ಪ್ರತಿಭಾ ಸಾಮಗ ಅವರಿಗೆ ನೂಪುರ ಭ್ರಮರಿ ಪ್ರಶಸ್ತಿ

‘ ರಾಜ್ಯಮಟ್ಟದ ವರ್ಷದ ಶ್ರೇಷ್ಠ ನೃತ್ಯ ವಿಮರ್ಶೆ ಪ್ರಶಸ್ತಿ ’ ‘ಶ್ರೀಮತಿ ಪ್ರತಿಭಾ ಸಾಮಗ’ ಇವರಿಗೆ ಕಲಾದಿಗಂತದಲ್ಲಿ ಹೆಸರುವಾಸಿಯಾಗಿರುವ ‘ನೂಪುರ ಭ್ರಮರಿ’ ದ್ವೈಮಾಸಿಕ ಮತ್ತು ಪ್ರತಿಷ್ಠಾನ(ರಿ.) ನೃತ್ಯಕ್ಷೇತ್ರದ ವಿಮರ್ಶಕರನ್ನು ಗುರುತಿಸಿ, ಗೌರವಿಸುವ ಮತ್ತು ವಿಮರ್ಶಾ ಕ್ಷೇತ್ರದ ಜವಾಬ್ದಾರಿಯನ್ನು ಹೆಚ್ಚಿಸುವ ಉದ್ದೇಶದಿಂದ ರಾಜ್ಯಮಟ್ಟದ ‘ವರ್ಷದ ಶ್ರೇಷ್ಠ ನೃತ್ಯ ವಿಮರ್ಶಕ’ ಪ್ರಶಸ್ತಿಯನ್ನು ೨೦೧೦ರಲ್ಲಿ ಆರಂಭಿಸಿದ್ದು ತಮಗೆ ತಿಳಿದಿರುವ ವಿಷಯ. ಈ ನಿಟ್ಟಿನಲ್ಲಿ ೨೦೧೧ನೇ ಸಾಲಿನ ಪ್ರಶಸ್ತಿಗೆ ಡಾ. ಶತಾವಧಾನಿ ಗಣೇಶ್ ಅವರ ಅಧ್ಯಕ್ಷತೆಯ ಪ್ರಶಸ್ತಿ ನಿರ್ಣಾಯಕ ಸಮಿತಿಯು ವಿಮರ್ಶೆಗಳ ಮೌಲ್ಯ, ಉದ್ದೇಶ, ಸ್ವರೂಪ, ಗುಣಮಟ್ಟವನ್ನಾಧರಿಸಿ ಮತ್ತು ನೃತ್ಯಕ್ಷೇತ್ರದ ವಿಮರ್ಶೆಗೆ ಈವರೆಗೆ ಸಲ್ಲಿಸಿದ ಅನುಪಮ ಸೇವೆಯನ್ನು ಗುರುತಿಸಿ ಉಡುಪಿಯ ವಿದುಷಿ ಶ್ರೀಮತಿ ಪ್ರತಿಭಾ ಸಾಮಗ ಅವರನ್ನು ಒಮ್ಮತದಿಂದ ಆಯ್ಕೆ ಮಾಡಿದೆ. ಈ ವರುಷ ವಿವಿಧ ಪತ್ರಿಕೆ/ನಿಯತಕಾಲಿಕೆ/ ವೆಬ್ ತಾಣಗಳಲ್ಲಿ ಬರೆಯಲಾದ ವಿಮರ್ಶೆಗಳ ಪೈಕಿ ಸುಮಾರು ೩೪ ವಿಮರ್ಶಾ ಲೇಖಕರ ನಾಮನಿರ್ದೇಶನ ಪಟ್ಟಿಯನ್ನು ಲಕ್ಷಿಸಲಾಗಿ ಪ್ರತಿಭಾ ಸಾಮಗರ ಕೊಡುಗೆಯು ಮುಂಚೂಣಿಯಲ್ಲಿದೆ. ಪ್ರಶಸ್ತಿಯು ಫೆಬ್ರವರಿ ೨೦, ೨೦೧೨ರಂದು ಬೆಂಗಳೂರಿನ ನಯನಾ ಸಭಾಂಗಣದಲ್ಲಿ ನೂಪುರ ಭ್ರಮರಿ ಸಂಶೋಧನಾ ಪ್ರತಿಷ್ಠಾನ ಮತ್ತು ಕರ್ನಾಟಕ ಸಂಶೋಧಕರ ಒಕ್ಕೂಟದ ಜಂಟಿ ಸಹಭಾಗಿತ್ವದಲ್ಲಿ ನಡೆಯಲಿರುವ ರಾಜ್ಯಮಟ್ಟದ ನೃತ್ಯ ಸಂಶೋಧನಾ ವಿಚಾರಸಂಕಿರಣದ ಸಮಾರೋಪದಲ್ಲಿ ವಿತರಣೆಯಾಗಲಿದ್ದು ಗೌರವಧನ, ಪ್ರಶಸ್ತಿ ಪತ್ರ, ಸ್ಮರಣಿಕೆ, ಫಲತಾಂಬೂಲಗಳನ್ನು ಒಳಗೊಂಡಿರುತ್ತದೆ.  ]]>

‍ಲೇಖಕರು G

February 1, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಫಾರುಕ್ ಮತ್ತೆ ಸಿಕ್ಕಿದ

ಫಾರುಕ್ ಮತ್ತೆ ಸಿಕ್ಕಿದ

ಗಜಾನನ ಮಹಾಲೆ ಸ್ನೇಹವೆಂಬ ವಿಸ್ಮಯ ಸ್ನೇಹ ವ್ಯಕ್ತಿಗಳಿಬ್ಬರ ನಡುವೆ ಹೇಗೆ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಒಮ್ಮೊಮ್ಮೆ ಆಲೋಚಿಸಿದರೆ...

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಡಾ. ಬಿ. ಜನಾರ್ಧನ್‌ ಭಟ್  ಮುಂಬಯಿಯ ಕನ್ನಡ ಸಾಹಿತ್ಯ ಲೋಕದ ಜತೆಗೆ ನನಗೆ ನಿಕಟ ಬಾಂಧವ್ಯ ಇರುವುದರಿಂದ ಅದರ ವೈಶಿಷ್ಟ್ಯವನ್ನು ಗ್ರಹಿಸಿ...

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: