‘ಋಷ್ಯಶೃಂಗ’ ಕಾರ್ನರ್

ಇನ್ನು ಮುಂದೆ ಆಗಾಗ ಋಷ್ಯಶೃಂಗ

ವ್ಯಸನ
tailo

ನಮ್ಮೂರಲ್ಲೊಬ್ಬ ಟೈಲರ್ ಇದ್ದ. ಬೀರಣ್ಣ, ಬೀರಪ್ಪ ಅಂತೆಲ್ಲ ಅವನಿಗೆ ಅನೇಕ ಹೆಸರು. ಬೀರ ಅಂತ ಅಪ್ಪ ಇಟ್ಟ ಹೆಸರಿರಬೇಕು. ಯಾರ ಜೊತೆಗೂ ಮಾತಾಡುತ್ತಿರಲಿಲ್ಲ. ತನ್ನ ಪಾಡಿಗೆ ಬಟ್ಟೆ ಹೊಲಿಯುತ್ತಿದ್ದ. ಅಳತೆ ತೆಗೆದು, ಒಂದಿಷ್ಟೂ ಅಳತೆ ವ್ಯತ್ಯಾಸವಾಗದೆ ಬಟ್ಟೆ ಹೊಲಿಯುವುದರಲ್ಲಿ ಅವನು ಹೆಸರುಗಾರ.
ಶರ್ಟು, ಪ್ಯಾಂಟು, ಚೂಡಿದಾರ, ರವಕೆ, ಲಂಗ- ಎಲ್ಲವನ್ನೂ ಹೊಲಿದು ಕೊಡುತ್ತಿದ್ದನಾದರೂ ಕ್ರಮೇಣ ಪ್ರಸಿದ್ಧವಾದದ್ದು ಅವನು ಹೊಲಿದುಕೊಡುತ್ತಿದ್ದ ಚಡ್ಡಿ. ಕೊನೆಕೊನೆಗೆ ಚಡ್ಡಿ ಹೊಲಿಸಿಕೊಂಡರೆ ಬೀರಪ್ಪನ ಹತ್ತಿರವೇ ಹೊಲಿಸಿಕೊಳ್ಳಬೇಕು ಅಂತ ಜನ ಮಾತಾಡಿಕೊಳ್ಳತೊಡಗಿದರು.
ಚಡ್ಡಿ ಹೊಲಿದೂ ಹೊಲಿದೂ ಅಭ್ಯಾಸವಾಯಿತೋ, ಮನಸ್ಸಿಗೆ ಬರೀ ಚಡ್ಡಿಯನ್ನಷ್ಟೇ ಹೊಲೀಬೇಕು ಅನ್ನಿಸಿತೋ ಅಥವಾ ಚಡ್ಡಿ ಹೊಲಿಯುವುದೇ ಒಂದು ವ್ಯಸನವಾಯಿತೋ ಏನೋ. ಆಮೇಲಾಮೇಲೆ ಶರ್ಟು ಬಟ್ಟೆ, ರವಕೆ ಬಟ್ಟೆ, ಪ್ಯಾಂಟು ಪೀಸು ಒಯ್ದು ಕೊಟ್ಟರೂ ಬೀರಪ್ಪ ಅದರಲ್ಲಿ ಚಡ್ಡಿ ಹೊಲಿದುಕೊಡುತ್ತಿದ್ದ. ಜನ ಬೈದರು, ಬುದ್ಧಿ ಹೇಳಿದರು, ತಿದ್ದಲು ನೋಡಿದರು. ರೇಗಿದರು.
ಬೀರಪ್ಪ ಬದಲಾಗಲಿಲ್ಲ.
ಇತ್ತೀಚೆಗೆ ಚಡ್ಡಿ ಹೊಲಿಸಬೇಕಾದವರು ಮಾತ್ರ ಬೀರಪ್ಪನ ಬಳಿಗೆ ಬರುತ್ತಾರಂತೆ.
ಏನೇ ಆದ್ರೂ ಚಡ್ಡಿ ಮಾತ್ರ ಸಕತ್ತಾಗೇ ಹೊಲೀತಾನೆ ಬಿಡ್ರೀ ಅಂತ ನಮ್ಮೂರ ಜನ ಗುಂಪು ಸೇರಿದಲ್ಲೆಲ್ಲ, ಚಡ್ಡಿ ಮಾತು ಬಂದಾಗಲೆಲ್ಲ ಬೀರಪ್ಪನನ್ನು ಕೊಂಡಾಡುವುದಿದೆ.ಬೀರಪ್ಪನೂ ಅದರಿಂದಲೇ ಸಂತೋಷ ಹೊಂದಿದನವಂತೆ ಕೇವಲ ಚಡ್ಡಿ ಹೊಲಿಯುವುದಕ್ಕೇ ತನ್ನ ಪ್ರತಿಭೆಯನ್ನು ಸೀಮಿತಗೊಳಿಸಿಕೊಂಡು ಬಿಟ್ಟಿದ್ದಾನೆ.

‍ಲೇಖಕರು avadhi

November 25, 2008

1

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ...

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

- ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು...

3 ಪ್ರತಿಕ್ರಿಯೆಗಳು

 1. ಗುರು ಬಾಳಿಗ

  >> “ಆಮೇಲಾಮೇಲೆ ಶರ್ಟು ಬಟ್ಟೆ, ರವಕೆ ಬಟ್ಟೆ, ಪ್ಯಾಂಟು ಪೀಸು ಒಯ್ದು ಕೊಟ್ಟರೂ ಬೀರಪ್ಪ ಅದರಲ್ಲಿ ಚಡ್ಡಿ ಹೊಲಿದುಕೊಡುತ್ತಿದ್ದ.”
  ಭಯಾನಕ! 🙂

  ಪ್ರತಿಕ್ರಿಯೆ
 2. M G Harish

  ಯಾವುದರಲ್ಲಿ ಮನಸ್ಸು ಜಾಸ್ತಿ ತೊಡಗಿಕೊಂಡಿರುತ್ತೋ ಅದರಲ್ಲೇ ಮಗ್ನವಾಗಿಬಿಡುತ್ತೆ ಅನ್ನೋದನ್ನ ಸರಳ-ಸುಂದರವಾಗಿ ಕಥೆಯಲ್ಲಿ ಬರೆದಿದ್ದೀರಿ…

  ಪ್ರತಿಕ್ರಿಯೆ

ಇದಕ್ಕೆ ಪ್ರತಿಕ್ರಿಯೆ ನೀಡಿ ಗುರು ಬಾಳಿಗCancel reply

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: