ಸಂಸಾರ ಶರಧಿಯಲ್ಲಿರಬೇಕು ಕಂಪರ್ಟ್ ಝೋನ್ ಗಳು – ಉಷಾ ಕಟ್ಟೇಮನೆ

ಸಂಸಾರ ಶರಧಿಯಲ್ಲಿರಬೇಕು ಕಂಪರ್ಟ್ ಝೋನ್ ಗಳು  

– ಉಷಾ ಕಟ್ಟೇಮನೆ

ಮೌನ ಕಣಿವೆ

ಸಂಸಾರ ಶರಧಿ ಎಂಬ ಪದವನ್ನು ನೋಡಿದಾಗ ನನಗೆ ತಟ್ಟನೆ ನೆನಪಾಗಿದ್ದು, ನನ್ನ ಹೈಸ್ಕೂಲ್ ದಿನಗಳಲ್ಲಿ ನಮ್ಮ ಸಮಾಜ ಪಾಠದ ಮುತ್ತಪ್ಪ ಮೇಸ್ಟ್ರು ಆಗಾಗ ಹೇಳುತ್ತಿದ್ದ ಮಾತುಗಳು;”ಸಾಧಿಸಿದರೆ ಸಬಳವನ್ನೂ ನುಂಗಬಹುದು’ ನಿಜ. ಸಾಧನೆಯ ಛಲ ಇದ್ದರೆ ಸಬಳವನ್ನೂ ಅಂದರೆ ಸಮುದ್ರವನ್ನೂ ನುಂಗಬಹುದು. ಅಸಾಧ್ಯವಾದುದನ್ನು ತಮ್ಮ ಹಿಡಿತಕ್ಕೆ ತರಬಹುದು. ಸಬಳದ ಸಂವಾದಿ ಪದವೇ ಶರಧಿ. ಇದರ ಆಳ-ಅಗಲಗಳನ್ನು ಅರಿತವರಿಲ್ಲ. ಆದರೆ ಕಡಲಿನಲೆಗಳ ಲಯ, ಮಿಡಿತಗಳನ್ನು ಅರಿತವರಿಗೆ ಅದರಲ್ಲಿ ಈಜುವುದೊಂದು ಮೋಜಿನಾಟ. ಆಟ, ಆಡಾಡುತ್ತಲೇ ಅದು ಕಲೆಯಾಗಿ ಕರಗತವಾಗುತ್ತದೆ.   ಸಂಸಾರ ಶರಧಿಯಲ್ಲಿ ಹುಟ್ಟು ಹಾಕುತ್ತಿರುವವರು ಗಂಡು ಹೆಣ್ಣು ಇಬ್ಬರಾದರೂ ಅದರಲ್ಲಿ ಹೆಣ್ಣಿನ ಹೊಣೆಗಾರಿಕೆ ಹೆಚ್ಚು. ಯಾಕೆಂದರೆ ಸಂಸಾರವನ್ನು ಕಟ್ಟಿಕೊಂಡವಳು ಅವಳು. ಅಲೆಮಾರಿಯಾಗಿದ್ದ ಗಂಡನ್ನು ಕೃಷೀಯ ಕೈಂಕರ್ಯಕ್ಕೆ ಹಚ್ಚಿ, ಮನೆಯೆಂಬ ಪರಿಕಲ್ಪನೆಯನ್ನು ಹುಟ್ಟು ಹಾಕಿ, ಸಂಸಾರ ನೌಕೆಯನ್ನು ಕಟ್ಟಿದಾಕೆ ಅವಳು. ಅವಳ ಕರ್ತೃತ್ವ ಮತ್ತು ಧೀ ಶಕ್ತಿಗೆ ಬೆಚ್ಚಿ ಅವಳನ್ನು ಚೌಕಟ್ಟುಗಳಲ್ಲಿ ಬಂಧಿಸಿ ತನ್ನ ಆಳ್ತತನದಲ್ಲಿ ಅದುಮಿಟ್ಟುಕೊಂಡವನು ಗಂಡು. ಆದರೂ….’ನಾ ನಿಲ್ಲುವಳಲ್ಲಾ….’ ಎಂದು ಹರಿಯುತ್ತಲೇ ಇರುವಾಕೆ ಹೆಣ್ಣು. ಸೃಷ್ಟಿಸುತ್ತಾ..ಪೊರೆಯುತ್ತಾ..ಎಲ್ಲವನ್ನೂ ಸ್ವೀಕರಿಸುತ್ತಾ..ತನ್ನೊಳಗೆ ಜೀರ್ಣಿಸಿಕೊಳ್ಳತ್ತಾ ಹೋಗುವ ಮಹಿಳೆ…ಸ್ವತಃ ತನಗೆ ತಾನೇ ಒಂದು ವಿಸ್ಮಯ.   ಈಗೀಗ ನಮ್ಮ ಹೆಣ್ಮಕ್ಕಳು, ಗಂಡು ಹುಡುಗರು ಕೂಡಾ ಈ ಸಂಸಾರ ಶರಧಿಯನ್ನು ಈಜುವ ಗೊಡವೆಯೇ ಬೇಡಪ್ಪಾ ಎಂದು ದೂರ ಓಡಿ ಹೋಗುವುದನ್ನು ನಾನು ಗಮನಿಸುತ್ತಿದ್ದೇನೆ. ಇದೊಂದು ಥರಾ ಪಲಾಯನ ಎನ್ನಬಹುದೇನೋ. ಯಾಕೆಂದರೆ ಹಾಗೆ ಓಡಿ ಹೋಗುವುದರಿಂದ ಆ ಒಂದು ಅನುಭವದಿಂದ ಅವರು ವಂಚಿತರಾದಂತೆ. ‘ಈಸಬೇಕು ಇದ್ದು ಜೈಸಬೇಕು’. ಅದನ್ನೊಂದು ಮೋಜಿನಾಟ ಎಂದು ಭಾವಿಸುತ್ತಾ….ಇದರ ಹುಟ್ಟು ನಾನು ಹಾಕಲಾರೆನಪ್ಪಾ ಎಂದು ಕೈ ಸೋತು ಹೋದರೆ ಅದರಿಂದ ಹೊರಬರಲು ಹಲವಾರು ದಾರಿಗಳಿವೆಯಲ್ಲಾ… ಹಾಗೆ ಹೊರ ಬರುವ ದಾರಿ ಕೂಡಾ ನಮ್ಮ ವಿವೇಚನೆಗೆ ಸಂಬಂಧಪಟ್ಟುದು.   ”ಈ ಸಂಸಾರವನ್ನು ನಾನು ಹೇಗೆ ನಿಬಾಯಿಸಲಿ?’ ಎಂಬ ಭಾವನೆಯೇ ಬಾರವಾದುದು. ನಾನು ನಿಬಾಯಿಸಬಲ್ಲೆ; ನಿಬಾಯಿಸ್ತಾ ಇದ್ದೇನೆ ಎಂದು ಪದೇ ಪದೇ ನಮ್ಮೊಳಗೆ ಹೇಳಿಕೊಂಡರೆ, ಸಂಸಾರ ನೌಕೆ ತಾನಾಗಿಯೇ ಮುಂದೆ ಸಾಗುತ್ತಿರುತ್ತದೆ.   ಹಿಂದೆಲ್ಲಾ ಈ ಸಂಸಾರ ಶರಧಿ, ಸಂಸಾರ ನೌಕೆ, ಅದನ್ನು ನಿಭಾಯಿಸುವುದು ಎಂಬುದಕ್ಕೆಲ್ಲಾ ಅರ್ಥ ಇತ್ತು. ಈಗ ಸಂಸಾರ ಶರಧಿಯಲ್ಲಿ ಪ್ರತಿಯೊಬ್ಬರೂ ನಡುಗಡ್ಡೆಗಳನ್ನು ನಿರ್ಮಿಸಿಕೊಂಡಿದ್ದಾರೆ, ಅವರವರ ಅಭಿರುಚಿಗನುಗುಣವಾಗಿ, ಅದು ಸಾಹಿತ್ಯ, ಸಂಗೀತ, ಚಿತ್ರಕಲೆ, ಸಮಾಜ ಸೇವೆ,ಗಾರ್ಡನಿಂಗ್, ಅಡುಗೆ..ಯಾವುದೇ ಇರಬಹುದು ಮೈ ಮತ್ತು ಮನಸ್ಸು ಒಂದಾಗಿ ತೊಡಗಿಸಿಕೊಳ್ಳಲು ಅವಕಾಶವಿರುವ ಇವು ಅವರ ಕಂಪರ್ಟ್ ವಲಯಗಳು. ತಮಗೆ ಸ್ವಾತಂತ್ರ್ಯ ಮತ್ತು ಏಕಾಂತ ಬೇಕೆಂದಾಗ ಅವರು ಆ ನಡುಗಡ್ಡೆಯನ್ನು ಹೊಕ್ಕುಬಿಡುತ್ತಾರೆ. ಅಲ್ಲಿಂದ ಅವರು ಎನರ್ಜಿಯನ್ನು ತುಂಬಿಕೊಂಡು ಬರುವ ಪ್ರಯತ್ನ ಮಾಡುತ್ತಾರೆ. ಲಿಂಗ ಬೇಧವಿಲ್ಲದೆ, ವಯಸ್ಸಿನ ತಾರತಮ್ಯವಿಲ್ಲದೆ ಎಲ್ಲರಿಗೂ ಈ ಕಂಪರ್ಟ್ ಝೋನ್ ಬೇಕು. ಅಲ್ಲಿ ಅವರು ತಮಗೆ ಬೇಕಾದ ರಾಧೆಯನ್ನೋ, ಮಾಧವನನ್ನೋ, ಚೆನ್ನಮಲ್ಲಿಕಾರ್ಜುನನ್ನೋ ಹುಡುಕಿಕೊಳ್ಳಬಹುದು. ಕೇವಲ ನಗರ ಕೇಂದ್ರಿತ, ವಿದ್ಯಾವಂತ ಜನರನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾತಾಡುತ್ತಿದ್ದೀರಾ ಎಂದು ನೀವಂದುಕೊಳ್ಳಬಹುದು. ಇಲ್ಲಾ, ಗ್ರಾಮೀಣ ಪ್ರದೇಶದ ಜನರಿಗೂ ಇಂತಹ ಕಂಪರ್ಟ್ ವಲಯಗಳಿರುತ್ತವೆ. ಗಂಡಸರಿಗೆ ಅವರವರದೇ ಚ್ಟಟಗಳಿರುತ್ತವೆ ವ್ಯಸನಗಳಿರುತ್ತವೆ. ಗಂಡಸರ ಈ ಕಂಪರ್ಟ್ ವಲಯಗಳು ಸಂಸಾರ ನೌಕೆ ಅಲ್ಲಾಡಲು ಕಾರಣವಾಗಬಹುದು. ಆಗ ಹೆಂಗಸರು ತಮ್ಮ ಕಂಪರ್ಟ್ ವಲಯಗಳ ಮೊರೆ ಹೋಗುತ್ತಾರೆ.ಅವರ ಸಾಕು ಪ್ರಾಣಿಗಳು, ಕೈಯಾರೆ ನೆಟ್ಟು ಬೆಳೆಸಿದ ಗಿಡ, ಮರ ಸಸಿಗಳು; ಮಕ್ಕಳು , ಮೊಮ್ಮಕ್ಕಳು ಇವುಗಳ ಆರೈಕೆಯಲ್ಲಿ ಧೈನಿಕದ ಕ್ಷುದ್ರತೆಗಳನ್ನು ಮರೆಯಲೆತ್ನಿಸುತ್ತಾರೆ. ಜಾತ್ರೆ, ಉತ್ಸವ, ಮದುವೆ-ಮುಂಜಿಗಳಲ್ಲಿ ಭಾಗವಹಿಸುತ್ತಾ ಬದುಕನ್ನು ಸಹನೀಯಗೊಳಿಸಿಕೊಳ್ಳುತ್ತಾರೆ. ಗ್ರಾಮೀಣ ಪ್ರದೇಶದ ಪುರುಷರಿಗೆ ”ಬಂಧುತ್ವ’ ಮತ್ತು ಹೆಣ್ಣುಮಕ್ಕಳಿಗೆ”ತವರು ಮನೆ’ಯೆಂಬುದು ಬಹುದೊಡ್ಡ ಕಂಪರ್ಟ್ ವಲಯ. ನಗರ ಪ್ರದೇಶದ ಮಹಿಳೆಯರಿಗೆ ಮತ್ತು ಪುರುಷರಿಗೆ ಗೆಳೆತನವೇ ಕಂಪರ್ಟ್ ವಲಯ- ಇಲ್ಲಿಯೇ ಅವರ ಅಂತರಂಗ ಬಹಿರಂಗವಾಗುವುದು.   ಮುಖ್ಯವಾಗಿ ಸಂಸಾರವನ್ನು ಶರಧಿಗೆ ಹೊಲಿಸಿಕೊಳ್ಳಲೇ ಬಾರದು. ಸಮುದ್ರ ಅಂದರೆ ಅಗಾಧ, ನಿಗೂಢ, ಅದರ ಮುಂದೆ ತಾವು ಅಲ್ಪರು ಎಂಬ ಭಾವನೆ ಬಂದುಬಿಡುತ್ತದೆ. ಸಾಗರದಲ್ಲಿ ನೀರು ಎಷ್ಟಿದ್ದರೇನು? ಕುಡಿಯಲು ಒಂದು ತೊಟ್ಟು ಜೀವ ಜಲವೂ ಸಿಗಲಾರದು. ಹಾಗಾಗಿ ಅದನ್ನು ನದಿ ಅಥವಾ ತೊರೆ ಎಂದು ಅಂದುಕೊಂಡರೆ ಅದನ್ನು ಈಜುವ, ದಾಟುವ ದೈರ್ಯ ತಮ್ಮೊಳಗೆ ತಾವೇ ತುಂಬಿಕೊಳ್ಳಬಹುದು.   ಸಂಸಾರವೆಂಬ ನದಿಯಲ್ಲಿ ಪರಸ್ಪರ ನಂಬಿಕೆಯೆಂಬ ದೋಣಿಯಲ್ಲಿ ಸಂಗಾತಿಯೊಡನೆ ಕುಳಿತು ’ದೋಣಿ ಸಾಗಲಿ ಮುಂದೆ ಹೋಗಲಿ’ ಎಂದು ಹಾಡ್ತಾ ಇದ್ದರೆ ದಡ ತಲುಪಿದ್ದೇ ಗೊತ್ತಾಗುವುದಿಲ್ಲ. ದೋಣಿ ತೂತಾಯ್ತು ಎನ್ನಿ, ಒಳಬರುವ ನೀರನ್ನು ಎತ್ತಿ ಹೊರ ಚೆಲ್ಲುತ್ತಿದ್ದರಾಯು. ದೋಣಿ ಮುಳುಗುವ ಸಂದರ್ಭ ಬಂದರೆ ಈಜಿ ದಡ ಸೇರಿದರಾಯ್ತು. ಹಾಗೆ ದಡ ಸೇರುವ ದೈರ್ಯವನ್ನು ನಾವು ಒಳಗಿಂದೊಳಗೆ ಆಗಾಗ ತುಂಬಿಕೊಳ್ತಾ ಇರಬೇಕು. ಅದಕ್ಕೆ ಹಿಂದೆ ಹೇಳಿದ ಕಂಪರ್ಟ್ ವಲಯಗಳು ಒತ್ತಾಸೆಯಾಗಿ ನಿಲ್ಲುತ್ತವೆ.   ಅದಕ್ಕೆ ನಮ್ಮ ಹನಿಗವಿ ಡುಂಡಿರಾಜ್ ಹೇಳಿರುವುದು’ ನದಿ ದಾಟಲು ತೆಪ್ಪ ಇರಬೇಕು, ಸಂಸಾರ ಶರದಿ ದಾಟಲು ತೆಪ್ಪಗಿರಬೇಕು’ ಬಹಳಷ್ಟು ಸಂದರ್ಭಗಳಲ್ಲಿಮಾತಿಗೆ ಮಾತು ಬೆಳೆದು ಸಂಸಾರ ಬೀದಿ ಪಾಲಾಗುತ್ತದೆ. ಹಾಗಾಗಿ ಮಾತೆಲ್ಲವೂ ಅಂತರಂಗದಲ್ಲಿ ನಡೆಯುತ್ತಿರಬೇಕು. ಆಗಾಗ ಕಂಪರ್ಟ್ ವಲಯಗಳಿಗೆ ಭೇಟಿನೀಡುತ್ತಿರಬೇಕು ಆಗ ತೆಪ್ಪ ನಡೆಸುವುದು ಸುಲಭ. ನೋಡುಗರಿಗೂ ಅಲೆಗಳ ಬೆಳ್ನೊರೆಯಾಟ ಮುದವನ್ನು ಕೊಡುತ್ತದೆ. ಶರಧಿಯೊಳಗಿನ ವಡವಾಗ್ನಿ ಯಾರಿಗೂ ಗೊತ್ತಾಗದು.  ]]>

‍ಲೇಖಕರು G

February 13, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಫಾರುಕ್ ಮತ್ತೆ ಸಿಕ್ಕಿದ

ಫಾರುಕ್ ಮತ್ತೆ ಸಿಕ್ಕಿದ

ಗಜಾನನ ಮಹಾಲೆ ಸ್ನೇಹವೆಂಬ ವಿಸ್ಮಯ ಸ್ನೇಹ ವ್ಯಕ್ತಿಗಳಿಬ್ಬರ ನಡುವೆ ಹೇಗೆ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಒಮ್ಮೊಮ್ಮೆ ಆಲೋಚಿಸಿದರೆ...

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಮುಂಬಯಿಯ ಕನ್ನಡ ಸಾಹಿತ್ಯ ಲೋಕ

ಡಾ. ಬಿ. ಜನಾರ್ಧನ್‌ ಭಟ್  ಮುಂಬಯಿಯ ಕನ್ನಡ ಸಾಹಿತ್ಯ ಲೋಕದ ಜತೆಗೆ ನನಗೆ ನಿಕಟ ಬಾಂಧವ್ಯ ಇರುವುದರಿಂದ ಅದರ ವೈಶಿಷ್ಟ್ಯವನ್ನು ಗ್ರಹಿಸಿ...

5 ಪ್ರತಿಕ್ರಿಯೆಗಳು

 1. D.RAVI VARMA

  ಇದು ಮದ್ಯಮವರ್ಗದ ಗೋಳು. teera ಸಾಮಾನ್ಯದ ಜನರಿಗೆ ನಿಮ್ಮ ಸ್ಪೋಟ್ಸ್ ಗಳ ಬಗ್ಗೆ ಅವರಿಗೆ ಅರಿವಿರುತ್ತದೆ. ರ್ರೀ ಮೇಡಂ ನಿಮ್ಮ comfort zone ಬಗ್ಗೆ ನಿಮ್ಮ ಅಮ್ಮನಿಗೋ,ಅಪ್ಪನಿಗೋ ಕೇಳಿನೋಡಿ,ಅವರಿಗೆ ಆ ಪಕ್ಕದ ಮನೆಯವರೋ, ಇಲ್ಲವೇ ಓಣಿಯ ಹಿರಿಯರೋ, ಅದು ಇಲ್ಲದಿದ್ರೆ ಗುಡಿಯ ,ಮಜಿದಿಯ ಪೂಜಾರಿ, ಫಾಕಿರ್ರೋ ಅವರೇ ಅವರ ಸಂಕಟ ನಿವಾರನಕರಾಗಿರುತ್ತಾರೆ, ನಿಜಕ್ಕೂ ನಿಮ್ಮ ಲೇಖನಗಳ ಬಗ್ಗೆ ನನಗೆ ಹೊಟ್ಟೆಕಿಚ್ಚು, ಒಂದು ಕಾಲದಲ್ಲಿ ನೀವು ಮಂಗಳ ದಿಂದ ಹಿಡಿದು ಹಲವಾರ್ ಪತ್ರಿಕೆಗೆ ಬರೆದಿದ್ದೆರಿ,ನಾನು ಅಸ್ತೆ , ಅದೇಕೋ ನನಗೆ ನನಗೆ ಬರಹ ಸದ್ಯವಾಗುತ್ತಿಲ್ಲ, ಬಟ್ ನಿಮ್ಮ ಬರಹಗಳಲ್ಲಿ ಒಂದು ಜೀವಂತಿಕೆ ಇದೆ,ಬಟ್ ನೀವು ಆಯ್ಕೆ ಮಾಡಿಕೊಳ್ಳುವ ವಿಷ್ಯ,ಅದನ್ನು ಪ್ರೆಸೆಂಟ್ maaduva reeti ನಿಜಕ್ಕೂ ಅಪ್ಯಾಯಮಾನ ,ಇ ಲೈಕ್ ಇಟ್ ಕೀಪ್ ಇಟ್ ಅಪ್
  ರವಿ ವರ್ಮ ಹೊಸಪೇಟೆ

  ಪ್ರತಿಕ್ರಿಯೆ
 2. Prof V Narayana Swamy

  ಸಂಸಾರವೆಂಬ ನದಿಯಲ್ಲಿ ಪರಸ್ಪರ ನಂಬಿಕೆಯೆಂಬ ದೋಣಿಯಲ್ಲಿ ಸಂಗಾತಿಯೊಡನೆ ಕುಳಿತು ’ದೋಣಿ ಸಾಗಲಿ ಮುಂದೆ ಹೋಗಲಿ’ ಎಂದು ಹಾಡ್ತಾ ಇದ್ದರೆ ದಡ ತಲುಪಿದ್ದೇ ಗೊತ್ತಾಗುವುದಿಲ್ಲ. ದೋಣಿ ತೂತಾಯ್ತು ಎನ್ನಿ, ಒಳಬರುವ ನೀರನ್ನು ಎತ್ತಿ ಹೊರ ಚೆಲ್ಲುತ್ತಿದ್ದರಾಯು. ದೋಣಿ ಮುಳುಗುವ ಸಂದರ್ಭ ಬಂದರೆ ಈಜಿ ದಡ ಸೇರಿದರಾಯ್ತು. ಹಾಗೆ ದಡ ಸೇರುವ ದೈರ್ಯವನ್ನು ನಾವು ಒಳಗಿಂದೊಳಗೆ ಆಗಾಗ ತುಂಬಿಕೊಳ್ತಾ ಇರಬೇಕು. ಅದಕ್ಕೆ ಹಿಂದೆ ಹೇಳಿದ ಕಂಪರ್ಟ್ ವಲಯಗಳು ಒತ್ತಾಸೆಯಾಗಿ ನಿಲ್ಲುತ್ತವೆ.
  Golden words coming from experienced and respectful sister
  May God bless you my sister

  ಪ್ರತಿಕ್ರಿಯೆ
 3. ಉಷಾಕಟ್ಟೆಮನೆ

  ಶರಧಿ,ಎಲ್ಲಿ ತಪ್ಪಿಸಿಕೊಂಡಿದ್ದಿಯೋ ಇಷ್ಟು ದಿನ..? ಸಧ್ಯ ಈಗಾಲಾದರೂ ಬಂದೆಯಲ್ಲಾ..ಅದೂ ವ್ಯಾಲೆಂಟೈನ್ ಡೇ ಯ ಮುನ್ನಾ ದಿನ..ಧನ್ಯೋಸ್ಮಿ ಗೆಳೆಯನೇ..!?
  ರವಿವರ್ಮರೇ, ನಿಮ್ಮ ಕಂಪರ್ಟ್ ಝೋನ್ ಎಲ್ಲೋ ಎಡವಟ್ಟಾಗಿದೆ. ಹಾಗಾಗಿ ನಿಮಗೆ ನನ್ನ ಹಾಗೆ ಬರೆಯಲಾಗುತ್ತಿಲ್ಲ.ಸ್ವಲ್ಪ ಆ ಕಡೆ ಈ ಕಡೆ ಕಣ್ಣು ಹಾಯಿಸಿ ನೋಡಿ! ಮತ್ತೊಂದು ಗುಟ್ಟು ನಾನು ಮಂಗಳ ಪತ್ರಿಕೆಗೆ ಇದುವರೆಗೂ ಏನನ್ನೂ ಬರೆದಿಲ್ಲ. ಆದರೆ ನಿಮ್ಮ ಹೆಸರಿನವರೇ ಯಾರೋ ತಮ್ಮ ಮುದ್ದಾದ ಕೈ ಬರಹದಲ್ಲಿ ಹೋಸಪೇಟೆಯಿಂದ ನಮ್ಮ ಮನ್ವಂತರ ಪತ್ರಿಕೆಗೆ ಬರಹಗಳನ್ನು ಕಳುಹಿಸುತ್ತಿದ್ದುದು ನೆನಪಿದೆ. ಅವರು ನೀವು ತಾನೆ?
  ನಾರಾಯಣ ಸ್ವಾಮಿಯವರೇ ನಿಮ್ಮ ಮೆಚ್ಚುಗೆಗೆ ಧನ್ಯವಾದಗಳು
  ಉಷಾಕಟ್ಟೆಮನೆ

  ಪ್ರತಿಕ್ರಿಯೆ
 4. D.RAVI VARMA

  ಹೌದು ಮೇಡಂ, ಊರಿಗೆ ಒಬ್ಬೆ ಹನುಮಪ್ಪ ಅನ್ನೋ ಹಾಗೆ ಸದ್ಯಕ್ಕಂತೂ ಈ ಹೊಸ್ಪೆಟ್ಗೆ ಒಬ್ಬನೇ ರವಿ ವರ್ಮ .ಸಾರೀ ಬಹಳ ಹಿಂದಿನನೆನಪು ,ಆಗ ಮನ್ವಂತರಕ್ಕೆ ಬರೆಯುತ್ತಿದ್ದದು ಕೂಡ ನಿಜ. ವಂದನೆಗಳು

  ಪ್ರತಿಕ್ರಿಯೆ

ಇದಕ್ಕೆ ಪ್ರತಿಕ್ರಿಯೆ ನೀಡಿ Prof V Narayana SwamyCancel reply

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: