ಹೋಗೇ ಸುಮ್ಮನೆ!

ಪ್ರೇಮಿಗಳಿಗೆ ಪ್ರತಿ ದಿನವೂ ಪ್ರೇಮಿಗಳ ದಿನವೇ. ಪ್ರತಿ ದಿನವೂ ಪ್ರೀತಿಸೋಣ. ಆ ನೆಪದಲ್ಲಿ ಇಲ್ಲಿದೆ  ‘ಅಪಾರ’ ಅವರ ಒಂದು ಸುಂದರ ಕವಿತೆ. ಇದು ನಿಮ್ಮದೇ ಎಂದು ಹೇಳಿಕೊಂಡು ಪ್ರೆಸೆಂಟ್ ಮಾಡಲು ಅಡ್ಡಿಯಿಲ್ಲ..

72489.jpg

ಹೋಗೇ ಸುಮ್ಮನೆ!

1
ಮಧ್ಯಾಹ್ನವ ಕಳೆಯುತಿದ್ದ
ಉದ್ಯಾನದ ಬೆಂಚು
ಮಳೆಯ ರಾತ್ರಿ ಹೊಳೆಯುತಿದ್ದ
ಒದ್ದೆ ಮುಖದ ಮಿಂಚು
ಒಬ್ಬರಿಗೆ ಇನ್ನೊಬ್ಬರು
ಕಾದು ಕೆಂಪಾದ ತಿರುವು
ಕಾಡಿದರೂ ಇರಲಿ ನೆನಪು
ಬೇಡ ಜಾಣ ಮರೆವು
ನಿನ್ನ ನೆನಪಲೆ ಕೊರಗುತಿರುವೆ
ಎನುವರೆಲ್ಲ ಜನ
ನಿನ್ನ ನೆನೆದೇ ಬದುಕುತಿರುವೆ
ಅರಿಯರೆನ್ನ ಮನ
2
ಶುಭಾಶಯ ಕೋರುವ ಹೆಸರಲ್ಲಿ
ಮೃದು ಅಂಗೈಯ ಮುಟ್ಟಿದೆ
ಸುಣ್ಣ ಆಗಿದೆ ಎಂದು ಸುಳ್ಳು ಹೇಳಿ
ಬೆನ್ನನೊಮ್ಮೆ ಮುಟ್ಟಿದೆ
ರಸ್ತೆ ದಾಟುವಾಗ ‘ಎಚ್ಚರ’ ಎಂದು
ತೋಳು ಮುಟ್ಟಿ ಕಂಪಿಸಿದೆ
ಯಾವ ನೆಪವೂ ಇಲ್ಲದೆ ತಬ್ಬಿ
ಮನವ ಮುಟ್ಟುವ ಹಂಬಲ ಮಾತ್ರ
ಉಳಿದೇ ಹೋಯ್ತು

3
ನಿನ್ನ ಕರೆಗೆ ಹಾಡುತ್ತಿತ್ತು
ನಿನ್ನ ಕೋಪಕೆ ಕಂಪಿಸುತ್ತಿತ್ತು
ಮುದ್ದು ಮಾಡಿದರೆ ಬಿಸಿಯಾಗುತಿತ್ತು
ಈಗ ಕ್ರೆಡಿಟ್‌ ಕಾರ್ಡಿನವರ ಕಾಟಕ್ಕೆ
ಕಂಗೆಟ್ಟಿದೆ ನನ್ನ ಮೊಬೈಲು
ನಿನ್ನ ನಂಬರು ಚಾಲ್ತಿಯಲ್ಲಿಲ್ಲ

4
ನೀನು ತೊರೆದು ಹೋದ ಮೇಲೆ
ನಾನು ಗಡ್ಡ ಬಿಟ್ಟಿಲ್ಲ, ಕುಡಿವುದ ಕಲಿತಿಲ್ಲ
ಕೆಲಸಕ್ಕೆ ಹೋಗುವುದನ್ನೂ ಬಿಟ್ಟಿಲ್ಲ
ನಿನ್ನ ನೆನಪಲ್ಲಿ ಕಣ್ಣೀರು ಸುರಿಸುತಿಲ್ಲ
ಈ ಪದ್ಯ ಬರೆಯುವಾಗಲೂ ಕಂಪಿಸುತಿಲ್ಲ
ಹೇಳು, ನಿನಗೆ ಖುಷಿಯಾಯಿತೆ?

‍ಲೇಖಕರು avadhi

February 13, 2008

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಮಗಳು ಪೃಥೆ

ಮಗಳು ಪೃಥೆ

ಸುನೀತಾ ಬೆಟ್ಕೇರೂರ್ ಇವಳು ನಮ್ಮ ಮಗಳು,ಪೃಥೆ.ಕಂಕುಳಲ್ಲಿದ್ದಳು,ನೆಲಕಿಳಿದಳುಬೆರಳನ್ಹಿಡಿದು ಹೆಜ್ಜೆಯಿಟ್ಟಳುಈಗೋ------ ಈಗೋಅನ್ನುವಲ್ಲಿ...

ಕುರ್ಚಿ

ಕುರ್ಚಿ

ಮುರುಳಿ ಹತ್ವಾರ ತಣ್ಣಗೆ ಕುಳಿತಿತ್ತು ಆ ನಾಲ್ಕು ಕಾಲಿನ ಕುರ್ಚಿ:ಏಸಿ ರೂಮಿನೊಳಗೆ, ಮಾರ್ಬಲ್ಲು ಹಾಸಿನ ಮೇಲೆ.  ಒಂದಿಷ್ಟೂ ಬಿಸಿಯಾಗಲಿಲ್ಲ...

ಮಾತು ಮುಗಿದೇ ಇಲ್ಲ ಇನ್ನು

ಮಾತು ಮುಗಿದೇ ಇಲ್ಲ ಇನ್ನು

ಡೋ‌ರ ಮಾತು ಮುಗಿದೇ ಇಲ್ಲ ಇನ್ನುಮರೆತು ಎದ್ದು ಹೋದೆಯಾ...?ಹರಸಿ ನಡೆದೆ ಬಿಟ್ಟೆಯಾಕಾಣದೂರಿನ ದಾರಿ ಹಿಡಿದುನನ್ನ ಹೀಗೆ ಯಾಕೊ ತೊರೆದುಹುಡಕಲೇಗೆ...

2 ಪ್ರತಿಕ್ರಿಯೆಗಳು

 1. malathi S

  Very apt. We dont need Saint Valentines Day to remember Love. Good one Apara. Keep it coming…
  🙂

  Malathi S

  ಪ್ರತಿಕ್ರಿಯೆ
 2. ಬಶೀರ್ ಕೊಡಗು

  ಮೊದಲ ಬಾರಿ ಈ ತಾಣಕ್ಕೆ ಭೇಟಿ ನೀಡುತ್ತಿದ್ದೇನೆ.
  ಬಹಳ ಚೆನ್ನಾಗಿದೆ.

  ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: