‘ಬೋಳೆ’ ಕಣ್ಣಿನ ಗಂಗಾಧರ..

suchith kotianಸುಚಿತ್ ಕೋಟ್ಯಾನ್ ಕುರ್ಕಾಲು

ಸ್ನಾತಕೋತ್ತರ ಪದವಿ ಮುಗಿಸಿ ನೇರವಾಗಿ ಉಡುಪಿಯ ಎಂಜಿಎಂ ಕಾಲೇಜಿಗೆ ಉಪನ್ಯಾಸಕನಾಗಿ ಸೇರಿದ್ದೆ. ಎಲ್ಲವೂ, ಎಲ್ಲದೂ ಹೊಸ ಅನುಭವ. ಹಳೆಯ ಬ್ಯಾಚಿನ ಸೀನಿಯರ್ ವಿದ್ಯಾರ್ಥಿಗಳನ್ನು ಮಾತನಾಡಿಸುವುದಕ್ಕೆ ಕೊಂಚ ಭಯವಾಗುತ್ತಿದ್ದುದರಿಂದ ಹೊಸಬರತ್ತ ಹೆಚ್ಚು ಆಸಕ್ತಿ ವಹಿಸುತ್ತಿದ್ದೆ. ಆಗ ಕಾಣಸಿಕ್ಕವನೇ ಗಂಗಾಧರ.

ದೂರದ ಕೊಪ್ಪಳದಿಂದ ಉಡುಪಿಗೆ ಬಂದಿದ್ದ ಗಂಗಾಧರ. ಮೊದಲ ನೋಟಕ್ಕೆ ಆತನ ಕಣ್ಣುಗಳೇ ನನಗೆ ಕಂಡಿತ್ತು. ದೊಡ್ಡ ದೊಡ್ಡ ‘ಬೋಳೆ’ ಕಣ್ಣುಗಳು  ಸದಾ ಕೆಂಪಾಗಿದ್ದು ಹಳ್ಳಿ ಹೈದನೊಬ್ಬ ಮೊದಲ ಬಾರಿ ಪ್ಯಾಟೆ ಕಂಡಾಗ ಆಗುವ ಭಯ ಆತನಲ್ಲಿ ಗೋಚರಿಸಿತ್ತು. (ಕಣ್ಣು ದೊಡ್ಡದಾಗಿದ್ರೆ ತುಳು ಭಾಷೆಯಲ್ಲಿ ‘ಬೋಳೆ ಕಣ್ಣು’ ಎಂದು ತಮಾಷೆ ಮಾಡುವುದುಂಟು) ನಿಜ ಹೇಳಬೇಕಾದರೆ ಆ ಕಣ್ಣುಗಳೇ ನನ್ನನ್ನು ಆಕರ್ಷಿಸಿದ್ದು.

tundu hykluಕ್ಲಾಸಿನ ಇತರರು ಹೊಸ ಸ್ನೇಹಿತರ ಜೊತೆಗೆ ಮನಬಿಚ್ಚಿ ಮಾತನಾಡುತ್ತಿದ್ದರೆ ಗಂಗಾಧರ ಮಂಕಾಗಿ ಬಿಡುತ್ತಿದ್ದ. ಯಾರ ಸಹವಾಸವೂ ಬೇಡ ಎಂಬಂತೆ ಒಬ್ಬನೇ ಇರುತ್ತಿದ್ದ. ಮೇಲ್ನೋಟಕ್ಕೆ ಆತ ಉಡುಪಿಯ ವಾತಾವರಣ ಕಂಡು ಭಯಗೊಂಡವನಂತೆ ಕಂಡ. ವಿಚಾರಿಸಿದರೆ “ಹೌದು ಸರ್”, “ಇಲ್ಲ ಸರ್” ಅನ್ನವುದು ಬಿಟ್ಟರೆ ಬೇರೆ ಶಬ್ದಗಳೇ ಆತನ ಬಾಯಿಯಿಂದ ಹೊರಡುತ್ತಿರಲಿಲ್ಲ. ಹುಡುಗ ಇಲ್ಲಿಗೆ ಸೆಟ್ಟಾಗ್ಲಿಕ್ಕಿಲ್ಲ ಅನ್ನಿಸತೊಡಗಿತು.

ಗಂಗಾಧರನ ಭಯ ದೂರ ಮಾಡಲು ಆತನ ಕೆಲ ಸ್ನೇಹಿತರು ಪ್ರಾಮಾಣಿಕವಾಗಿ ಪ್ರಯತ್ನಿಸಿದರು. ಆದರೆ ಆತ ಉಡುಪಿಗೆ ಒಗ್ಗಲೇ ಇಲ್ಲ. ನಮ್ಮೂರ ಕುಚ್ಚಿಗೆ ಅಕ್ಕಿಯಿಂದ ಹಿಡಿದು ನಮ್ಮ ವಿದ್ಯಾರ್ಥಿಗಳ ‘ಹೈ ಫೈ’ ಜೀವನಶೈಲಿ ಆತನಿಗೆ ಅಜೀರ್ಣವಾಗತೊಡಗಿತು. ಗಂಗಾಧರ ಮೆಲ್ಲನೆ ಗಂಟುಕಟ್ಟಲು ಶುರುಮಾಡಿದ. “ಸರ್ ಊರಿಗೆ ಹೋಗಿ ಬರುತ್ತೇನೆ” ಎಂದು ಹೇಳತೊಡಗಿದ. ಹೋದರೆ ಈತ ಮತ್ತೆ ಬರಲಿಕ್ಕಿಲ್ಲ ಎಂದು ನಾನು ಮತ್ತು ವಿಭಾಗ ಮುಖ್ಯಸ್ಥ ಮಂಜುನಾಥ್ ಸರ್ ತುಂಬಾ ಪ್ರಯತ್ನಿಸಿದೆವು ಆತನನ್ನು ಉಡುಪಿಯಲ್ಲೇ ನೆಲೆ ಊರುವಂತೆ ಮಾಡಲು. ಪುಣ್ಯಾತ್ಮ ಒಪ್ಪಿದ.

ಅದರೆ… ಗಂಗಾಧರನಿಗೆ ದೊಡ್ಡ ಜ್ವರ ಬಂತು. ಮಲೇರಿಯಾ ಇರಬೇಕು. ನೆನಪಾಗುತ್ತಿಲ್ಲ. ಮೊದಲೇ ಕೆಂಪಾಗಿದ್ದ ಆತನ ಕಣ್ಣುಗಳು ಕೆಂಡದ ಉಂಡೆಯಾದವು. ಊರಿಗೆ ಹೋಗುತ್ತೇನೆಂದು ಗೋಗರೆಯತೊಡಗಿದ. ಇಷ್ಟು ಜ್ವರ ಬಂದಾಗಲೂ ಇಲ್ಲಿ ಉಳಿಸಿಕೊಳ್ಳುವುದು ಸರಿಕಾಣಲಿಲ್ಲ. ಹೋಗಿ ಬಾ ಎಂದೆವು. ಊರಿಗೆ ಹೋಗಲು ಕೈಯಲ್ಲಿ ಕಾಸೂ ಆತನಲ್ಲಿರಲಿಲ್ಲ. ಕೊನೆಗೆ ಟಿಕೇಟಿಗೆ ಒಂದಿಷ್ಟು ಹಣವನ್ನು ಜೇಬಿಗೆ ತುರುಕಿ ಕಳಿಸಿಕೊಟ್ಟೆವು; ಆತ ಹಿಂದಿರುಗಿ ಬರಬಹುದು ಎಂಬ ಕ್ಷೀಣ ಆಸೆಯಿಂದ.

ಹಾರಿಹೋದವ ಮರಳಿ ಬರಲೇ ಇಲ್ಲ. ನಗರ ಜೀವನಕ್ಕೆ ಒಗ್ಗಿಕೊಳ್ಳಲಾಗದೆ ಆತ ಸೋತ ಎಂದು ಬಹಳಷ್ಟು ಸಾರಿ ಅನ್ನಿಸುತ್ತದೆ. ಆದರೆ ಇಲ್ಲಿದ್ದು ಇಲ್ಲಿಯವರ ಮಧ್ಯೆ ಸಂಪೂರ್ಣ ಕೆಡುವುದಕ್ಕಿಂತ ಆತ ವಾಪಸ್ ಹೋಗಿ ಒಳ್ಳೆಯ ಕೆಲಸ ಮಾಡಿದ ಎಂದು ಒಮ್ಮೊಮ್ಮೆ ನಾನೇ ಸಮಾಧಾನ ಮಾಡಿಕೊಳ್ಳುತ್ತೇನೆ. ಕೆಂಪು ಬಣ್ಣದ ‘ಬೋಳೆ’ ಕಣ್ಣಿನ ಗಂಗಾಧರ ಯಾವಾಗಲೂ ನೆನಪಾಗುತ್ತಾನೆ…

‍ಲೇಖಕರು admin

August 30, 2016

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಪ್ರೀತಿಸುವವರು ನೋಡಿ ಕಲಿಯಬೇಕಾದದ್ದು ರೋಮಿಯೋ ಜುಲಿಯಟ್ಟರನ್ನಲ್ಲ..

ಪ್ರಸಾದ್ ಶೆಣೈ ಆರ್ ಕೆ ನಾವು ಎಲ್ಲರಂತೆ ಬದುಕದೇ ನಮ್ಮದೇ ಹೊಸತೊಂದು ದಾರಿಯನ್ನು ಕಂಡುಕೊಳ್ಳಬೇಕು ಅಂತ ಹೊರಟವರು. ಪ್ರೀತಿ ಮಾಡಿದರೂ ಯಾವ ಮಿಸ್...

ನನ್ನ ಮಾತು ನಿಂತು ಹೋಗಿತ್ತು..

ಅವನು ಹೇಳುತ್ತಲೇ ಇದ್ದ.. ಸುಚಿತ್ ಕೋಟ್ಯಾನ್ ಕುರ್ಕಾಲು  'ನೀನು ಹಾಗಾದ್ರೆ ನನ್ನ ಮದುವೆಯಾಗುದಿಲ್ಲ ಅಲ್ಲಾ... ಆಗುದಿಲ್ಲ ಅಲ್ಲ.........'...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This