ಬಯಲು ಆಲಯವೆರಡು ತನ್ನೊಳಗೆ ಎನುವಂತೆ

ಒಂಟಿಮರ..ಬುದ್ಧ ಮತ್ತು ನಾವು

ಎನ್.ಕೃಷ್ಣಮೂರ್ತಿ

ವಿಶಾಲದೊಳಗೊಂದು ಒಂಟಿ ಮರ ಬಯಲು ಆಲಯವೆರಡು ತನ್ನೊಳಗೆ ಎನುವಂತೆ ಹಠಯೋಗಿ ಅನ್ನಿಸೊಲ್ಲ ಕಾರಣ ಮರ ಮಧ್ಯಾಹ್ನದ ಬಿಡುವಿನಲ್ಲಿ ಧ್ಯಾನಿಸುತ್ತೆ ಸಂಭ್ರಮಿಸುತ್ತೆ ಕೊಳಲ ಹುಡುಗನ ತುಂಟಾಟಕೆ ಮತ್ತು ಮಿಡಿಯುತ್ತೆ ಋತುಚಕ್ರದಾಟಕ್ಕೂ… ಮತ್ತದರಡಿಯಲ್ಲಿ ಆರೋ ನಡೆದುಹೋದ ಪಾದದೆಳೆ ಶುದ್ಧನಾದ ಬುದ್ಧನವೇ.. ಮರ ಮೌನ ಮತ್ತು ನೆರಳು ದೂರದಲ್ಲಿ ಕಿತ್ತ ಸಂಕೋಲೆಗೆ ಯಶೋಧರೆಯ ಅಳು ಸಂಜೆ ಮರದೆದೆಗೆ ಹಿಂತಿರುಗೆ ಹಕ್ಕಿ-ಪಕ್ಕಿ ಮಿಲನ ಮಾತುಕತೆ ಮಿಥುನ ಮರಿ ಚಿಗುರಿ ಯಾ ಗರಿಯುದುರಿ ಧ್ಯಾನದಿಂದೆದ್ದು ಮರ ಕಣ್ಣರಳಿಸುತ್ತೆ ಸಂಜೆ ಸೂರ್ಯನ ಬಣ್ಣಕ್ಕೆ ಮೈಮರೆಯುತ್ತೆ ಎದೆಗೂಡಿನೊಳಗೆ ಎಷ್ಟೊಂದು ಜೀವಕ್ಕೆ ತಾಯಿಯಾಗುತ್ತೆ ತನ್ನೊಳಗೆ ತಾನೇ ಅಚ್ಚರಿಯಂಬಂತೆ… ಮರಕ್ಕೀಗ ಜ್ಞಾನೋದಯ ಯಾರೋ ಅದರೆಡೆಗೆ ಬರುತ್ತಿರುವಂತೆ ಬುದ್ಧನೇ…ಇರಬಹುದು ಮರ ಜೀವನ್ಮುಖಿ ಯಶೋಧರೆ ಶಾಪವಳಿದು ಸುಖಿ…!]]>

‍ಲೇಖಕರು G

September 23, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ನಿರುತ್ತರ

ನಿರುತ್ತರ

ಪ್ರಕಾಶ್ ಬಿ ಬೊಕ್ಕುತಲೆ, ಹಸಿದ ದೇಹ, ಒಣಗಿದ ಗಂಟಲು, ಗಂಟು ಗಂಟಾದ ಕೂದಲು ತ್ರಾಣವಿಲ್ಲದ ಶರೀರ, ಮಳೆ ನಿಂತ ಕಾದ ನೆಲ. ತೆರೆದ ಬಾಯೊಳಗೆ...

ನನ್ನ ಬುದ್ಧ

ನನ್ನ ಬುದ್ಧ

ನಂದಿನಿ ಹೆದ್ದುರ್ಗ ಹೊಸಪ್ರೇಮಿಗಳ ನಡುರಾತ್ರಿಯ ಮೊರೆವಮಾತುಗಳ ನಡುವಿಂದ ಕದ್ದು ಓಡಿಬರುತ್ತವೆ ಒಂದಷ್ಟು ಮುದ್ದುಮುದ್ದು ಪದಗಳು.ಅದು ಅವಳು ಪದ್ಯ...

ಜೀವನದ ಹೊಟ್ಟೆ ತುಂಬಿ

ಜೀವನದ ಹೊಟ್ಟೆ ತುಂಬಿ

ಮಾಲಾ.ಮ.ಅಕ್ಕಿಶೆಟ್ಟಿ ವಿಧ ವಿಧ ಭಕ್ಷ್ಯಗಳು ಸಿಹಿ ಖಾರ ಹುಳಿ ಒಗರು ಈರುಳ್ಳಿ ಬೆಳ್ಳುಳ್ಳಿ ಹುಣಸೆ ಬೆಲ್ಲ  ಎಣ್ಣೆ ಹೆಚ್ಚೋ ಕಡಿಮೆಯೋ ರುಚಿ ಪಾಪಿ...

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: