ನೆರೆ ಬಂದ ಕಾಲಕ್ಕೆ..

ಸತೀಶ್ ಶಿಲೆ ಎಂದೇ ಗೆಳೆಯರ ಮಧ್ಯೆ ಪರಿಚಿತನಾದ ಸತೀಶ್ ಜಿ ಟಿ ಡೆಕ್ಕನ್ ಹೆರಾಲ್ಡ್ ವರದಿಗಾರ. ಚಿತ್ರದುರ್ಗದಿಂದ ಸಡನ್ನಾಗಿ ಎದ್ದು ಬಂದ ಪ್ರತಿಭಾವಂತ ಪತ್ರಕರ್ತರ ಪೈಕಿ ಒಬ್ಬ. ಇತ್ತೀಚಿಗೆ ತಾನೇ ಪ್ರವಾಹ ಪೀಡಿತ ಊರುಗಳನ್ನು ಪತ್ರಿಕೆಗಾಗಿ ಸುತ್ತಿ ಬಂದಿದ್ದಾನೆ. ಕಳಕಳಿಯ ಈತ ಅನೇಕ ಮಾನವೀಯ ವರದಿಗಳನ್ನು ಹೊತ್ತು ತಂದಿದ್ದಾನೆ. ಸಂಬಂಜ ಎನ್ನುವ ಬ್ಲಾಗ್ ಆತನ ಮನದಾಳದ ಮಾತುಗಳಿಗೆ ಸಾಕ್ಷಿಯಾಗಿದೆ. ಪ್ರವಾಹ ಕುರಿತ ಸತೀಶ್ ವರದಿಗಳು ಆಗಾಗ ನಿಮ್ಮ ಮುಂದೆ
41260
ನೆರೆ ಬಿಡಿಸಿಟ್ಟ ಚಿತ್ರಗಳು
1
ಊರು ಮಾಟೂರು. ಶಿರುಗುಪ್ಪ ತಾಲೂಕಿನ ಕೊನೆ ಹಳ್ಳಿ. ಊರಲ್ಲಿ ಇದ್ದದ್ದು 110 ಮನೆ. ನಂಬಿದರೆ ನಂಬಿ, ಬಿಟ್ಟರೆ ಬಿಡಿ, ಈಗ ಅಲ್ಲಿ ಉಳಿದಿರುವುದೆ ಕೇವಲ ಎರಡು ಮನೆಗಳು. ಮಾಟೂರು ಈಗ ಅಕ್ಷರಶಃ ಹಾಳೂರು. ನೆಟ್ಟಗೆ ನಿಂತಿರುವ ಎರಡು ಮನೆಗಳಲ್ಲೂ ಯಾರೂ ಜೀವಿಸುತ್ತಿಲ್ಲ. ಮೆತ್ತಗಾಗಿರುವ ಗೋಡೆ ಅದ್ಯಾವಾಗ ಮುರ್ಕೊಂಡು ಬೀಳುತ್ತೋ ಎಂಬ ಆತಂಕ.
2
ಹೆಸರು ವೆಂಕಟೇಶ. ಈಗ ಮಾನವಿಯಲ್ಲಿ ಐಟಿಐ ಓದುತ್ತಿದ್ದಾನೆ. ಮೊನ್ನೆ ಬಿದ್ದ ಭಾರೀ ಮಳೆಗೆ ಅವನ ಮನೆ ಮುರಿದುಬಿದ್ದಿದೆ. ಮನೆಯಲ್ಲಿದ್ದ ಎಲ್ಲವೂ ನೀರುಪಾಲು. ಅವನ ಎಸ್ ಎಸ್ ಎಲ್ ಸಿ ಅಂಕಪಟ್ಟಿಯೂ. ಅವನಿಗೆ ಈಗ ಅಂಕಪಟ್ಟಿಯನ್ನು ಹೊಂದಿಸುವುದು ದೊಡ್ಡ ಕೆಲಸ. ತಾನು ಓದಿದ ಶಾಲೆಯಲ್ಲಿ ಮೂಲ ದಾಖಲಾತಿ ಪರೀಕ್ಷಿಸಿ, ಪರೀಕ್ಷಾ ಮಂಡಳಿ ವರೆಗೆ ಅವನು ಅಲೆಯಬೇಕು. ದುರಾದೃಷ್ಟವಶಾತ್ ಅವನ ಶಾಲೆಯೂ ಇದೇ ಮಳೆಗೆ ತುತ್ತಾಗಿ, ಅಲ್ಲಿಯ ಎಲ್ಲಾ ದಾಖಲೆಗಳು ನೀರುಪಾಲಾಗಿದ್ದರೆ? ಉತ್ತರ ಅವನಲ್ಲಿಲ್ಲ.
3
“ಬರೋಬ್ಬರಿ ಏಳು ಟ್ರಾಕ್ಟರ್ ಲೋಡ್ ಬರೀ ಸಕ್ಕರೇನೆ ನಾಲ್ಕು ದಿನದ ಹಿಂದೆ ಅನ್ ಲೋಡ್ ಮಾಡಿ ಗೊಡೌನ್ ತುಂಬಿಸಿದ್ವಿ. ಈಗ ನೋಡಿ, ಒಂದೇ ಒಂದು ಬೊಗಸೆ ಸಕ್ಕರೆನೂ ಉಳಿದಿಲ್ಲ. ಅಷ್ಟೇ ಅಲ್ಲ, ರಾಶಿ ರಾಶಿ ದ್ರಾಕ್ಷಿ, ಗೋಡಂಬಿ… ಐದಾರು ಲೋಡು ಅಕ್ಕಿ.. ಎಲ್ಲವೂ ನೀರಾದವು”..ಹೀಗೆ ಅವಲತ್ತುಕೊಳ್ಳುತ್ತಿದ್ದವರು ಮಂತ್ರಾಲಯ ಮಠ ಆವರಣದಲ್ಲಿರುವ ಅನ್ನಪೂರ್ಣ ಪ್ರಸಾದ ನಿಲಯದ ನೌಕರ.
4
ರಾಯಚೂರು ತಾಲೂಕು ಬುರ್ದಿಪಾಡು ಜನ ಶ್ರೀಮಂತ ರೈತರು. ವರ್ಷಕ್ಕೆ ಎರಡು ಬಾರಿ ಭತ್ತ ಬೆಳೆದು ರೊಕ್ಕೆ ಗಳಿಸುತ್ತಿದ್ದರು. ಈಗ್ಗೆ ಕೆಲವು ತಿಂಗಳುಗಳಿಂದ ಅಕ್ಕಿ ಬೆಲೆ ಏರುತ್ತಿದ್ದ ಕಾರಣ ಈ ಬಾರಿ ಭಾರೀ ಲಾಭವನ್ನೇ ನಿರೀಕ್ಷಿಸಿದ್ದರು. ಹೊಳೆ ಇನ್ನು ಒಂದೇ ಒಂದು ವಾರ ತಡೆದು ಬಂದಿದ್ದರೆ, ಅವರೆಲ್ಲ ಭತ್ತವನ್ನು ಕಟಾವು ಮಾಡಿ ಕಾಸು ಎಣಿಸುತ್ತಿದ್ದರು. ಆದರೆ ಈಗ ಆದ ನಷ್ಟವೆಷ್ಟು ಎಂದು ಲೆಕ್ಕ ಹಾಕುತ್ತಿದ್ದಾರೆ.
– ಮೊನ್ನೆಯ ನೆರೆ ಬಿಡಿಸಿಟ್ಟ ಕೆಲವು ದೃಶ್ಯಗಳಿವು

‍ಲೇಖಕರು avadhi

November 13, 2009

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಹೆರಬೈಲು ದ್ಯಾವರ ಕೋಳಿಪಳ್ದಿ ಊಟ ಮತ್ತು ಬೊಚ್ಚ ಗಿರಿಯಣ್ಣ ಮಾಸ್ತರ

ಹೆರಬೈಲು ದ್ಯಾವರ ಕೋಳಿಪಳ್ದಿ ಊಟ ಮತ್ತು ಬೊಚ್ಚ ಗಿರಿಯಣ್ಣ ಮಾಸ್ತರ

ಈ ಉತ್ತರ ಕರ್ನಾಟಕದ ಭಾಷೆಗೆ ಗಂಡು ಮೆಟ್ಟಿನ ನಾಡು, ನಾಡಿನ ಭಾಷೆ ಅಂತ ಅನ್ನುತ್ತಾರಲ್ಲ ಹಾಗೆ ಈ ಉತ್ತರ ಕನ್ನಡಕ್ಕೆ ಸಮುದ್ರ ಮೆಟ್ಟಿದ ನೆಲ,...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This