`ನೀನು ಯಾರ ಮಗ ?'

ಸುಧನ್ವಾ ದೇರಾಜೆಯ ‘ಚಂಪಕಾವತಿ’ ಬ್ಲಾಗ್ನಲ್ಲಿದ್ದ ಈ ಸ್ವಾರಸ್ಯಕರ ಬರಹ ನಿಮಗೂ ಇಷ್ಟವಾಗುತ್ತದೆ ಎಂಬ ನಂಬಿಕೆಯಿಂದ

ಸುತ್ತ ನೆರೆದಿದ್ದ ಹಸ್ತಿನಾವತಿಯ ಸಮಸ್ತರ ಮಧ್ಯೆ, `ನೀನು ಯಾರ ಮಗ ?’ ಎಂಬ ಕೃಪಾಚಾರ್ಯರ ಪ್ರಶ್ನೆಯು, ಕರ್ಣನ ಕಿವಿಗಳಿಗೆ ಕಠೋರವಾಗಿಯೇ ಕೇಳಿತು। ಅವನ ಪರವಾಗಿ ಉತ್ತರಿಸುವದಕ್ಕೆ ಅಲ್ಲಿ ಯಾರೂ ಇರಲಿಲ್ಲ। ತಲೆತಗ್ಗಿಸಿದ, ಹಿಂಜರಿದ, ಮುಜುಗರದ ಮುದ್ದೆಯಾದ. `ನೀವು ದೇವತೆಗಳಿಂದಲೇ ಹುಟ್ಟಿದ ಪಾಂಡವರೇ?’ ಅಂತ ಯಾರೊಬ್ಬನೂ ಕೇಳಲಿಲ್ಲ. ಅವರ ಜತೆ ಋಷಿಗಳಿದ್ದರು, ಕುಂತಿಯಿದ್ದಳು. ಕಾಡಿನಿಂದ ಬಂದವರನ್ನು ಸೇರಿಸಿಕೊಂಡಿತು ಹಸ್ತಿನಾವತಿ . ದೊಡ್ಡವರ ಮಕ್ಕಳಾದರೆ ತಲೆಯೆತ್ತಿ ಎದೆಯುಬ್ಬಿಸಿ ನಡೆವ ಚೆಂದವೇ ಬೇರೆ. ಅಪ್ಪನಿಲ್ಲದ ಮಕ್ಕಳ ಸಂಕಟ ಅನುಭವಿಸಿದವರೇ ಬಲ್ಲರು.
ದ್ವಾಪರಯುಗದಲ್ಲಿ ಮೆರೆದ ಚಂದ್ರ ವಂಶಜರ ಪಟ್ಟಿ ಎಷ್ಟುದ್ದ ಇದೆಯೆಂದರೆ – ಚಂದ್ರನಿಂದ ಜನಮೇಜಯನವರೆಗೆ ಚಂದ್ರವಂಶದ ಸುಮಾರು ಇಪ್ಪತ್ತು ತಲೆಮಾರುಗಳ ಹೆಸರು ಹೇಳುತ್ತದೆ ಮಹಾಭಾರತ. ಮಹಾಭಾರತದಲ್ಲಿ ಒಂದು ಕುಟುಂಬದ ಕತೆಯು ಮಾನವ ಜನಾಂಗದ ಕತೆಯಾಗಿ ನಮ್ಮನ್ನು ರೋಮಾಂಚನಗೊಳಿಸಿದಂತೆ, ಅಮೆರಿಕದ ಅಲೆಕ್ಸ್ ಹೇಲಿಯು `ರೂಟ್ಸ್’ ಕಾದಂಬರಿಯಲ್ಲಿ ಹೇಳಿದ ನಿಜದ ಕತೆಯೂ ಮತ್ತೊಂದು ಮಹಾಭಾರತದಂತಿದೆ. (ಅದನ್ನು `ತಲೆಮಾರು’ ಹೆಸರಿನಲ್ಲಿ ಬಂಜಗೆರೆ ಜಯಪ್ರಕಾಶ್ ಕನ್ನಡಕ್ಕೆ ತಂದಿದ್ದಾರೆ.) ಹೇಲಿಯ ಅಜ್ಜನ-ಅಜ್ಜನ-ಅಜ್ಜನಾದ ಕುಂಟಾಕಿಂಟೆ ಎಂಬ ಆಫ್ರಿಕಾದ ಕರಿಯ, ೧೭೬೭ರಲ್ಲಿ ಅಮೆರಿಕಕ್ಕೆ ಗುಲಾಮನಾಗಿ ಸಾಗಿಸಲ್ಪಟ್ಟಿದ್ದ. ಆ ಕುಂಟಾಕಿಂಟೆಯಿಂದ ತನ್ನವರೆಗಿನ ವಂಶದ ನಿಜಕತೆಯನ್ನು ೧೯೬೫ರಿಂದ ಹನ್ನೆರಡು ವರ್ಷಗಳ ಕಾಲ ಹುಡುಕಿ ಅಧ್ಯಯನ ಮಾಡಿದ ಅಲೆಕ್ಸ್ ಹೇಲಿಯು ಅದಕ್ಕೆ ಕಾದಂಬರಿಯ ರೂಪ ನೀಡಿದ. ಕರಿಯರ ಮೇಲೆ ಬಿಳಿಯರು ಮಾಡಿದ ದೌರ್ಜನ್ಯಗಳಿಗೆ ಜೀವಂತ ಸಾಕ್ಷಿಯಂತಿರುವ ಈ ಕಾದಂಬರಿ ಜಗತ್ತಿನ ೩೭ ಭಾಷೆಗಳಿಗೆ ಅನುವಾದಗೊಂಡಿದೆ. ಅದೆಷ್ಟೊ ಜನ ಕರಿಯರು ಅದನ್ನು ಬೈಬಲ್ಲಿನಂತೆ ಮನೆಯಲ್ಲಿಟ್ಟುಕೊಂಡಿದ್ದಾರೆ.
ಮೂರ್‍ನಾಲ್ಕು ವರ್ಷಗಳ ಹಿಂದೆ ಓದಿದ್ದ ಆ ಪುಸ್ತಕ ಮೊನ್ನೆಮೊನ್ನೆ ಮತ್ತೆ ಕೈಗೆ ಬಂತು. ಆಗ ಮನೆಯಲ್ಲಿರುವ ಕಬ್ಬಿಣದ ಕರೀ ಪೆಟ್ಟಿಗೆಯೊಂದರಲ್ಲಿ ದಪ್ಪ ಬೈಂಡಿನ ಮೇಲೆ `ಸಂತಾನ ನಕ್ಷೆ’ ಅಂತ ಬರೆದಿರುವ ಪುಸ್ತಕದ ನೆನಪಾಯಿತು. ಅಲೆಕ್ಸ್ ಹೇಲಿಯಿಂದ ಏಳು ತಲೆಮಾರುಗಳ ಹಿಂದೆ ಇದ್ದವನು ಕೈರಬಾ ಕುಂಟಾಕಿಂಟೆ. ಅದನ್ನು ಶೋಧಿಸಲು ಅವನಿಗೆ ೧೨ ವರ್ಷಗಳ ಅಧ್ಯಯನ-ತಿರುಗಾಟ ಬೇಕಾಯಿತು. ನನಗೆಷ್ಟು ಸಮಯ ಬೇಕಾದೀತು? ತಕ್ಷಣ ಜಾಲಾಡಿದೆ. ಅದರಲ್ಲಿ ಕ್ಷಣಮಾತ್ರದಲ್ಲಿ ಸಿಕ್ಕ ನಮ್ಮ ತಂದೆ ಮುಖಾಂತರದ ಹಿರಿ ತಲೆಯ ವಂಶಾವಳಿಯನ್ನು ಸುಮ್ಮನೆ ನಿಮ್ಮ ಮುಂದಿಡುತ್ತಿದ್ದೇನೆ. ಸುಧನ್ವಾ ದೇರಾಜೆ-ಸತ್ಯಮೂರ್ತಿ ದೇರಾಜೆ-ದೇರಾಜೆ ಎಂ.ಕೃಷ್ಣಯ್ಯ-ಎಂ.ಗಣಪಯ್ಯ-ಮಂಗಲ್ಪಾಡಿ ಕೃಷ್ಣಯ್ಯ-ಅಜ್ಜನಗದ್ದೆ ಸುಬ್ರಾಯ-ವೆಂಕಟೇಶ್ವರ-ನಾರಾಯಣ ಭಟ್ಟ-ಅಂಣಮರಿ ಗೋವಿಂದ ಹೆಗ್ಗಡೆ. ಹೀಗೆ ನನ್ನಿಂದ ಏಳು ತಲೆಮಾರುಗಳಾಚೆಗಿದ್ದ ಗೋವಿಂದ ಹೆಗ್ಗಡೆಯವರ ಕಾಲ ( ದಕ್ಷಿಣಕನ್ನಡದ ವಿಟ್ಲ ಬಳಿಯ ತಾಳಿಪಡ್ಪು ಎಂಬಲ್ಲಿ ವಾಸವಾಗಿದ್ದರಂತೆ. ನೂರಕ್ಕೂ ಹೆಚ್ಚು ವರ್ಷಗಳಷ್ಟು ಹಳೆಯದಾದ, ಅವರು ವಾಸವಾಗಿದ್ದರೆನ್ನಲಾದ ಮನೆ ಇತ್ತೀಚಿನವರೆಗೂ ಇತ್ತು.) ಸುಮಾರು ೧೭೬೦ನೇ ಇಸವಿ ಆಗಿದ್ದಿರಬಹುದೆಂದು ಅಂದಾಜು ಲೆಕ್ಕ ಹಾಕಿದೆ . ಅಂದರೆ ಕುಂಟಾಕಿಂಟೆಯ ಕಾಲ ! ಆಹಾ, ಖುಶಿಯಾದೆ. ಅಷ್ಟೇ ಅಲ್ಲ, ಅಜ್ಜನ ಫೋಟೊ ಎಲ್ಲರ ಮನೆಗಳಲ್ಲೂ ಇದೆ. ಅಜ್ಜನ-ಅಜ್ಜನ ಫೋಟೊ ಇದೆಯೇ? ನಮ್ಮಲ್ಲಿದೆ ಅನ್ನುವುದು ನನಗೆ ಗರ್ವದ ಸಂಗತಿ. (ಅವಕಾಶವಾದಾಗ ತೋರಿಸುತ್ತೇನೆ)
ಈಗ ಪಿತಾಮಹ ಪ್ರಪಿತಾಮಹರ ನೆನೆದು ನೀವ್ಯಾರಾದರೂ ಎಂಟು ತಲೆಮಾರುಗಳಿಗಿಂತ ಹಿಂದೆ ಹೋಗಬಲ್ಲಿರೇ?

‍ಲೇಖಕರು avadhi

August 26, 2013

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಫಾರುಕ್ ಮತ್ತೆ ಸಿಕ್ಕಿದ

ಫಾರುಕ್ ಮತ್ತೆ ಸಿಕ್ಕಿದ

ಗಜಾನನ ಮಹಾಲೆ ಸ್ನೇಹವೆಂಬ ವಿಸ್ಮಯ ಸ್ನೇಹ ವ್ಯಕ್ತಿಗಳಿಬ್ಬರ ನಡುವೆ ಹೇಗೆ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಒಮ್ಮೊಮ್ಮೆ ಆಲೋಚಿಸಿದರೆ...

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಡಾ. ಬಿ. ಜನಾರ್ಧನ್‌ ಭಟ್  ಮುಂಬಯಿಯ ಕನ್ನಡ ಸಾಹಿತ್ಯ ಲೋಕದ ಜತೆಗೆ ನನಗೆ ನಿಕಟ ಬಾಂಧವ್ಯ ಇರುವುದರಿಂದ ಅದರ ವೈಶಿಷ್ಟ್ಯವನ್ನು ಗ್ರಹಿಸಿ...

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: