ಮಗುವನ್ನು ಹಾಸ್ಟೆಲ್‌ಗೆ ಬಿಟ್ಟುಬಂದ ತಾಯಿಯಂತೆ…

ಎಂ ಜಿ ರಜನಿ
ಕನ್ನಡ ಬ್ಲಾಗರ್ಸ್
talaguppa
ಶಿವಮೊಗ್ಗದಲ್ಲಿ ಇಕ್ಬಾಲ್ ಅಹಮದ್ ಎಂಬ ರೈಲ್ವೆ ಮೆಕಾನಿಕ್‌ಗೆ ಶಿವಮೊಗ್ಗ-ತಾಳಗುಪ್ಪ ಮಾರ್ಗದ ಪುಟಾಣಿ ರೈಲೆಂದರೆ ಅದೇನೋ ಅಕ್ಕರೆ.( ಅದೆಷ್ಟು ಪುಟಾಣಿ ಎಂದರೆ ಕೇವಲ 52 ಸೀಟಿನದು. ಅದಕ್ಕೆ ಟ್ರೈನ್ ಕಾರ್ ಎಂದೇ ಕರೆಯುವುದು.) ಹೊರಗಡೆ ಆಟವಾಡಿ ಗಾಯ ಮಾಡಿಕೊಂಡು ಬಂದ ಪುಟ್ಟ ಮಗುವನ್ನು ಸುಶ್ರೂಷೆ ಮಾಡುವಂತೆ ಆ ರೈಲನ್ನು ಆರೈಕೆ ಮಾಡುತ್ತಿದ್ದರು. ತಾವಿಲ್ಲದಿದ್ದಾಗ ಇತರ ಕೆಲಸಗಾರರು ಕುಡಿದು ಗಾಡಿಯನ್ನು ಮುಟ್ಟಿದರೆ ಇವರು ಕಿಡಿಕಿಡಿ. ಅದೇ ಆತಂಕದಲ್ಲಿ ಕೆಲಸಕ್ಕೆ ಎಂದೂ ರಜೆ ತೆಗೆದುಕೊಳ್ಳುತ್ತಿರಲಿಲ್ಲ. ಅದರ ಚಾಲಕನಿಗೂ ಇವರದೇ ತರಬೇತಿ. ಒಮ್ಮೆ ಅನಂತಪುರದ ಬಳಿ ೧೫ ದಿನಗಟ್ಟಲೇ ಕೆಟ್ಟುನಿಂತಾಗ, ಗಾಡಿ ಬಿಟ್ಟಿರಲಾರದೇ ಹಳಿ ಸರಿ ಇಲ್ಲದಿದ್ದರೂ ಸಾಹಸ ಮಾಡಿ ಶಿವಮೊಗ್ಗಕ್ಕೆ ತಂದಿದ್ದಿದೆ. ಆದರೆ ಇತ್ತೀಚೆಗೆ ತಾಳಗುಪ್ಪ ಮಾರ್ಗ ಬ್ರಾಡ್‌ಗೇಜ್‌ಗೆ ಬದಲಾಗುತ್ತಿದ್ದಂತೆ ಈ ರೈಲು ಮ್ಯೂಸಿಯಂ ಸೇರಿತು. ಮಗುವನ್ನು ಹಾಸ್ಟೆಲ್‌ಗೆ ಬಿಟ್ಟುಬಂದ ತಾಯಿಯಂತೆ ಇವರು ಕೊರಗಿದರು. ಈಗಲೂ ವಾರಕೊಮ್ಮೆಯೋ, ಹದಿನೈದು ದಿನಕ್ಕೊಮ್ಮೆಯೋ ನಂಜನಗೂಡಿನಲ್ಲಿರುವ ರೈಲ್ವೇ ಮ್ಯೂಸಿಯಂಗೆ ಗಾಡಿಯನ್ನು ನೋಡಲೆಂದೇ ಹೋಗುತ್ತಾರೆ. ಸ್ವಲ್ಪ ದೂರ ಚಲಾಯಿಸಿ, ಸರಿಯಾಗಿದೆ ಎಂದು ಸ್ಪಷ್ಟಪಡಿಸಿಕೊಂಡು ಮರಳುತ್ತಾರೆ, ಮತ್ತೆ ಅಲ್ಲಿಗೆ ಹೋಗುವ ದಿನಾಂಕ ನಿಗದಿ ಪಡಿಸಿಕೊಂಡೇ.
ಮೊನ್ನೆ ಮೇ ಒಂದರಂದು ನಾನು ರಜೆಯ ವಿರಾಮದಲ್ಲಿ ಮನೆಯಲ್ಲಿದ್ದೆ. ಟಿವಿಯಲ್ಲಿ ಕಾರ್ಮಿಕ ದಿನಾಚರಣೆ, ಶೋಷಣೆ, ಬಡತನ ಎಂದೇನೋ ಬರುತ್ತಿತ್ತು. ನಾನು ಜಯಂತ್ ಕಾಯ್ಕಿಣಿಯವರ ಕಥಾ ಸಂಕಲನದಲ್ಲಿ ಮುಳುಗಿದ್ದೆ. ಅದರ ಕಥೆಯೊಂದರಲ್ಲಿ ನಾಯಕ ತನ್ನ ಟ್ರಕ್ಕಿನೊಂದಿಗೆ ಅಂಥ ಭಾವನಾತ್ಮಕ ಸಂಬಂಧ ಇಟ್ಟುಕೊಂಡ ಪ್ರಸಂಗವಿದೆ. ಅಲ್ಲಿ ಟ್ರಕ್ ಅವನ ಗೆಳೆಯ, ಪ್ರೇಯಸಿ, ತುಂಟ ಮಗು, ಕಷ್ಟಕಾಲದಲ್ಲಿ ಗಂಭೀರವಾಗಿ ಸಮಾಧಾನಿಸಬಲ್ಲ ಹಿರಿಯ. ಕೂಡಲೇ ನನಗೆ ಇಕ್ಬಾಲರೂ, ಆ ಟ್ರೈನ್‌ಕಾರೂ ನೆನಪಾಯಿತು.
ಯಂತ್ರದೊಂದಿಗೆ ಕೆಲಸ ಮಾಡುತ್ತಾ ಮಾಡುತ್ತಾ ಮನುಷ್ಯನೂ ಯಂತ್ರದಂತಾಗುತ್ತಾನೆ ಎನ್ನುವುದು ಒಂದು ಸಾಮಾನ್ಯ ಅಭಿಪ್ರಾಯ. ಚಾರ್ಲಿ ಚಾಪ್ಲಿನಂಥ ಮಹಾನ್ ಪ್ರತಿಭಾವಂತರು, ಚಿಂತಕರು ಹಲವು ರೀತಿಯಲ್ಲಿ ಆ ಭಯವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಮನುಷ್ಯನ ಭಾವನಾ ಲೋಕ ಎಷ್ಟು ವಿಚಿತ್ರವೆಂದರೆ ಅಂಥ ಯಂತ್ರದೊಂದಿಗೂ ತನ್ನ ಸಂಬಂಧವನ್ನು ಸೃಷ್ಟಿಸಿಕೊಳ್ಳಬಲ್ಲದು. ತನ್ನ ಸಂವೇದನೆಯನ್ನೂ ರೂಪಿಸಿಕೊಳ್ಳಬಲ್ಲದು. ಬಹುಶ: ಮನುಷ್ಯರ ಜತೆಗಿದ್ದೂ ಇದ್ದೂ ಯಂತ್ರವೂ ಮನುಷ್ಯನಂತಾಗಿಬಿಟ್ಟಿರುತ್ತದೆಯೇನೋ, ಮನಸುಳ್ಳವರ ಪಾಲಿಗೆ!

‍ಲೇಖಕರು avadhi

May 5, 2009

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಫಾರುಕ್ ಮತ್ತೆ ಸಿಕ್ಕಿದ

ಫಾರುಕ್ ಮತ್ತೆ ಸಿಕ್ಕಿದ

ಗಜಾನನ ಮಹಾಲೆ ಸ್ನೇಹವೆಂಬ ವಿಸ್ಮಯ ಸ್ನೇಹ ವ್ಯಕ್ತಿಗಳಿಬ್ಬರ ನಡುವೆ ಹೇಗೆ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಒಮ್ಮೊಮ್ಮೆ ಆಲೋಚಿಸಿದರೆ...

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಡಾ. ಬಿ. ಜನಾರ್ಧನ್‌ ಭಟ್  ಮುಂಬಯಿಯ ಕನ್ನಡ ಸಾಹಿತ್ಯ ಲೋಕದ ಜತೆಗೆ ನನಗೆ ನಿಕಟ ಬಾಂಧವ್ಯ ಇರುವುದರಿಂದ ಅದರ ವೈಶಿಷ್ಟ್ಯವನ್ನು ಗ್ರಹಿಸಿ...

2 ಪ್ರತಿಕ್ರಿಯೆಗಳು

 1. Rajani

  ಅವಧಿಯಲ್ಲಿ ನನ್ನ ಲೇಖನವನ್ನು ಆಕಸ್ಮಿಕವಾಗಿ ನೋಡಿದೆ. ಆಶ್ಚರ್ಯವಾಯಿತು!
  ಧನ್ಯವಾದಗಳು

  ಪ್ರತಿಕ್ರಿಯೆ
 2. vinod

  ನನ್ನ ಹೆಸರು ವಿನೋದ್
  ಈ ಸಂದೇಶ ತುಂಬಾ ಚೆನ್ನಾಗಿದೆ. ನನಗೆ ಇದನ್ನು ಓದಿ ತುಂಬಾ ಸಂತೋಷವಾಯಿತು.
  ನಾನು ಇದರ ಬಗ್ಗೆ ಮತ್ತು ಈ ರೀತಿಯ ರೈಲಿನ ಮಾಲೀಕರ ಬಗ್ಗೆ ಕಲ್ಪನೆಯನ್ನು ಸಹ ಮಾಡಿಕೊಂಡಿರಲಿಲ್ಲ.
  ಏಕೆಂದರೆ ಸಾಮಾನ್ಯವಾಗಿ ನನಗೆ ತಿಳಿದಂತೆ ರೈಲೆಂದರೆ ಸಾವಿರಾರು ಜನರು ಓಡಾಡುವ ವಾಹನವಲ್ಲವೇ ಮತ್ತು ಅದು ಇಂದಿಗೂ ದೇಶದ ಪ್ರಮುಖವಾದ ಜನತೆ ಆಸ್ತಿಯಿದ್ದಂತೆ ಅಲ್ಲವೇ ?
  ಧನ್ಯವಾದಗಳು
  ಇಂತಿ ನಿಮ್ಮ ಗೆಳಯ
  ವಿನೋದ್

  ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: