ವಾಟಾಳ್ ನಾಗರಾಜ್…ಹೊಯ್ತಾರಂತೆ !

cartoon_72

ವಾಟಾಳ್ ನಾಗರಾಜರ ಹೊಸ ಸಾಹಸದ ಬಗ್ಗೆ ಯಾರಾದರೂ ಬರೆದಿರಬಹುದೇ ಎಂದು ಗೊತ್ತಿರುವ ಬ್ಲಾಗ್ ಗಳನ್ನೆಲ್ಲಾ ಜಾಲಾಡಿದೆ. ಕಾಣಿಸಲಿಲ್ಲ. ’ಬೊಗಳೆ-ರಗಳೆ’ಯಲ್ಲಾದರೂ ಕಾಣಿಸಿಕೊಳ್ಳಬಹುದೆಂದು ಭಾವಿಸಿದ್ದೆ. ಅಲ್ಲೂ ಇರಲಿಲ್ಲ. ಹಾಗಾಗಿ ಈ ಕಾಯಕಕ್ಕೆ ಕೈ ಹಾಕುತ್ತಿದ್ದೇನೆ.

ವಿಷಯ ಏನಪ್ಪಾ ಅಂದ್ರೆ, ನಿನ್ನೆ ಇದ್ದಕ್ಕಿದ್ದಂತೆ ನಮ್ಮ ಕನ್ನಡದ ಉಟ್ಟು ಓರಾಟಗಾರ, ಪ್ರತಿಭಟನೆಗಳ ಸರದಾರ ವಾಟಾಳ್ ನಾಗರಾಜ್ ಪತ್ರಿಕಾ ಗೋಷ್ಟಿ ಕರೆದಿದ್ದರು. ಅಲ್ಲಿ ಅವರು ಹೇಳಿದ್ದು; ಸರಕಾರವು ರಾಜ್ಯಾದ್ಯಂತ ಸರ್ವಾಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು. ಡಿಸೆ.ಬರ ಅಂತ್ಯದೊಳಗಾಗಿ ಸರಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು. ಇಲ್ಲವಾದರೆ ತಾವು ರಾಜಭವನದ ಎದುರು ’ಉಚ್ಚೆ ಹೊಯ್ಯುವ ಚಳುವಳಿ’ ನಡೆಸುವುದಾಗಿ ಹೇಳಿದರು. ಮುಂದೆ ಈ ಚಳುವಳಿಯನ್ನು ಹಂತ ಹಂತವಾಗಿ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಲೋಕಸಭಾ ಸದಸ್ಯರು ಹಾಗು ಐಎ ಎಸ್ ಅಧಿಕಾರಿಗಳ ನಿವಸಕ್ಕೂ ವಿಸ್ತರಿಸುವುದಾಗಿಯೂ ಸ್ಪಷ್ಟಪಡಿಸಿದರು

ಸಂಪೂರ್ಣ ಓದಿಗೆ ಭೇಟಿ ಕೊಡಿ- ಮೌನ ಕಣಿವೆ 

+++

ಪತ್ರಕರ್ತನ ಪತ್ರಕತೆ

suresh-k2

ಸುರೇಶ್‌ ಕೆ `ಉದಯವಾಣಿ’ಯ ಸಹೋದ್ಯೋಗಿ. ಶುಕ್ರವಾರದ `ಸುಚಿತ್ರ’ ಸಿನಿಪುರವಣಿಯನ್ನು ನಿರ್ವಹಿಸುವವರು. ಅಂದವಾದ ಮುಖಪುಟ ರೂಪಿಸುವಲ್ಲಿ, ವಿಶೇಷವಾಗಿ ಪುರವಣಿಗಳಿಗೆ ಅಂದ, ಆಕಾರವನ್ನು ನೀಡುವಲ್ಲಿ ನುರಿತಿರುವ ಲೇಔಟ್‌ ತಜ್ಞ. ಸಿನಿಮಾಗಳನ್ನು ಖಚಿತವಾಗಿ ವಿಮರ್ಶಿಸಬಲ್ಲ, ಮೊನಚಾಗಿ ಬರೆಯಬಲ್ಲ, ಯಾವುದೇ ಕಲೆಯನ್ನು ಸುಲಭವಾಗಿ ಗ್ರಹಿಸಿ, ಬರವಣಿಗೆಗೆ ಇಳಿಸಬಲ್ಲವರು ಸುರೇಶ್‌.
ಆದರೆ ಕತೆ, ಕವಿತೆಗಳ ಬರವಣಿಗೆಗೆ ಈವರೆಗೂ ತೊಡಗದೇ ಇದ್ದ ಸುರೇಶ್‌ ಅಚಾನಕ್‌ ಒಂದು ಕತೆ ಬರೆದು ಅಚ್ಚರಿ ಮೂಡಿಸಿದ್ದಾರೆ. ಕತೆಯ ಹೆಸರು: ಕಾಗದ ಬಂದಿದೆ. ಅಂತರ್ದೇಶಿ ಪತ್ರಗಳ ಸಂಭ್ರಮದ ದಿನಗಳಲ್ಲೇ ಹುಟ್ಟಿ ಬೆಳೆದು ಬಂದ ಸುರೇಶ್‌, `ಕಾಗದ ಬಂದಿದೆ’ ಕತೆಯ ಮೂಲಕ ಸಂಬಂಧಕ್ಕಿರುವ ಅನೇಕ ಸೂಕ್ಷ್ಮಗಳನ್ನು ಹೇಳಲು ಪ್ರಯತ್ನಿಸಿದ್ದಾರೆ. ನಾವು `ಕಳ್ಳಕುಳ್ಳ’ ಬ್ಲಾಗ್‌ನಲ್ಲಿ ಈಗಷ್ಟೇ ಪ್ರಾರಂಭಿಸಿರುವ `ತಿಳಿಯ ಹೇಳುವೆ ಇಷ್ಟಕತೆಯನು’ ಮಾಲಿಕೆಯಲ್ಲಿ `ಕಾಗದ’ ಕತೆಯನ್ನು ಪ್ರಕಟಿಸುತ್ತಿದ್ದೇವೆ. ಓದಿ.

ಸಂಪೂರ್ಣ ಓದಿಗೆ ಭೇಟಿ ಕೊಡಿ- ಕಳ್ಳ ಕುಳ್ಳ  

‍ಲೇಖಕರು avadhi

November 26, 2008

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ನಿರುತ್ತರದ ಉತ್ತರ, ರಾಜೇಶ್ವರಿ ತೇಜಸ್ವಿ

ಕಲೀಮ್ ಉಲ್ಲಾ ತೇಜಸ್ವಿಯವರ ಸ್ಕೂಟರ್ ಚಳಿಗೆ ದುಪ್ಪಟ್ಟಿ ಹೊಚ್ಚಿಟ್ಟಂತೆ ಅದನ್ನೊಂದು ಕಪ್ಪು ಪ್ಲಾಸ್ಟಿಕ್ ನಿಂದ ಮುಚ್ಚಿಡಲಾಗಿತ್ತು. ತಕ್ಷಣ ಏನೋ...

ಅಂಬೇಡ್ಕರ್ ಇಲ್ಲಿದ್ದಾರೆ..

ಅಂಬೇಡ್ಕರ್ ಅವರ ಬರಹಗಳ ಎಲ್ಲಾ ಸಂಪುಟವನ್ನು ಉಚಿತವಾಗಿ ಕನಡದ ಓದುಗರಿಗೆ ಸಿಗಲಿದೆ. ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಈಗಾಗಲೇ ೫ ಸಂಪುಟಗಳನ್ನು...

’ಧರ್ಮ ನಿರಪೇಕ್ಷತೆ, ಕೋಮುವಾದ ಮತ್ತು ನಮ್ಮೆದುರಿನ ಸವಾಲುಗಳು’ – ಶಶಿಧರ ಭಟ್

ಶಶಿಧರ ಭಟ್ ಕುಮ್ರಿ ಧರ್ಮ ನಿರಪೇಕ್ಷತೆ ಮತ್ತು ಕೋಮುವಾದ ಎಂಬ ಶಬ್ದ ನನ್ನ ಕಿವಿಗೆ ಬಿದ್ದುದು ಯಾವಾಗ ಎಂಬ ಪ್ರಶ್ನೆಗೆ ನನ್ನ ಬಳಿ ಸರಳ...

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This