿತ್ತು. ಅಲ್ಲಿಯ ರೈತರು ಹತ್ತಿ ಬೆಳೆಯನ್ನು...

18 ಪ್ರತಿಕ್ರಿಯೆಗಳು

 1. ಪ್ರಶಾಂತ್

  ಅವರು ಹೇಳಿದ್ರು ನಾವು ನಂಬ್ತೀವಿ ಯಾಕಂದ್ರೆ
  ನಮ್ಮ ಕಿವಿ ಮೇಲೆ ಹೂ ಇದೆ.
  ಅಷ್ಟೆಲ್ಲ ಸಾಚಾ ಪೋಸ್ ಕೊಡೋ ಈ ಪತ್ರಕರ್ತರ ಬಳಿ
  ಇದ್ದ ದ್ದು ಕೇವಲ ಒಬ್ಬ ಪೋಲೀಸ್ ನಂಬರಾ?
  ಜೋಕು

  ಪ್ರತಿಕ್ರಿಯೆ
 2. ಸಂದೀಪ್ ಕಾಮತ್

  ಹಿಂದೆ ರೋಲ್ ಇಲ್ಲದ ಕ್ಯಾಮೆರಾ ಇಟ್ಟುಕೊಂಡು ಬರೀ flash ಹೊಡೆದರೂ ಜನ ಸಿಕ್ಕಾಪಟ್ಟೆ excite ಆಗ್ತಿದ್ರು. ‘ಹೋ ನನ್ ಫೋಟೊ ತೆಗೆದ್ರು’ ಅಂತ!. ಇನ್ನು ವೀಡಿಯೋ ಕ್ಯಾಮೆರಾ ನೋಡಿದ್ರಂತೂ ಮನಸ್ಸು ಮರ್ಕಟವೆ. ಹಲವಾರು ಲೈವ್ ಕಾರ್ಯಕ್ರಮದಲ್ಲಿ ಕ್ಯಾಮೆರಾ ತಮ್ಮ ಕಡೆಗೆ ತಿರುಗಿಸಿದ ತಕ್ಷಣ ಜನರ ಗುಂಪು ಹೋ ಅಂತ ಕಿರುಚುತ್ತಾ ತಾವು ಏನು ಕಾರ್ಯಕ್ರಮ ನೋಡ್ತಾ ಇದ್ದೀವಿ ಅನ್ನೋದನ್ನೂ ಮರೆತು ಪೋಸ್ ಕೊಡ್ತಾರೆ. ಕ್ಯಾಮೆರ ಮಹಿಮೆ ಅಂಥದ್ದು.
  A picture is worth thousand words ಅಂತ ಹೇಳಿಕೆ ಇತ್ತು. A video is even more worth than that!!!
  ದಾಖಲೆಗಾಗಿ ಜನರು ಕೆ.ಜಿ ಗಟ್ಟಲೆ ಮೆಣಸು ತಿಂತಾರೆ. ಬಲ್ಬ್ ತಿಂತಾರೆ ಕರೆಂಟ್ ಹೊಡೆಸ್ಕೋತಾರೆ. ಇನ್ನೇನೋ ಮಾಡ್ತಾರೆ. ಜನರಿಗೆ ಖ್ಯಾತಿ ಬೇಕಾಗಿದೆ. ಅದು ಪ್ರಖ್ಯಾತವೋ ಕುಖ್ಯಾತವೋ ಅವರಿಗೆ ಬಿದ್ದೇ ಹೋಗಿಲ್ಲ. ಇಂಥ ಸಂದರ್ಭದಲ್ಲಿ ನಿಮ್ಮ ವೀಡಿಯೊ ಅವರಿಗೆ ಚೆನ್ನಾಗೇ ಪಬ್ಲಿಸಿಟಿ ಕೊಟ್ಟಿದೆ.

  ಪ್ರತಿಕ್ರಿಯೆ
  • ತನು

   ನವೀನ್ ಬಹುಷ ನೀವು ನಿಮ್ಮನ್ನು ಸಮಥಿಱಸುವ ಯತ್ನ ನಡೆಸುತ್ತಿದ್ದೀರಾ ಎಂದೆಣಿಸುತ್ತಿದೆ. ಈ ಹಿಂದೆ ನೀಮೊಮ್ಮೆ ಹೇಳಿದ್ದಿರಿ ಎಲ್ಲೇ ತಪ್ಪು ನಡೆದರೂಮೊದಲು ಸಂಬಂಧಿತರಿಗೆ ಮಾಹಿತಿ ನೀಡ ಬೇಕು ಎಂದು ಬಹುಷ ಇಲ್ಲೂ ನಿಮಗೆ ಆ ಅವಕಾಶ ಇತ್ತು. ಒಂದು ಮಾಹಿತಿಯನ್ನು ಪೊಲೀಸರಿಗೆ ನೀಡುವುದಷ್ಟೆ ನಮ್ಮ ಕೆಲಸ ಮತ್ತದನ್ನು ವಿಚಾರಿಸುವಂತಹುದು ಪೊಲೀಸರ ಕೆಲಸ ಪೊಲೀಸರಿಗೆ ಸಿಗುವ ಮಾಹಿತಿ ಎಲ್ಲವೂ ಪಕ್ಕಾ ಆಗಿರಲ್ಲ ಹಾಗಂತ ಅವರೆಲ್ಲೂ ಆ ಬುದ್ದಿ ತಪ್ಪಿ ಮಾತಾಡಲ್ಲ ಪ್ರತಿಯೊಂದು ಮಾಹಿತಿಯನ್ನೂ ಅವಲೋಕಿಸಿನೋಡಿಯೇ ನೋಡುತ್ತಾರೆ. ನೀವೊಬ್ಬ ಮಾದ್ಯಮದ ವರದಿಗಾರನಾಗಿ ನಿಮ್ಮಲ್ಲಿ ಹೆಚ್ಚಿನ ಪೊಲೀಸರ ದೂರವಾಣಿ ನಂ. ಇರಲೆಬೇಕಿತ್ತು ಇದೆಯೂ ಕೂಡಾ,ನೇರವಾಗಿ ಆಯುಕ್ತರಿಗೆ, ಇಲ್ಲವೆ ಡಿಸಿಪಿಯವರಿಗೆ ಹೋಗಲಿ ಕೊನೆಗೆ ಇಂಟಲಿಜೆನ್ಸಿಗಾದರೂ ಮಾಹಿತಿ ನೀಡ ಬಹುದಿತ್ತು. ಇನ್ನೊಂದು ವಿಷಯ ನಿಮ್ಮ ಬರಹದ ಹೆಚ್ಚಿನ ವಿಚಾರ ಕಾಲ್ಪನಿಕ ಎನ್ನುವ ಆರೋಪ ಕೇಳಿ ಬರುತ್ತಿದೆ. ಅದೂ ಇರ ಬಹುದಲ್ಲವೆ? ಹಿಂದೂ ಸಂಘಟನೆಯವರು ನಾವು ದಾಳಿ ಮಾಡಲು ಹೋಗುತ್ತಿದ್ದೆವೆ ಎನ್ನುವ ಮಾಹಿತಿ ನಿಮಗೆ ನೀಡಿದ್ದಾರೆ ಅಲ್ಲದೆ ಅವರು ಹಿಂಧು ಮುಸ್ಲಿಂ ಜೋಡಿಯ ಬಗ್ಗೆ ಉಲ್ಲೇಖವೇ ಮಾಡಿಲ್ಲವಂತೆ ಅಶ್ಲೀಲ ಪಾಟಿಱ ನಡೆಯುತ್ತಿದೆ ಎಂದಷ್ಟೆ ಹೇಳಿದ್ದಾರೆ ಆದರೆ ನೀವು ಅದಕ್ಕೆ ಕೋಮು ಬಣ್ಣ ಹಚ್ಚುವ ಯತ್ನ ನಡೆಸುತ್ತಿದ್ದೀರಾ. ನವೀನ್ ನಿಮ್ಮ ನಿಮ್ಮ ಎಡ ಪಂಥೀಯ ಚಿಂತನೆಯಿಂದ ಸಮಾಜ ಬದಲಾಗಲ್ಲ ಅಲ್ಲವೇ. ಹೋಗಲಿ ಎಲ್ಲವೂ ನಿಮಗೆ ತಿಳಿಯದೆ ನಡೆಯಿತು ಒಪ್ಪಿಕೊಳ್ಳೋಣ ಾ ಬಳಿಕ ಻ದನ್ನು ಮಾಧ್ಯಮದಲ್ಲಿ ಬಿತ್ತರಿಸುವ ಅಗತ್ಯ ಇತ್ತೇ ಹೇಳಿ. ಇಡೀನಾಗರಿಕ ಸಮಾಜವೇ ಅಷ್ಟೇ ಏಕೆ ರಾಜ್ಯವೇ ತಲೆ ತಗ್ಗಿಸುವ ಕೆಲಸ ಮಾಡಿದ್ದೀರಿ ಎಲ್ಲ ಕಡೆ ತತ್ವದ ಬಗ್ಗೆ ಮಾತನಾಡುವ ನೀವು ಕೊನೆಗೂ ಇಕ್ಕಿದ್ದು ಗಾಳವೇ ಅಲ್ಲವೇ. ಕೇವಲ ನಿಮ್ಮ ಚಾನೆಲ್ನಲ್ಲಿ ಬಂದಿದ್ದರೇ ಪರವಾಗಿಲ್ಲ ಯಾಕೆಂದರೆ ಅದನ್ನು ನೀವುಮಾತ್ರ ನೋಡುವುದು ಆದರೆ ನೀವದನ್ನು ಎಲ್ಲರಿಗೂ ನೀಡಿದ್ದೀರಿ ಇದು ತಪ್ಪು.

   ಪ್ರತಿಕ್ರಿಯೆ
 3. ವಿನ಻ಯ್

  ನವೀನ್,
  ಪತ್ರಕರ್ತನಾಗಿ ನೀನು ಮಾಡಿದ ಕೆಲಸ ಸರಿ ಇದೆ. ನಿನ್ನ ಮತ್ತು ರಾಜೇಶ್ ಸಮಯ ಪ್ರಜ್ನೆ ಮೆಚ್ಚುತ್ತೇನೆ.
  ಆದ್ರೂ, ಎಲ್ಲಾ ಟೆಲಿವಿಷನ್ ಚಾನೆಲ್ ನವರು ಮತ್ತು ಪ್ರೆಸ್ ನವರು ಬಂದಾಗ, ಆ ಹುಡುಗಿಯರನ್ನಾದರೂ ರಕ್ಷಿಸಲು ಪ್ರಯತ್ನಿಸಬೇಕಿತ್ತು.
  ಏನೇ ಆಗಲಿ, ನೀವು ಪೋಲಿಸರ ವಿಷಯದಲ್ಲಿ ತೆಗೆದುಕೊಂಡಿರುವ ನಿಲುವನ್ನು ನಾನು ಇಷ್ಟಪಟ್ಟಿದ್ದೇನೆ. ನಿಮ್ಮಿಬ್ಬರಿಗೆ ಏನಾದರೂ ಸಹಾಯ ಬೇಕಿದ್ದರೆ, ನನಗೆ ಫೋನ್ ಮಾಡುವುದು.
  ವಿನಯ್ ಮಾಧವ್
  9945565351

  ಪ್ರತಿಕ್ರಿಯೆ
 4. ಹುಲಿಕುಂಟೆ ಮೂರ್ತಿ

  ನವೀನ್ ನೀವು ಮಾಡಿರೋ ಕೆಲಸಕ್ಕಿಂತ ಮಾಡಬೇಕಾಗಿರೋ ಕೆಲಸ ಸಾಕಷ್ಟಿದೆ. ಈ ಬರೆಹ ಆ ಮಾಡಬೇಕಾಗಿರೋ ಕೆಲಸದ ಪ್ರಾರಂಭ. ನಿಮ್ಮ ಅಸಹಾಯಕತೆ ಮತ್ತು ಆ ಘಟನೆ ನಡೆಯಲೇಬಾರದಿತ್ತು ಎಂಬ ನಿಮ್ಮ ಆಶಯ ನಮ್ಮಂಥವರ ಸಹಕಾರವನ್ನು ನಿಮಗೆ ಒದಗಿಸುತ್ತದೆ. ನಿಮ್ಮಂಥ ಮಾನವೀಯ ಕಾಳಜಿಯ ಯುವಜನತೆ ಮಂಗಳೂರಿನಲ್ಲಿ ಹೆಚ್ಚಲಿ ಎಂದು ಆಶಿಸುವೆ.

  ಪ್ರತಿಕ್ರಿಯೆ
 5. ಎಚ್. ಸುಂದರ ರಾವ್

  ಈ ಪ್ರಕರಣದ ಬಲಿಪಶುಗಳಾದ ಹುಡುಗಿಯರ ಫೋಟೋಗಳನ್ನು ಪ್ರಕಟಿಸದೆ ಇರುವಷ್ಟು ಮಾನವೀಯತೆ ಉಳಿಸಿಕೊಂಡಿದ್ದೀರಿ. ಅಭಿನಂದನೆಗಳು.

  ಪ್ರತಿಕ್ರಿಯೆ
 6. ಅಜಯ್

  ಸ್ವಾಮಿ ಪತ್ರಕರ್ತರೇ, ಅಲ್ಲಿ ಯುವತಿಯರನ್ನು ನಗ್ನರನ್ನಾಗಿ ಮಾಡಿದರು ಅನ್ನುತ್ತಿದ್ದೀರಲ್ಲ, ದೃಶ್ಯಗಳಲ್ಲಿ ಕಾಣುತ್ತಿರುವ ಹುಡುಗಿಯರ ತುಂಡುಬಟ್ಟೆಗಳು ಯಾವುವೂ ಒಳ ಉಡುಪುಗಳಲ್ಲ, ಅವು ಹೊರ ಉಡುಪುಗಳೇ. ಪಿಂಕ್ ಬಣ್ಣದ್ದು ಕೂಡ ಪಾರ್ಟಿ ವೇರ್ ! ಒಂದು ವೀಕೆಂಡ್ ಸಂಜೆ ಬೆಂಗಳೂರಿನ ಯಾವುದಾದರೂ ಮಾಲ್ ಗಳಿಗೆ ಹೋಗಿ ನೋಡಿ, ಗೊತ್ತಾಗುತ್ತದೆ. ಒಂದೇ ಒಂದು ಪೋಲೀಸ್ ನಂ. ಇಟ್ಟುಕೊಂಡು ಅದಕ್ಕೇ ಕರೆ ಮಾಡಿ, ಕರೆ ಸ್ವೀಕರಿಸಿಲ್ಲವಾದ್ದರಿಂದ ಅಸಹಾಯಕನಾದೆ ಅಂತ ನೀವು ಹೇಳುತ್ತಿರುವುದು ಒಂದೇ ಕಣ್ಣಲ್ಲಿ ಅಳುವಂತಿದೆ. ಬರ್ತ್ ಡೇ ಪಾರ್ಟಿ ಮಾಡುತ್ತಿದ್ದವರು ಮುಖ ಮುಚ್ಚಿಕೊಂಡು ತಪ್ಪಿಸಿಕೊಂಡು ಓಡುತ್ತಿದ್ದುದ್ಯಾಕೆ ಅಂತಲೂ ಹೇಳಿಬಿಡಿ.

  ಪ್ರತಿಕ್ರಿಯೆ
 7. mahadev

  ನವೀನ ನೀವು ಸರಿಯಾಗಿದ್ದೀರಿ. ನಿಮ್ಮ ಉದ್ವೇಗದಲ್ಲಿ ಯಾವ ಉತ್ಪ್ರೇಕ್ಷೆಯೂ ಇಲ್ಲ. ಸತ್ಯವಾದ್ದನ್ನ ಹೇಳಿದ್ದೀರಿ, ಮಾಡಬೇಕಾದಷ್ಟು ಪ್ರಯತ್ನ ಮಾಡಿದ್ದೀರಿ. ಕಾಮನೆ ಆದವರ ಕಣ್ಣಿಗೆ ಲೋಕವೆಲ್ಲ ಹಳದಿ ಎಂಬಂತೆ ಈ ಸಮರ್ಥಕರು ಪುಂಡರ ಪುಂಡಾಟಿಕೆಯನ್ನು ಸಮರ್ಥಿಸುತ್ತಿರುವುದು ನೋಡಿದರೆ.. ಯಾಕೋ ಮಾನವೀಯತೆಯನ್ನು ಕೊಂದುಕೊಂಡ ಆದಿತ್ಯನ ಸಂಸ್ಕೃತಿಯವರು ಹೆಚ್ಚಾಗುತ್ತಿದ್ದಾರೆ. ಅಂಥವರು ಮಂಗಳೂರು ಸೀಮೆಯಲ್ಲಿ ಯಾಕೆ ಹೆಚ್ಚಾಗುತ್ತಿದ್ದಾರೆ ಅನ್ನುವುದು ಬಗೆಹರಿಯಲಾರದ ವಿಷಯ. ಅಷ್ಟೊಂದು ಚಿಂತಕರು ಆ ಭಾಗದಲ್ಲಿದ್ದರೂ ಇವರ ಗರ್ವಕ್ಕೆ ಚ್ಯುತಿಬಾರದೆ ಹೋಯಿತಲ್ಲ ಅನ್ನೋದು ಖೇದಕರ ಸಂಗತಿ.

  ಪ್ರತಿಕ್ರಿಯೆ
 8. shrihari

  bahushaha nimageapolice ge hluva uddesha matra ittu kanutte.addarinda ennenu labha ideyo devarige gottu.nijavagiyu tadeuva manastiti iddidare 100 no ge call madabahudittu,a no maretireno atava yarannadaru murkarannagisalu e prayatnava..

  ಪ್ರತಿಕ್ರಿಯೆ
 9. Jaison Soares

  ಪತ್ರಕರ್ತನಾದವನಿಗೆ ಇದೊಂದು ನೆಪ ಮಾತ್ರ. ಬುದ್ದಿವಂತ ಪತ್ರಕರ್ತನಾಗಿದ್ದರೆ ಪೊಲೀಸ್ ಕಂಟ್ರೋಲ್ ರೂಂ 100 ಗೆ ಕರೆ ಮಾಡಬಹುದಿತ್ತು. ನಿಮ್ಮ ಕರೆ ರೆಕಾರ್ಡ್ ಕೂಡಾ ಆಗಿರುತ್ತಿತ್ತು. ಪೊಲೀಸ್ ಇಲಾಖೆ ಕರೆ ಬಂದಿಲ್ಲ ಎಂದು ಹೇಳಿ ತಪ್ಪಿಸಿಕೊಳ್ಳುವ ಪ್ರಮೇಯವೇ ಇರುತ್ತಿರಲಿಲ್ಲ.

  ಪ್ರತಿಕ್ರಿಯೆ
 10. Clinnton Dsouza

  ಪತ್ರಕರ್ತರಾಗಿ ಸರಿಯಾಗಿದ್ದಿರ. ಆದರೆ ಮನುಷತ್ವ ಮಾನಾವಿಯತೆ ದ್ರಷ್ಟಿಯಿಂದ ಸರಿಯಾಗಿಲ್ಲ.

  ಪ್ರತಿಕ್ರಿಯೆ
 11. sri

  ಅಲ್ಲಪ್ಪ, ಒಂದು ಪಕ್ಷ ನಿಮಗೇನಾದರೂ ಎಲ್ಲಾದರೂ ಬಾಂಬ್ ಇಟ್ಟಿದ್ದಾರೆ ಅಥವಾ ಎಲ್ಲಾದರೂ ಗಲಭೆ ನಡೆಯಬಹುದು ಎಂಬ ಸುದ್ದಿ ಬಂದರೆ ಏನು ಮಾಡುತ್ತಿರಿ. ಆಗಲೂ ಹೀಗೆಯೇ ಮಾಡುತ್ತಿರ? ಇಲ್ಲ ಎಂದುಕೊಳ್ಳುತ್ತೇನೆ. ದೇವರು ಯಾರಿಗೂ ಇಂತಹ ಬುದ್ಧಿ ಕೊಡದಿರಲಿ. ನಾವು ಏನೇ ಕೆಲಸ ಮಾಡುವಾಗಲೂ ಅದರಲ್ಲೂ ಬೇರೆಯವರ ಜೀವನಕ್ಕೆ ಅದು ಸಂಬಂಧ ಪಟ್ಟಿದ್ದಲ್ಲಿ, ಅದರ ಪರಿಣಾಮ ಏನು ಎಂಬುದನ್ನು ಯೋಚಿಸಿ, ನಮ್ಮ ವಿವೇಕವನ್ನು ಉಪಯೋಗಿಸಿ ಕೆಲಸ ಮಾಡಬೇಕು. ಪೊಲಿಟಿಕಲಿ ಕರೆಕ್ಟ್ ಆಗಿರುವುದು ಮುಖ್ಯ ಅಲ್ಲ.

  ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: