ನಾಲಗೆಯ ಮೇಲೆ ಕುರುಕ್ಷೇತ್ರ

 

-ಹರೀಶ್ ಕೇರ

ಬೆಟ್ಟದಡಿ

mahabharata
ಮಹಾಭಾರತದ ಹರಿಕತೆ ನಡೆದಿರುವಾಗ
ದಾಸರು ನಾಲಗೆ ತಪ್ಪಿ
ನಾಗರಿಕತೆ ಎಂದರೆ ಹಿಂಸೆಯ ಕತೆ
ಎಂದುಬಿಟ್ಟರು 

ಆಮೇಲೆ ಚಡಪಡಿಸಿದರು
ತಮ್ಮ ಮಾತನ್ನು ಅಲ್ಲೇ ಬಿಡುವುದೋ
ವ್ಯಾಖ್ಯಾನಿಸುವುದೋ ಅರಿಯದ ಸಂದಿಗ್ದದಲ್ಲಿ
ಮುಂದೆ ಕುಳಿತ ಮಂದಿಯ ಮುಖ ನೋಡಿದರು

ಉದ್ದ ಅಡ್ಡ ನಾಮಗಳು ಮುದ್ರೆಗಳು
ಮುಗಿದ ಕೈಗಳು ಬೋಳಿಸಿದ ತಲೆಗಳು
ಬಿಟ್ಟ ಮೈ ಹೊದ್ದ ಶಲ್ಯ ಇಣುಕುವ ಜನಿವಾರ
ಬೊಜ್ಜು ಮೈ ಹುಳಿ ತೇಗು
ತರಹೇವಾರಿ ಶಿಖೆಗಳು
ಕಾಸಿನಗಲದ ಕುಂಕುಮ ತಲೆಗೆ ಸೆರಗು
ಮುತ್ತೈದೆಯರ ಸಕಲ ಭೂಷಿತಗಳು

ಮಾತುಗಳು ಗಂಟಲಲ್ಲೇ ಉಳಿದವು
ಕುರುಕ್ಷೇತ್ರದ ನೆತ್ತರ ನದಿ ಹಾಗೇ ಮುಂದುವರಿಯಿತು

ಬಾಯಿ ಬಿಡುವ ಭೂಮಿ ಎದೆ ಸೀಳಿದ ಗದೆ
ನೀರ ತಡಿಯಲ್ಲಿ ಅನಾಥ ಹೆಣ ಕತ್ತಲಲ್ಲಿ ಕುಣಿವ ಕತ್ತಿ
ಧರ್ಮದ ವಿಜಯಕ್ಕೆ ನಾರಿಯರ ಆರ್ತನಾದದ ಬೆಂಬಲ
ಭಗ್ನ ಬ್ರಹ್ಮಾಸ್ತ್ರಕ್ಕೆ ಅರ್ಧ ಭ್ರೂಣ

ಇತ್ತೀಚೆಗೆ ದಾಸರು
ವಿಪರೀತ ತಡವರಿಸುತ್ತಾರೆ
ಅನ್ನುತ್ತಾರೆ ಎಲ್ಲರೂ

‍ಲೇಖಕರು avadhi

February 27, 2009

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಮಾತು ಮುಗಿದೇ ಇಲ್ಲ ಇನ್ನು

ಮಾತು ಮುಗಿದೇ ಇಲ್ಲ ಇನ್ನು

ಡೋ‌ರ ಮಾತು ಮುಗಿದೇ ಇಲ್ಲ ಇನ್ನುಮರೆತು ಎದ್ದು ಹೋದೆಯಾ...?ಹರಸಿ ನಡೆದೆ ಬಿಟ್ಟೆಯಾಕಾಣದೂರಿನ ದಾರಿ ಹಿಡಿದುನನ್ನ ಹೀಗೆ ಯಾಕೊ ತೊರೆದುಹುಡಕಲೇಗೆ...

ನೆಲದ ಕರುಳು

ನೆಲದ ಕರುಳು

ಪಿ ಆರ್ ವೆಂಕಟೇಶ್ ದುಃಖದ ಕುಲುಮೆಯಲಿಹಾಡಲಾರದು ಹಕ್ಕಿಬೇಲಿಯಾಚೆಯ ಮಾತು ಮೌನ ಬೆಂಕಿ ಬಂಧನದ ಭಾವಬಿತ್ತಿತಾದರು ಏನು?ಪುಟಿದ ಕನಸುಗಳೆಲ್ಲಕಸದ...

ಸತ್ಯವು ಸುಡುತಿರುವಾಗ…

ಸತ್ಯವು ಸುಡುತಿರುವಾಗ…

ಇಮ್ತಿಯಾಜ್ ಶಿರಸಂಗಿ ರಾತ್ರೋರಾತ್ರಿ ಚಿತೆಗಳೂರಿದುಸತ್ಯವು ಸುಡುತಿರುವಾಗ... ಸತ್ತವರ ನೋವನ್ನುಪ್ರಜೆಗಳು ನೆನಪಿಟ್ಟುಕೊಳ್ಳಬೇಕು…...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This